ಕಲಬುರಗಿ| ಪ್ರವಾಹದಿಂದ ಹಾನಿಯಾದ ಸಂತ್ರಸ್ತರಿಗೆ ಪರಿಹಾರ, ಬಸ್ ಸಂಚಾರ ಆರಂಭಕ್ಕೆ ಭೀಮಾಶಂಕರ ಮಾಡ್ಯಾಳ ಆಗ್ರಹ

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳನ್ನು ದುರಸ್ತಿಗೊಳಿಸಿ, ಹಾನಿಗೊಳಗಾದ ರೈತ ಮತ್ತು ಗ್ರಾಮಸ್ಥರಿಗೆ ಪರಿಹಾರ ಘೋಷಣೆ ಮಾಡಬೇಕು, ಕೂಡಲೇ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡ್ಯಾಳ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆಳಂದ ತಾಲ್ಲೂಕಿನ ನಿಂಬರ್ಗಾ, ಹಿತ್ತಲಶಿರೂರು, ಮಾಡ್ಯಾಳ್, ಯಳಸಂಗಿ, ಹಡಲಗಿ, ನಿಂಬಾಳ, ದುಧನಿ, ಧಂಗಾಪುರ, ಬಟ್ಟರಗಾ, ಕುಡಕಿ ಸೇರಿದಂತೆ 25 ಗ್ರಾಮಗಳಿಗೆ ಕಳೆದ ನಾಲ್ಕು ದಿನಗಳಿಂದ ಬಸ್ ಸೇವೆಗಳು ಸ್ಥಗಿತಗೊಂಡಿವೆ. ಕೂಡಲೇ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಲಬುರಗಿ ನಗರದ ಶಾಲಾ ಕಾಲೇಜುಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ತರಕಾರಿಗಳು ಮತ್ತು ಆಹಾರ ಧಾನ್ಯಗಳನ್ನು ಸಾಗಿಸುವ ರೈತರು ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿರುವ ರೋಗಿಗಳು ತೀವ್ರ ತೊಂದರೆಯನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಮಾಡಿಯಾಳ ಗ್ರಾಮದಲ್ಲಿ ಕೆರೆ ಒಡೆದು ನೂರಾರು ಮನೆಗಳು ಮತ್ತು ಹೊಲಗಳನ್ನು ಮುಳುಗಿಸಿ ರೈತರಿಗೆ ಭಾರಿ ನಷ್ಟವನ್ನುಂಟುಮಾಡಿದೆ. ಸಂತ್ರಸ್ತ ಕುಟುಂಬಕ್ಕೆ ₹20,000 ಪರಿಹಾರವನ್ನು ನೀಡಬೇಕು ಮತ್ತು ಕೆರೆಯ ತಕ್ಷಣದ ಪುನರ್ನಿರ್ಮಾಣವನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ರಸ್ತೆ ಮೂಲಸೌಕರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕಳೆದ ಎರಡು ವರ್ಷಗಳಿಂದ ಹೊಸ ರಸ್ತೆಯ ಹಿತ್ತಲ್ ಶಿರೂರ್-ನಿಂಬರ್ಗಾ ರಸ್ತೆಯ ಅಪೂರ್ಣವಾಗಿಯೇ ಉಳಿದಿದೆ, ಕೇವಲ ಜಲ್ಲಿಕಲ್ಲು ಮಾತ್ರ ಹಾಕಲಾಗಿದೆ. ಆದರೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...