ಕಲಬುರಗಿ| ಕನ್ನಡ ಭಾಷೆಯೊಂದಿಗೆ ಹಿಂದಿ ಕಲಿಯುವುದು ಅನಿವಾರ್ಯ: ಡಾ. ಹಡಪದ

Date:

Share post:

ಕಲಬುರಗಿ: ವಿಶ್ವದ ಪ್ರತಿಯೊಂದು ಭಾಷೆಗೂ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆ ಇರುತ್ತದೆ. ಇಂದು ಭಾರತ ದೇಶದ ವಿವಿಧ ಭಾಗಗಳಲ್ಲಿ ಸಂಚರಿಸಲು ನಮಗೆ ಹಿಂದಿ ಸಂಪರ್ಕ ಭಾಷೆಯಾಗಿ ಸಹಕಾರಿಯಾಗುತ್ತದೆ. ನಮ್ಮ ಮಾತೃ ಭಾಷೆಯಾದ ಕನ್ನಡದ ಭಾಷೆಯೊಂದಿಗೆ ಹಿಂದಿ ಭಾಷೆ ಕಲಿಯುವುದು ಅನಿವಾರ್ಯ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಶಿವಕುಮಾರ ಹಡಪದ ಅವರು ಹೇಳಿದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಹಮ್ಮಿಕೊಂಡ ಹಿಂದಿ ದಿವಸ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ ಇಂದು ಹಿಂದಿ ಭಾಷೆಯು ವಿಶ್ವದ ತೃತೀಯ ಅತ್ಯಧಿಕ ಮಾತನಾಡುವ ಭಾಷೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹಿಂದಿ ಭಾಷೆ ತನ್ನದೇ ಆದ ಒಂದು ಸಂಸ್ಕೃತಿ ಮತ್ತು ಪರಂಪರೆ ಹೊಂದಿದೆ ಎಂದು ಹೇಳಿದರು. ಇದು ಕೇವಲ ಒಂದು ಭಾಷೆಯಾಗಿದೆ ಇದು ಒಂದು ಸಂಸ್ಕೃತಿಯಾಗಿದೆ ಎಂದರು.

ಹಿಂದಿ ದಿವಸ ಕಾರ್ಯಕ್ರಮದ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಆ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಪ್ರೇಮಚಂದ ಚವ್ಹಾಣ ಅವರು ಅತಿಥಿ ಗಳಿಗೆ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಷ್ಮಾ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿದರು. ಕವಿತಾ ಠಾಕೂರ್ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಮಹೇಶ್ ಗಂವ್ಹಾರ, ಇತಿಹಾಸ ವಿಭಾಗ ಮುಖ್ಯಸ್ಥರಾದ ಡಾ ಸುಭಾಷಚಂದ್ರ ದೊಡ್ಡಮ್ಮನಿ, ಡಾ. ಜ್ಯೋತಿಪ್ರಕಾಶ್ ದೇಶಮುಖ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ಡಾ ವಿಶ್ವನಾಥ್ ದೇವರಮನಿ, ಡಾ ಮೋಹಸೀನಾ ಫಾತಿಮಾ, ಬಸಮ್ಮ ಗೊಬ್ಬರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...