ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೆ ಆರಂಭವಾಗಿದ್ದು, ಇದೇ ಅಕ್ಟೋಬರ್ 18, 27 ಮತ್ತು 30 ಹಾಗೂ ನವೆಂಬರ್ 3ರಂದು ಕಲಬುರಗಿ ಜಿಲ್ಲೆಯಾದ್ಯಂತ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ನ.10 ರ ಅರ್ಹತಾ ದಿನಾಂಕಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕ್ಷೇತ್ರದಾದ್ಯಂತ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿರುತ್ತದೆ. ಇದೂವರೆಗೆ ನಿರೀಕ್ಷಿತ ಮಟ್ಟದಲ್ಲಿ ಅರ್ಜಿ ಸ್ವೀಕೃತಿಯಾಗದರಿಂದ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಈ ವಿಶೇಷ ನೊಂದಣಿ ಆಯೋಜಿಸಿದ್ದು, ಶಿಕ್ಷಕ ಮತದಾರರು ಇದರ ಲಾಭ ಪಡೆಯುವಂತೆ ಅವರು ಮನವಿ ಮಾಡಿದ್ದಾರೆ.

ಯಾವುದೇ ಒಂದು ಚುನಾವಣೆಯು ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೆ ಶಾಂತಿಯುತವಾಗಿ ನಡೆಯಬೇಕಾದಲ್ಲಿ ದೋಷರಹಿತ ಮತದಾರರ ಪಟ್ಟಿ ತಯಾರಿಸುವುದು ಅತ್ಯಗತ್ಯವಾಗಿರುತ್ತದೆ. ಈ ರೀತಿ ಮತದಾರರ ಪಟ್ಟಿ ಸಿದ್ದಪಡಿಸಬೇಕಾದಲ್ಲಿ ಅರ್ಹ ಮತದಾರರು ನೊಂದಾಯಿಸುವುದು ಅವಶ್ಯಕವಾಗಿರುತ್ತದೆ. ಸುಭದ್ರ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾಯಾದ್ಯಂತ ವಾಸವಿರುವ ಎಲ್ಲಾ ಅರ್ಹ ಮತದಾರರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಬೇಕೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕೋರಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...