ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಪ್ಲಾ ನಾಯಕ್ ತಾಂಡಾದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಭಾರೀ ಪ್ರಮಾಣದ ರಸ್ತೆ ಹಾಗೂ ಬೆಳೆ ಹಾನಿಗೀಡಾಗಿದೆ. ಸರ್ಕಾರ ಕೂಡಲೇ ಪರಿಹಾರ ಕ್ರಮಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.
ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕುಸಿದು ಹೋಗಿದ್ದು, ಸೋಯಾ, ಕಬ್ಬು ಸಂಪೂರ್ಣ ನೆಲಕಚ್ಚಿದೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಕೂಡಲೇ ರಸ್ತೆಯನ್ನು ದುರಸ್ಥಿಗೊಳಿಸಬೇಕು, ಹಾನಿಯಾದ ರೈತರ ಬೆಳೆಗೆ ಪರಿಹಾರ ನೀಡಬೇಕೆಂದು ಸೇನೆಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಚಿಂಚೋಳಿ ತಾಲ್ಲೂಕು ಅಧ್ಯಕ್ಷ ಲಿಂಬಾಜಿ ಚವ್ಹಾಣ್ ಅವರ ನೇತೃತ್ವದಲ್ಲಿ ರಸ್ತೆ ತಡೆದು ಹೋರಾಟ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಂಕರ್ ಪವಾರ್, ಸುಧಾ, ರಮೇಶ್ ಚವ್ಹಾಣ್ ಸೇರಿದಂತೆ 20ಕ್ಕೂ ಹೆಚ್ಚು ಯುವ ಕಾರ್ಯಕರ್ತರು ಭಾಗವಹಿಸಿದ್ದರು.


