ಕಲಬುರಗಿ| ವಿವಿಧ ಕೋರ್ಸುಗಳಿಗೆ ದಂಡಶುಲ್ಕವಿಲ್ಲದೇ ಪ್ರವೇಶ ಪಡೆಯಲು ಅ.15 ಕೊನೆಯ ದಿನ

Date:

Share post:

ಕಲಬುರಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ (ಜುಲೈ ಆವೃತ್ತಿಯ) ಈ ಕೆಳಕಂಡ ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು 2025ರ ಅಕ್ಟೋಬರ್ 15 ರಂದು ಕೊನೆಯ ದಿನವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಪ್ರಥಮ ಬಿ.ಎ./ಬಿ.ಕಾಂ., ಬಿ.ಎಲ್‍ಎಲ್‍ಐಬಿ.ಐ.ಎಸ್ಸಿ, ಬಿ.ಎಸ್ಸಿ, ಬಿ.ಬಿ.ಎ., ಬಿ.ಸಿ.ಎ. ಹಾಗೂ ಪ್ರಥಮ ಎಂ.ಎ.: ಕನ್ನಡ, ಇಂಗ್ಲೀಷ, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಎಂ.ಕಾಂ., ಎಂ.ಬಿ.ಎ., ಎಮ್.ಎಲ್‍ಐಬಿ.ಐ.ಎಸ್ಸಿ, ಎಂ.ಎಸ್.ಸಿ., ಎಂ.ಎಸ್.ಡಬ್ಲ್ಯೂ, ಬಿ.ಎಸ್.ಡಬ್ಲ್ಯೂ., ಎಂ.ಸಿ.ಎ. ಹಾಗೂ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

 

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 10ರಷ್ಟು ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಕಲಬುರಗಿ ಕಚೇರಿಯನ್ನು ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಇವರ ಮೊಬೈಲ್ ಸಂಖ್ಯೆ 9916783555 ಹಾಗೂ ವಿಶ್ವವಿದ್ಯಾಲಯದ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...