ಕಲಬುರಗಿ| ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ: ಶೋಭಾದೇವಿ

Date:

Share post:

ಕಲಬುರಗಿ: ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು ಮತ್ತು ಕೊಬ್ಬುಗಳು: ಇವು ದೇಹದ ಕಾರ್ಯಚಟುವಟಿಕೆಗೆ ಪ್ರಮುಖವಾಗಿವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಬೀನ್ಸ್ ಮತ್ತು ದ್ವಿದಳ ಧಾನ್ಯಗಳಿಂದ ಉತ್ತಮ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ಪಡೆಯಬಹುದು.

ಜೀವಸತ್ವಗಳು ಮತ್ತು ಖನಿಜಗಳು: ಇವು ದೇಹದಿಂದ ಉತ್ಪತ್ತಿಯಾಗುವುದಿಲ್ಲ, ಆದ್ದರಿಂದ ಆಹಾರದ ಮೂಲಕ ಪಡೆಯಬೇಕು. ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಧಾನ್ಯಗಳಂತಹ ವಿವಿಧ ಆಹಾರಗಳಲ್ಲಿ ಇವು ಲಭ್ಯವಿವೆ ಎಂದು ತಿಳಿಸಿದರು.

ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು ಮತ್ತು ಕೊಬ್ಬುಗಳು: ಇವು ದೇಹದ ಕಾರ್ಯಚಟುವಟಿಕೆಗೆ ಪ್ರಮುಖವಾಗಿವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಬೀನ್ಸ್ ಮತ್ತು ದ್ವಿದಳ ಧಾನ್ಯಗಳಿಂದ ಉತ್ತಮ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ಪಡೆಯಬಹುದು.

ಜೀವಸತ್ವಗಳು ಮತ್ತು ಖನಿಜಗಳು: ಇವು ದೇಹದಿಂದ ಉತ್ಪತ್ತಿಯಾಗುವುದಿಲ್ಲ, ಆದ್ದರಿಂದ ಆಹಾರದ ಮೂಲಕ ಪಡೆಯಬೇಕು. ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಧಾನ್ಯಗಳಂತಹ ವಿವಿಧ ಆಹಾರಗಳಲ್ಲಿ ಇವು ಲಭ್ಯವಿವೆ ಎಂದು ಆರೋಗ್ಯಕರ ಆಹಾರ ಪದ್ಧತಿಯ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೋ ರಾಜಶೇಖರ ಬೀರನಳ್ಳಿ ಮಾತನಾಡಿ ಆರೋಗ್ಯವೆ ಸರ್ವಶ್ರೇಷ್ಠ ಭಾಗ್ಯ ವಾಗಿದ್ದು ಮನುಷ್ಯನಿಗೆ ಆರೋಗ್ಯ ಸರಿಯಾಗಿದ್ದರೆ ಎಲ್ಲವನ್ನೂ ಸಾಧಿಸಬಹುದು ಎಂದು ಹೇಳಿದರು.

ಸಮಾಜ ಶಾಸ್ತ್ರದ ಮುಖ್ಯಸ್ಥರು ಕಾರ್ಯಕ್ರಮದ ಸಂಘಟಕರಾದ ಡಾ ಮೈತ್ರಾದೇವಿ ಹಳಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಿಜಯಲಕ್ಷ್ಮೀ ನಂದ್ಯಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...