ಕಲಬುರಗಿ| ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ

Date:

Share post:

ಕಲಬುರಗಿ: ಇಲ್ಲಿನ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆಯ “ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗುಲ್ಬರ್ಗಾ ವಿಶ್ವ ವಿಧ್ಯಾಲಯದ ಕುಲಸಚಿವರಾದ ಡಾ.ರಮೇಶ ಲಂಡನ್ಕರ್ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ಕೊಟ್ಟರು.

ಬಳಿಕ ಮಾತನಾಡಿದ ಅವರು, ಎನ್ ಎಸ್ ಎಸ್ ಶಿಬಿರಾರ್ಥಿಗಳು ದೇಶದ ಆಸ್ತಿ ಮತ್ತು ನವ ಭಾರತ ನಿರ್ಮಾಣ ಮಾಡುವ ಶಕ್ತಿ ಇವರಲ್ಲಿ ಇದೆ ಎಂದು ಹೇಳಿದರು.

ಅದೇ ರೀತಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ಆರ್.ಬಿ ಕೊಂಡ ಮಾತನಾಡಿ, ಎನ್ ಎಸ್ ಎಸ್ ನಿಂದ ವಿದ್ಯಾರ್ಥಿ ದೆಸೆಯಿಂದಲ್ಲೇ ಶಿಸ್ತು, ಮತ್ತು ರಾಷ್ಟ್ರೀಯ ಅಭಿಮಾನ, ಗೌರವ ಮಕ್ಕಳಲ್ಲಿ ಬೆಳೆಸುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮ ಕ್ಕೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ವೀಣಾ ಎಚ್. ಅವರು ವೇದಿಕೆ ಹಂಚಿಕೊಂಡರು.

ಎನ್ ಎಸ್ ಎಸ್ “B” ಘಟಕದ ಅಧಿಕಾರಿಗಳಾದ ಡಾ.ಸುಭಾಶ್ಚಂದ್ರ ದೊಡ್ಡಮನಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿಯಿತು.

ಡಾ.ಶ್ರೀದೇವಿ ಸಿದ್ದಣ್ಣ, ಎನ್ ಎಸ್ ಎಸ್ ಸ್ವಯಂ ನಿಧಿ ಘಟಕದ ಅಧಿಕಾರಿಗಳಾದ ಮಂಗಲ ಬಿರಾದಾರ, ಡಾ. ವಿಶ್ವನಾಥ ದೇವರಮನಿ, ಡಾ. ಜ್ಯೋತಿ ಪ್ರಕಾಶ್, ಡಾ. ರಾಜೇಶ, ಶರಣಪ್ಪ. ಮುಸ್ತಳ್ಳಿ, ಸುಷ್ಮಾ ಕುಲಕರ್ಣಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಮತ್ತು ವಿಧ್ಯಾರ್ಥಿನಿಯರು ಭಾಗವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...