ಕಲಬುರಗಿ| ಸೇಡಂ ತಾಲ್ಲೂಕು ಕಚೇರಿಗೆ ಹುಸಿ ಬಾಂಬ್ ಬೆದರಿಕೆ; ತಪಾಸಣೆ

Date:

Share post:

ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ತಾಲ್ಲೂಕು ಕಚೇರಿ ಪ್ರಜಾಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ಮಂಗಳವಾರ ನಡೆದಿದೆ.

ಅನಾಮಿಕ ಇಮೇಲ್ ಮೂಲಕ ತಹಶೀಲ್ದಾರ್ ಅವರ ಅಧಿಕೃತ ಇಮೇಲ್‌ಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶ್ರೀಯಾಂಕ್ ಧನಶ್ರೀ ಅವರು ತಕ್ಷಣವೇ ಸೇಡಂ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳದ ತಂಡದವರು ಹಾಗೂ ಶ್ವಾನದಳದ ಸಿಬ್ಬಂದಿ ಪ್ರಜಾಸೌಧಕ್ಕೆ ದೌಡಾಯಿಸಿ ಕಟ್ಟಡದ ಒಳಭಾಗ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಿದರು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಭಯಭೀತರಾದ ಕಚೇರಿ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದು, ಇಮೇಲ್ ಮೂಲ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ.

ಈ ಸಂದರ್ಭದಲ್ಲಿ ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ತಹಸಿಲ್ದಾರ್ ಶ್ರೀಯಾಂಕ ಧನಶ್ರೀ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರಕುಮಾರ,

ಎಸ್ಐ ತುಳಜಪ್ಪ, ಬಾಂಬ್ ನಿಷ್ಕ್ರೀಯ ದಳ ತಂಡದ ಅಧಿಕಾರಿಗಳಾದ ರಾಜಶೇಖರ, ವಿಜಯಕುಮಾರ, ಬಸವಣ್ಣಪ್ಪ, ಸಂಜೀವ್ , ಶ್ವಾನ ದಳದ ಅಧಿಕಾರಿಗಳಾದ ಮಂಜುನಾಥ, ಅನೀಲ್, ಪ್ರದೀಪ್ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...