ಕಲಬುರಗಿ| ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ; ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಕಮೀಷನರ್ ಆದೇಶ

Date:

Share post:

ಕಲಬುರಗಿ: ಪ್ರವಾಹ ಹಾಗೂ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಖಾತೆಗಳ ಸಚಿವರು ನಾಳೆ ಕಲಬುರಗಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಆದೇಶ ಹೊರಡಿಸಿದ್ದಾರೆ.

* ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವಾಗ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಎಸ್.ಬಿ ಪೆಟ್ರೋಲ್ ಪಂಪ್ ವರೆಗೆ ಎಲ್ಲ ಮಾದರಿಯ ಓಡಾಟ ನಿಷೇಧಿಸಲಾಗಿದೆ.

* ಮಾನ್ಯ ಮುಖ್ಯಮಂತ್ರಿಗಳು ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿರುವಾಗ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ವಿಜಯ ವಿದ್ಯಾಲಯ ಕಾಲೇಜು ಹತ್ತಿರವಿರುವ ಚರ್ಚವರೆಗೆ ಎಲ್ಲ ಮಾದರಿಯ ಓಡಾಟ ನಿಷೇದಿಸಲಾಗಿರುತ್ತದೆ.

ಗಣ್ಯ ವ್ಯಕ್ತಿಗಳ ವಾಹನಗಳ ಪಾರ್ಕಿಂಗ ಸ್ಥಳಗಳು:

1) ಮುಖ್ಯಮಂತ್ರಿಗಳ ವಾಹನ, ಸಚಿವರು ಹಾಗೂ ಶಾಸಕರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ವಾಹನಗಳಿಗೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗಧಿಪಡಿಸಲಾಗಿರುತ್ತದೆ.

2) ಮುಖ್ಯಮಂತ್ರಿಗಳ ಸಭೆಗೆ ಆಗಮಿಸುವ ಇನ್ನಿತರ ಅಧಿಕಾರಿಗಳ ವಾಹನಗಳನ್ನು NCC ಹಾಗೂ ಕನ್ನಡ ಭವನದ ಕಛೇರಿಯ ಆವರಣದಲ್ಲಿ ಪಾರ್ಕಿಂಗ್ ಮಾಡುವುದು.

3) ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯವರು ನಾಳೆ ಕುಡಾ (KUDA) ಕಛೇರಿಯ ಆವರಣದಲ್ಲಿ ಪಾರ್ಕಿಂಗ್ ಮಾಡುವುದು.

ಮಾರ್ಗ ಬದಲಾವಣೆಯ ಸ್ಥಳಗಳು:

* ಕೇಂದ್ರ ಬಸ್ ನಿಲ್ದಾಣದಿಂದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದ ಕಡೆಗೆ ಚಲಿಸುವ ವಾಹನಗಳು ರಾಷ್ಟ್ರಪತಿ ವೃತ್ತದಿಂದ ಶರಣಬಸವೇಶ್ವರ ಕಾಲೇಜು ಎದುರುಗಡೆಯಿಂದ ಆನಂದ ಓ.ಪಿ ಮಾರ್ಗವಾಗಿ ಗೋವಾ ಹೋಟೆಲ್ ಕ್ರಾಸ್ ಮೂಲಕ ಸಂಚಾರ ಮಾಡುವುದು.

* ಸೂಪರ್ ಮಾರ್ಕೆಟ್‌ ದಿಂದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತ ಕಡೆಗೆ ಚಲಿಸುವ ವಾಹನಗಳು ಎಸ್.ಬಿ ಪೆಟ್ರೋಲ್ ಮೂಲಕ ಜಿಲ್ಲಾ ನ್ಯಾಯಾಲಯದ (ಕೋರ್ಟ) ಎದುರುಗಡೆಯಿಂದ ನೋಬೆಲ್ ಶಾಲೆ ಮಾರ್ಗವಾಗಿ ಚಲಿಸುವುದು.

* ಸಭೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಸದರಿ ಮಾರ್ಗಗಳನ್ನು ಬಳಸದೇ ಪರ್ಯಾಯ ಮಾರ್ಗಗಳಲ್ಲಿ ಚಲಿಸಲು ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...