ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ.
ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಮಲ್ಲಿಕಾರ್ಜುನ್ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗೀತಾ ಎಂಬಾತರೆ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿಗಳಾಗಿದ್ದಾರೆ.
ಶ್ರೀ ಬೀರಲಿಂಗೇಶ್ವರ ಹೊಸ ಕೋಳಿ ಸಾಕಾಣಿಕೆದಾರ ಮಾಡೋದಕ್ಕೆ ಹಾಗೂ ಮಾರಾಟಗಾರರ ಸಹಕಾರಿ ಸಂಘದ ನೊಂದಣಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೀರಪ್ಪ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾ ಪೊಲೀಸರು ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ನಿಬಂಧಕ ಹಾಗೂ ಕಂಪ್ಯೂಟರ್ ಆಪರೇಟರ್ ರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆಯಲ್ಲಿ ಸಿಬ್ಬಂದಿ ಮಲ್ಲಿನಾಥ ಸೇರಿದಂತೆ ಮತ್ತಿತರರು ಇದ್ದರು.


