ಕಲಬುರಗಿ| ಮೂರು ಹೊಸದಾಗಿ ಕಲ್ಲು ಗಣಿಗಾರಿಕೆಗೆ ಲೈಸೆನ್ಸ್ ನೀಡಲು ಒಪ್ಪಿಗೆ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಸಪೂರ ತಾಲೂಕಿನಲ್ಲಿ ತಲಾ ಒಂದರಂರೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿದೆ.

ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು ಕಾಳಗಿ ತಾಲೂಕಿನ ಹುಲುಸಗೂಡನಲ್ಲಿ ಸವಳು ಮಣ್ಣು ರಫ್ತು(ಫುಲರ್ಸ್) ಗಣಿಗಾರಿಕೆ ನಡೆಸಲು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು-1994ರಂತೆ ಟಾಸ್ಕ್ ಪೋರ್ಸ್ ಸಮಿತಿ ಒಪ್ಪಿಗೆ ಸೂಚಿಸಿದೆ.

ಇದೇ‌ ಸಂದರ್ಭದಲ್ಲಿ ನಡೆದ ಜಿಲ್ಲಾ ಕಲ್ಲು ಪುಡಿ ಘಟಕ ನಿಯಂತ್ರಣ ಸಮಿತಿ ಸಭೆಯಲ್ಲಿ ಕಾಳಗಿ ಮತ್ತು ಕಲಬುರಗಿ ತಾಲೂಕಿನಲ್ಲಿ ತಲಾ ಒಂದು ಕ್ರಶರ್ ಯೂನಿಟ್ ಘಟಕ ಕಾರ್ಯಾರಂಭಕ್ಕೂ ಫಾರ್ಮ್-ಸಿ ಪರವಾನಿಗೆ ನೀಡಲು ಸಭೆ ಅನುಮೋದನೆ ನೀಡಿದೆ.

ಅಕ್ರಮ ಗಣಿಗಾರಿಕೆ,53.31 ಲಕ್ಷ‌ ರೂ. ದಂಡ:

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ ಮಾತನಾಡಿ, ಪ್ರಸಕ್ತ 2025-26ನೇ ಸಾಲಿನಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡಿಕೊಂಡಿದಕ್ಕಾಗಿ 139 ಪ್ರಕರಣಗಳಲ್ಲಿ 53.31 ಲಕ್ಷ‌ ರೂ. ದಂಡ‌ ವಿಧಿಸಿದೆ. ಇದರಲ್ಲಿ 81 ಎಫ್.ಐ.ಆರ್ ದಾಖಲಿಸಿದ್ದು, 6 ಪ್ರಕರಣಗಳಲ್ಲಿ ಇಲಾಖೆಯೆ ಪಿ.ಸಿ.ಆರ್ ವರದಿ ತಯಾರಿಸಿ ಸಂಬಂಧಿಸಿದ ಜೆ.ಎಂ.ಎಫ.ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ನಿಗದಿತ ಮಾರ್ಗದಲ್ಲಿ ಸಾಗಾಣಿಕೆ ಮಾಡದೆ ನಿಯಮಾವಳಿ ಉಲ್ಲಂಘಿಸಿದಕ್ಕಾಗಿ 10 ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಎಸ್.ಪಿ ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪರಿಸರ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...