ಕಲಬುರಗಿ: ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಇದೇ ಅಕ್ಟೋಬರ್ 27 ರಿಂದ ನವೆಂಬರ್ 26 ರವರೆಗೆ ಎಲೆಕ್ಟ್ರಿಕಲ್ ಮೋಟಾರ ರಿವೈಂಡಿಂಗ್ ಮತ್ತು ಪಂಪ್‍ಸೆಟ್ ಸರ್ವೀಸ್ ತರಬೇತಿ ಹಾಗೂ ಟಿ.ವಿ. ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ.
ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್ ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಅಕ್ಟೋಬರ್ 26 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900135705, 7019939996, 9901098123ಗೆ ಸಂಪರ್ಕಿಸಲು ಕೋರಲಾಗಿದೆ.


