ಕಲಬುರಗಿ| ಶಸ್ತ್ರಚಿಕಿತ್ಸಾ ಕೋಣೆಯಲ್ಲಿ ಸೂಕ್ಷ್ಮ ಜೀವಿಗಳ ಉಪಸ್ಥಿತಿ ಪರೀಕ್ಷಿಸಲು ಸ್ವ್ಯಾಬ ಸಹಾಯಕಾರಿ; ಡಾ ಪರಮೇಶ್ವರಿ

Date:

Share post:

ಕಲಬುರಗಿ: ಶಸ್ತ್ರಚಿಕಿತ್ಸಾ ಕೋಣೆಯಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಇತರ ಸೂಕ್ಷ್ಮಜೀವಿಗಳ ಉಪಸ್ಥಿತಿಯನ್ನು ಪರೀಕ್ಷಿಸಲು ಈ ಸ್ವ್ಯಾಬ್ಗಳು ಸಹಾಯ ಮಾಡುತ್ತವೆ ಎಂದು ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ ಪರಮೇಶ್ವರಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಗಮೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಓಟಿ ಸ್ವಾಬ್ ಕಲೆಕ್ಷನ್ ಪ್ರೋಸಿಜರ್ ಫಾರ್ ಟೆಕ್ನಿಕಲ್ ಸ್ಟಾಪ್ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದರು.

ಸೂಕ್ಷ್ಮಜೀವಿಗಳು ಯಾವ ಪ್ರತಿಜೈವಿಕಗಳಿಗೆ ಹೆಚ್ಚು ನಿರೋಧಕವಾಗಿವೆ ಎಂಬುದನ್ನು ನಿರ್ಧರಿಸಲು ಸ್ವ್ಯಾಬ್ ಸಂಗ್ರಹಣೆ ಅಗತ್ಯವಾಗಿದೆ. ಇದು ಪ್ರತಿಜೈವಿಕ ಪ್ರತಿರೋಧವನ್ನು ನಿರ್ವಹಿಸಲು ಅತ್ಯಗತ್ಯ ಎಂದು ಹೇಳಿದರು.

ಸೋಂಕುಗಳ ಹರಡುವಿಕೆಯನ್ನು ತಡೆಗಟ್ಟುವ ಮೂಲಕ, ಔಖಿ ಸ್ವ್ಯಾಬ್ ಸಂಗ್ರಹಣೆಯು ರೋಗಿಯ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ ಮತ್ತು ಶಸ್ತ್ರಚಿಕಿತ್ಸಾ ನಂತರದ ತೊಡಕುಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆಯ ಡಾ ಶಿಲ್ಪಾ ಪ್ರಧಾನ್, ಡಾ ಬಸವರಾಜ ಪಾಟೀಲ, ಶರಣಮ್ಮ, ವೈದ್ಯಕೀಯ ಅಧಿಕ್ಷಕರಾದ ಡಾ ಮಹಾನಂದಾ ಮೇಳಕುಂದಿ, ಕಾರ್ಯಕ್ರಮ ಸಂಘಟಕಿ ಡಾ ಪಾರ್ವತಿ ಭೀಮಳ್ಳಿ, ಸತೀಶ್ ಹಿರೇಮಠ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...