ಕಲಬುರಗಿ: ನವೆಂಬರ್ 5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ: ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್

Date:

Share post:

ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನವೆಂಬರ್ 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.

ಬುಧವಾರ ಕಲಬುರಗಿ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ತೊಗರಿ, ಹತ್ತಿ, ಕಬ್ಬು ಹಾಗೂ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕಡಲೆ, ಜೋಳ ಹಾಗೂ ಇತರೆ ವಿವಿಧ ಬೆಳೆಗಳಲ್ಲಿ ಬರಬಹುದಾದ ಕೀಟ, ರೋಗ ಹಾಗೂ ಇತರ ಪೀಡೆಗಳ ಜಂಟಿ ಸರ್ವೆಕ್ಷಣೆಗಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿಗಳ ಒಳಗೊಂಡ 7 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಬುಧುವಾರದಂದು 7 ತಂಡಗಳಲ್ಲಿಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ 11 ತಾಲೂಕುಗಳ ವಿವಿಧ ಗ್ರಾಮಗಳಲ್ಲಿನ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ಕೀಟ ಹಾಗೂ ರೋಗ ಸಮೀಕ್ಷೆ ಮಾಡಿ ತೆಗೆದುಕೊಳ್ಳಬಹುದಾದ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ.

ಪ್ರತಿ ಗುರುವಾರದಂದು ಎಂಟು ವಾರದವರೆಗೆ ರೇಡಿಯೋ (All India Radio) ಮುಖಾಂತರ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರೊಂದಿಗೆ ವಿವಿಧ ಬೆಳೆಗಳಿಗೆ ಬರಬಹುದಾದ ಕೀಟ, ರೋಗ ಹಾಗೂ ಇತರ ವಿಷಯಗಳ ಕುರಿತು ಸಂವಾದ ನಡೆಸಲಿದ್ದಾರೆ.

ಸಭೆಯಲ್ಲಿ ಸಹಾಯಕ ಸಂಶೋಧನಾ ನಿರ್ದೇಶಕರಾದ ಡಾ|| ಬಿ.ಎಂ. ದೊಡ್ಡಮನಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ|| ರಾಜು ತೇಗ್ಗೆಳ್ಳಿ, ಕಲಬುರಗಿ ಮತ್ತು ಸೇಡಂ ಉಪ ಕೃಷಿ ನಿರ್ದೇಶಕರು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...