ಕಲಬುರಗಿ| ಎಚ್.ಕೆ.ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರಿಗಾಗಿ ಐದು ದಿನಗಳ ಎಫ್.ಡಿ.ಪಿ ಕಾರ್ಯಕ್ರಮ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಸಹಯೋಗದೊಂದಿಗೆ ಸಂಸ್ಥೆಯ ಶಿಕ್ಷಕರಿಗಾಗಿ ಗಣಕಯಂತ್ರ ಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಕುರಿತಾಗಿ ಐದು ದಿನಗಳ ಕಾಲ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜು ಹಾಗೂ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಂಚಾಲಕರಾದ ನಾಗಣ್ಣ ಘಂಟಿ ಮಾತನಾಡಿ ಇಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಿಬ್ಬಂದಿಗೆ ಕಂಪ್ಯೂಟರ್ ಜ್ಞಾನ ಕೃತಕ ಬುದ್ಧಿಮತ್ತೆ ಅವಶ್ಯಕತೆ ಇದೆ ಎಂದು ಹೇಳಿದರು. ಆಡಳಿತ ಮಂಡಳಿ ಸದಸ್ಯರಾದ ಅನಿಲಕುಮಾರ ಮರಗೋಳ, ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯಮಲ್ಲಪ್ಪ ಬೋತಗಿ, ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಮುಖ್ಯಸ್ಥೆ ಡಾ ಉಮಾ ರೇವೂರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಶರಣಬಸಪ್ಪ ಗಲಗಲಿ,ಉಪ ಪ್ರಾಚಾರ್ಯರಾದ ಸಂಗಮೇಶ ನೀಲಾ ವೇದಿಕೆಯ ಮೇಲೆ ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಯೋಜಕರಾದ ಡಾ ಮೈತ್ರಾದೇವಿ ಹಳೆಮನಿ ಕಾರ್ಯಕ್ರಮ ನಿರೂಪಿಸಿದರು,ರಾಜಶ್ರೀ ಎಂ ಬಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...