ಕಲಬುರಗಿ: 2025-26ನೇ ಸಾಲಿಗೆ ವಿಶ್ವಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದ್ದು, ಇದರ ಪೂರ್ವಸಿದ್ಧತೆ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ.) ದಿಂದ “ಕರ್ನಾಟಕ ರಾಜ್ಯ ಕೌಶಲ್ಯ ಓಲಂಪಿಕ್ಸ್ ಸ್ಪರ್ಧಾ” ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 30 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆoದು ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿ ನಾಗುಬಾಯಿ ಸೂರ್ಯವಂಶಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಯುವಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಓಲಂಪಿಕ್ಸ್
ಸ್ಪರ್ಧಾ ಕಾರ್ಯಕ್ರಮವನ್ನು ಕೈಗೊಳ್ಳಲು ಯೋಜಿಸಲಾಗಿದೆ. ವಿವಿಧ ವಿಭಾಗಗಳಲ್ಲಿ 63 ಕೌಶಲ್ಯಗಳಲ್ಲಿ ಯಾವುದೇ ಬೇಕರಿ, ಪ್ಲಂಬಿoಗ್‌ಯಿoದ ಸೈಬರ್ ಸೆಕ್ಯೂರಿಟಿ, ಕ್ಲೌಡ್ ಕಂಪ್ಯೂಟಿoಗ್‌ಗಳಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಭಾಗವಹಿಸಬಹುದಾಗಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾದ ಯುವಜನತೆಯ ಕೌಶಲ್ಯವನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಶ್ವಕೌಶಲ್ಯ ಸ್ಪರ್ಧೆಗಳಲ್ಲಿ ಪ್ರತಿನಿಧಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಅಗತ್ಯ ತರಬೇತಿ ನೀಡಲಾಗುತ್ತದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು www.skillindiadigital.gov.in ವೆಬ್‌ಪೋರ್ಟಲ್‌ನಲ್ಲಿ 2025ರ ಸೆಪ್ಟೆಂಬರ್ 30ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ವಿಶ್ವ ಕೌಶಲ್ಯ ಸ್ಪರ್ಧೇಯಲ್ಲಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಭಾಗವಹಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ (ಸ್ಪರ್ಧೆಯ ವಿವರವುಳ್ಳ) ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಿದರು.


