ಕಲಬುರಗಿ| ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆದ ಎಂಆರ್ಎಂಸಿ ವಿದ್ಯಾರ್ಥಿನಿಯರು

Date:

Share post:

ಕಲಬುರಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ ಇವರುಗಳು ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ಕಮ್ಯೂನಿಟಿ ಮೇಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ ಸುನೀಲ್ ದೇಶಮುಖ್ ಕಾಲೇಜಿನ ದೈಹಿಕ ನಿರ್ದೇಶಕರಾದ ಕಿರಣ್ ಹಾಲಪ್ಪನವರ ವಿಜೇತ ತಂಡಕ್ಕೆ ಶುಭ ಹಾರೈಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...