ಕಲಬುರಗಿ| “ಸ್ವಚ್ಛತಾ ಹಿ ಸೇವಾ ಹೈ” ಕಾರ್ಯಕ್ರಮಕ್ಕೆ ಸಿಇಒ ಭಂವರಸಿಂಗ್ ಮೀನಾ ಚಾಲನೆ

Date:

Share post:

ಕಲಬುರಗಿ : ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮ ಪಂಚಾಯತಿ   ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ  “ಸ್ವಚ್ಛತಾ ಹಿ ಸೇವಾ ಹೈ”, “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್” ಎಂಬ ಘೋಷವಾಕ್ಯದಡಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ರವರು ಸ್ವಚ್ಛತಾಗಾರರಿಗೆ ಸ್ವಚ್ಛತಾ ಕಿಟ್, ಸಮವಸ್ತ್ರ, ಗಮ್ಬೂಟು, ಹ್ಯಾಂಡಗ್ಲೋಸ್, ಮಾಸ್ಕ್ ಸ್ವಚ್ಛತೆ ಮಾಡಲು ಬೇಕಾಗುವ ಸಾಮಗ್ರಿಗಳನ್ನು ವಿತರಣೆ ಮಾಡುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಚಾಲನೆ ನೀಡಿದರು.

 

ನಂತರ, ಮಾತನಾಡಿದ ಅವರು ಪ್ರತಿ ಮನೆಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಡಿಕೊಂಡು ಪರಿಸರದ ಬಗ್ಗೆ ಜವಾಬ್ದಾರಿಯನ್ನು ಹೊಂದಿರಬೇಕು, ಪ್ರಸ್ತುತ ಕಲಬುರಗಿ ಜಿಲ್ಲೆಯ 261 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸ್ವಚ್ಛ ಸಂಕಿರ್ಣಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಇಲ್ಲಿ ಸ್ವಚ್ಛತಗಾರರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.

 

 ಶ್ರಮದಾನ  ಕಾರ್ಯಕ್ರಮದಲ್ಲಿ ಜಗದೇವ ಬಿ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ ಕಲಬುರಗಿ, ಸೈಯದ ಪಟೇಲ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ ಕಲಬುರಗಿ, ಮಲ್ಲಿನಾಥ ಕಿವುಡೆ, ಅಧ್ಯಕ್ಷರು ಅವರಾದ (ಬಿ), ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಿವಾರಾಜ ಗ್ರಾಮ ಪಂಚಾಯತಿ ಸದಸ್ಯರು, ಬಂಡೆಪ್ಪ ಧನ್ನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ ಮಿಷನ್ ಯೋಜನೆಯ ಜಿಲ್ಲಾ ಸಂಯೋಜಕರಾದ ಶ್ರೀಮತಿ ಗುರುಬಾಯಿ ಪಾಟೀಲ್ & ಪಾಪರೆಡ್ಡಿ ರವರು ಹಾಗೂ ತಾಲ್ಲೂಕ ಐ.ಇ.ಸಿ ಸಂಯೋಜಕರಾದ ಮೋಸಿನಖಾನ ರವರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಮೊದಲಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಜಗದೇವ ಬಿ. ರವರು ಪ್ರತಿಜ್ಞಾವಿಧಿಯನ್ನು ಘೋಷಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...