ಕಲಬುರಗಿ| ಹಡಪದ ಅಭಿವೃದ್ಧಿ ನಿಗಮ ಮಂಡಳಿ ಸಮರ್ಪಕವಾಗಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Date:

Share post:

ಕಲಬುರಗಿ: ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಮಂಡಳಿ ಸಮರ್ಪಕವಾಗಿ ಜಾರಿಗೆ ತರುವಬೇಕೆಂದು ತಾಲೂಕ ಹಡಪದ (ಕ್ಷೌರಿಕ) ಸಮಾಜ ಕಲಬುರಗಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಕಲಬುರಗಿ ತಾಲೂಕ ವತಿಯಿಂದ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಕೆಳದ ಸರ್ಕಾರದಲ್ಲಿ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ಆದೇಶವಾಗಿರುತ್ತೆದೆ. ಆದರೆ ಆದೇಶವಾದರೂ ಕೂಡ ಇಲ್ಲಿಯವರೆಗೆ ಅಭಿವೃದ್ಧಿ ನಿಗಮ ಮಂಡಳಿಯನ್ನು ಜಾರಿಗೆ ತಂದಿರುವುದಿಲ್ಲ.

ಕರ್ನಾಟಕ ರಾಜ್ಯದಲ್ಲಿ ಹಡಪದ ಸಮಾಜವು ಸುಮಾರು 15 ಲಕ್ಷ ಜನಸಂಖ್ಯೆ ಇದ್ದು ಬುದ್ಧ ಬಸವ ಅಂಬೇಡ್ಕರ ರವರ ಪಕ್ಕ ಪರಿಪಾಲಕವಾಗಿದ್ದು ಜಾತಿ ಬೇದ ಅನ್ನದೇ ಎಲ್ಲಾ ಜನಾಂಗದವರನ್ನು ಕ್ಷೌರ ಸೇವೆ ಮಾಡುವ ಮೂಲಕ ಜೀವನ ನಡೆಸುತ್ತಿದ್ದೇವೆ ಹಾಗೂ ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ. ತಮ್ಮ ಸರ್ಕಾರದಲ್ಲಿ ನಮ್ಮ ಸಮಾಜದ ಬೇಡಿಕೆ ಇಡರಿಸುವ ಮೂಲಕ ನಮ್ಮನ್ನ ಮುಖ್ಯವಾಹಿನಿಗೆ ತರಬೆಕೇಂದು ಮನವಿ ಮಾಡಿದ್ದಾರೆ.

ನೆನೆಗುದಿಗೆ ಬಿದ್ದಿರುವ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮ ಮಂಡಳಿ ಜಾರಿಗೆ ತಂದು 100 ಕೋಟಿ ರೂಪಾಯಿ ಅನುದಾನ ನೀಡಬೇಕು, ಹಜಾಮ ಎಂಬ ಜಾತಿ ನೀಂದನೆ ಪದಕ್ಕೆ ಆಟ್ರಾಸಿಟಿ ಕಾನೂನು ರಚಿಸಬೇಕು, ಕ್ಷೌರಿಕರಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಸರ್ಕಾರದ ವತಿಯಿಂದ ನೀಡಬೇಕು, ಬಸವಕಲ್ಯಾಣದಲ್ಲಿರುವ ಬಸವಣ್ಣ ರವರ ಅರೀವಿನ ಗವಿಯ ಪಕ್ಕದಲ್ಲಿ ಇರುವ ( ಎಡಭಾಗ) ಗವಿ ಹಡಪದ ಅಪ್ಪಣ್ಣನವರ ಗವಿಯಾಗಿದ್ದು ಬಸವಕಲ್ಯಾಣ ಪ್ರಾಧಿಕಾರಕೆ ತೆಗೆದುಕೊಂಡು ಅಭಿವೃದ್ಧಿ ಪಡೆಸಬೇಕು, ಕಾಂಗ್ರೆಸ್ ಪಕ್ಷದಲ್ಲಿ ದುಡಿದಿರುವ ನಮ್ಮ ಸಮಾಜದ ಯಾರಿಗಾದರೂ ಒಬ್ಬರಿಗೆ ನಿಗಮ ಮಂಡಳಿ ಅಥವಾ ವಿವಿಧ ಇಲಾಖೆಗಳಲ್ಲಿ ನಾಮ ನಿರ್ದೇಶನ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಚಂದ್ರಶೇಖರ ಹಡಪದ ತೊನಸಹಳ್ಳಿ (ಟಿ), ಹಡಪದ ಸಮಾಜ ಜಿಲ್ಲಾಧ್ಯಕ್ಷ ಈರಣ್ಣ ಸಿ ಹಡಪದ ಸಣ್ಣೂರ, ತಾಲೂಕ ಕಾರ್ಯಾಧ್ಯಕ್ಷ ರಮೇಶ ಕವಲಗಾ, ತಾಲೂಕ ಪ್ರಧಾನ ಕಾರ್ಯಾದರ್ಶಿ ವಿನೋದ ಅಂಬಲಗಾ, ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಸುಗೂರ ಎನ್, ನಗರಾಧ್ಯಕ್ಷ ಮಲ್ಲಿಕಾರ್ಜುನ ಸಾವಳಗಿ ಸೇರಿದಂತೆ ಎಲ್ಲಾ ಕ್ಷೌರಿಕ ಅಂಗಡಿಯ ಮಾಲಿಕರು ಹಿರಿಯರು ಯುವಕರು ಹೆಚ್ಚಿನ ಜನ ಸಂಖ್ಯೆಯಲ್ಲಿ ಭಾಗವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...