ಕಲಬುರಗಿ| ನ.8ರಂದು ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಶ್ರೀ ಕ್ಷೇತ್ರ ಭೂ ಕೈಲಾಸ ಹುಲಿಜಂತಿ ಪಟ್ಟದ ಪೂಜ್ಯರಾದ ಶ್ರೀ ಮಾಳಿಂಗರಾಯ ಮಹಾರಾಯರು ಹಾಗೂ ಕನಕಗುರು ಪೀಠ ಕಲಬುರಗಿ ವಿಭಾಗದ ಪೂಜ್ಯ ಶ್ರೀ ಲಿಂಗಬೀರದೇವ ಶರಣರು ದಿವ್ಯ ಸಾನಿಧ್ಯವಹಿಸುವರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

 

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

 

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್ ಹಾಗೂ ಕರ್ನಾಟಕ ಪ್ರದೇಶ ಕುರುಬಗೊಂಡ ಸಂಘ (ರಿ) ಕಲಬುರಗಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಗುರುನಾಥ ಎಸ್. ಪೂಜಾರಿ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಉಪನ್ಯಾಸಕರು ಹಾಗೂ ಸಾಹಿತಿ ಮತ್ತು ಚಿಂತಕರಾದ ಡಾ. ಶ್ರೀಶೈಲ್ ಎನ್. ಪೂಜಾರಿ ಅವರು ವಿಶೇಷ ಉಪನ್ಯಾಸ ನೀಡುವರು.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...