ಕಲಬುರಗಿ| ಬೆಂಬಲ ಬೆಲೆ, ಬೆಳೆ ವಿಮೆ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

Date:

ಕಲಬುರಗಿ: ತೊಗರಿ ಬೆಳೆಗಾರರ ಸಂರಕ್ಷಣೆಗಾಗಿ, ಬೆಂಬಲ ಬೆಲೆಗಾಗಿ, ಬೆಳೆ ವಿಮೆ ಹಣ ಬಿಡುಗಡೆ ಮಾಡುವುದು, ಪರಿಹಾರದ ಹಣ ತಾರತಮ್ಯ ಬಗೆಹರಿಸಿ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮತ್ತು ಇಸ್ಕೊ ಟೋಕಿಯೊ ಬೆಳೆ ವಿಮಾ ಕಂಪನಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸಿದರು.

ಪ್ರತಿಭಟನೆಕಾರರು ನಂತರ ಅಧಿಕಾರಿಯ ಮೂಲಕ ಮುಖ್ಯಮಂತ್ರಿಗೆ, ಜಿಲ್ಲಾಧಿಕಾರಿಗೆ, ಜಂಟಿ ಕೃಷಿ ನಿರ್ದೇಶಕರಿಗೆ, ಇಫ್ಕೋ ಟೋಕಿಯೋ ಜನರಲ್ ಇನ್ಸುರೆನ್ಸ್ ಕಂಪನಿಯ ಪ್ರಧಾನ ವ್ಯವಸ್ಥಾಪಕರಿಗೆ, ಶಾಖಾ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಬೆಳೆ ಮೇಲೆ. ಇದು ಬಂಪರ್ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಒಂದೆಡೆ ಬರ, ಇನ್ನೊಂದೆಡೆ ನೆರೆ. ಎರಡೂ ಪಾರಾಗಿ ಬಂದರೂ ಸೂಕ್ತ ಬೆಲೆ ಸಿಗದೇ ರೈತ ಕಂಗಾಲಾಗುವoತೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿ ಚಳಿಗಾಲದ ಅಧಿವೇಶನವರೆಗೆ ಜಿಲ್ಲೆಯ ತೊಗರಿ ಬೆಳೆಗಾರರ ಜಾಥಾ ಮೂಲಕ ಹೋಗಿ ಬೆಳಗಾವಿಯಲ್ಲಿ ಗೊಡ್ಡು ಹೊದ ತೊಗರಿ ಹೊರಿ ತೆಲೆ ಮೇಲೆ ಹೊತ್ತುಕೊಂಡು ಪ್ರತಿಭಟನೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಿದಾಗ ಸಚಿವರು ಭರವಸೆ ನೀಡಿದ್ದರು. ಆದರೆ ರಾಜ್ಯ ಸರ್ಕಾರ ಇನ್‌ಸೆಂಟಿವ್ ಕೊಡುವುದಾಗಿ ಭರವಸೆ ಕೊಟ್ಟರು ನೈ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನ ಸಂಧರ್ಭದಲ್ಲಿ ಬೆಂಬಲ ಬೆಲೆ ತೊಗರಿ ಬೆಳೆಗಾರರ ಬಗ್ಗೆ ಕಿಂಚಿತ್ತೂ ಕಾಳಜಿ ತೊರಸದೆ ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಹೇಳಿ ಕೈ ತೊಳೆದುಕೊಂಡoತಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ನೆಲ ಕಚ್ಚಿ ಹೋಗಿದೆ. ತೊಗರಿ ಬೆಳೆಗಾರರ ಕಂಗಾಲಾಗುವAತೆ ಮಾಡಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಬೆಂಬಲ ಬೆಲೆ ಎಂಎಸ್‌ಪಿ ಕೊಡುವುದರ ಬಗ್ಗೆ ರೈತ ವಿರೋಧಿ ನಿಲುವು ತಾಳಿದೆ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಆದರೆ ಬೆಳೆ ನಷ್ಟ ಪರಿಹಾರ ಕೂಡ ಯಾರಿಗೆ ಬಂತು ಯಾರಿಗೆ ಬಂದಿಲ್ಲ ಅನ್ನುವ ಹಾಗೆ ಆಗಿದೆ. ಪರಿಹಾರದಲ್ಲಿ ತಾರತಮ್ಯ ಮಾಡಿದೆ. ಸರ್ಕಾರ ಸರಿಯಾದ ರೀತಿಯಲ್ಲಿ ಎಲ್ಲರಿಗೂ ಸಮಾನವಾಗಿ ಪರಿಹಾರ ಸಿಕ್ಕಿಲ್ಲ. ಎಲ್ಲರಿಗೂ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್., ಸಿದ್ದರಾಮ ದನ್ನೂರ, ಅಶೋಕ್ ಹೂಗಾರ್, ಸಂತೋಷ್ ಮಲಗೊಂಡ, ರಾಯಪ್ಪ ಹುರುಮುಂಜಿ, ದೇವು ಬಿರಾದಾರ್, ಸುಭಾಷ್ ಜೇವರ್ಗಿ, ದಿಲೀಪ್ ನಾಗೂರೆ, ಸೇರಿದಂತೆ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...