ಕಲಬುರಗಿ| ವಿ.ಜಿ ವುಮೆನ್ಸ್ ಕಾಲೇಜಿನಲ್ಲಿ ಜ್ಞಾನಸಿರಿ ಮಾಸಿಕ ಪತ್ರಿಕೆ ಬಿಡುಗಡೆ

Date:

Share post:

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಮಾಹಿತಿ ಸಿಗುವುದು ಬಹಳ ಸರಳ ಆದರೆ ಮಾಹಿತಿ ಮತ್ತು ಜ್ಞಾನ ಒಂದೇ ಸೂರಿನಡಿಯಲ್ಲಿ ಸಿಗುವದು ಬಹಳ ಕಠಿಣ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ ಹೇಳಿದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ವಿಸ್ತೀರ್ಣ ಕಟ್ಟಡ ಮತ್ತು ಕಾಲೇಜಿನಿಂದ ಹೊರತಂದಿರುವ ಜ್ಞಾನಸಿರಿ ಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಮುಂದುವರೆದು ಜ್ಞಾನಸಿರಿ ಮಾಸಪತ್ರಿಕೆಯ ನಮಗೆ ನೂತನ ಮಾಹಿತಿ, ಸಂಶೋಧನೆ ಮತ್ತು ವಿದ್ಯಾರ್ಥಿ ಶಿಕ್ಷಕರ ಚಿಂತನೆಗಳನ್ನು ಪ್ರತಿಬಿಂಬಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಬಿ. ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಆಡಳಿತ ಮಂಡಳಿಯ ಸದಸ್ಯರಾದ ಡಾ. ಶರಣಬಸಪ್ಪ ಹರವಾಳ, ಡಾ. ಮಹಾದೇವಪ್ಪ ರಾಂಪುರೆ, ಸಾಯಿನಾಥ್ ಪಾಟೀಲ್, ಕಾಲೇಜಿನ ಸಂಯೋಜಕರಾದ ನಾಗಣ್ಣ ಘಂಟಿ, ನಿಶಾಂತ್ ಎಲಿ, ಡಾ. ಗುರುಲಿಂಗಪ್ಪ ಪಾಟೀಲ್ ಅವರು ಉಪಸ್ಥಿತರಿದ್ದರು.

 

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ ಚವ್ಹಾಣ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಸಂಘದ ಸಲಹೆಗಾರರಾದ ಡಾ ಪರ್ವೀನ್ ರಾಜೇಸಾಬ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...