ಕಲಬುರಗಿ| ಕಬ್ಬಿನ ದರ ನಿಗದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ 

Date:

Share post:

ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು.

ನವೆಂಬರ್ 7 ರಂದು ಮಾನ್ಯ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಮಾನ್ಯ ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು.

ಆಗ ಉತ್ತರಿಸಿದ ಸಚಿವರು, ಸರಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು, ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...