ಕಲಬುರಗಿ| ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

Date:

ಕಲಬುರಗಿ: ತಾಡತೆಗನೂರು (ಕಲಬುರಗಿ-01) ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ಹಾಗೂ 11ನೇ ತರಗತಿಗಳ ಖಾಲಿ ಇರುವ ಸೀಟುಗಳ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು ತಾಡತೆಗನೂರು (ಕಲಬುರಗಿ-01) ಜವಾಹರ ನವೋದಯದ ಪ್ರಾಚಾರ್ಯರು ತಿಳಿಸಿದ್ದಾರೆ.

ತಾಡತೆಗನೂರು ನವೋದಯ ವಿದ್ಯಾಲಯಕ್ಕೆ ಒಳಪಡುವ ತಾಲೂಕುಗಳಾದ ಆಳಂದ, ಅಫಜಲಪೂರÀ, ಜೇವರ್ಗಿ ಹಾಗೂ ಕಲಬುರಗಿ ಉತ್ತರ ವಲಯ ಮತ್ತು ಕಲಬುರಗಿ ದಕ್ಷಿಣ ವಲಯ ತಾಲೂಕುಗಳಲ್ಲಿ 8ನೇ ತರಗತಿಯಲ್ಲಿ ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

9ನೇ ತರಗತಿಯ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsix_9 ಲಿಂಕ್ ಮೂಲಕ ಹಾಗೂ 11ನೇ ತರಗತಿಗೆ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsxi_11 ಲಿಂಕ್ ಮೂಲಕ 2025ರ ಅಕ್ಟೋಬರ್ 21 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಡತೆಗನೂರು ಜವಾಹರ ನವೋದಯ ವಿದ್ಯಾಲಯಕ್ಕೆ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...