ಕಲಬುರಗಿ| ಡಾ.ಬಾಬು ಜಗಜೀವನ ರಾಮ ಭವನಕ್ಕೆ ಅನುದಾನಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

Date:

Share post:

ಕಲಬುರಗಿ: ನಗರದಲ್ಲಿ ನಿರ್ಮಿಸುತ್ತಿರುವ ಡಾ. ಬಾಬು ಜಗಜೀವನ ರಾಮ ಅವರ ಬೃಹತ್ ಭವನಕ್ಕೆ ಹೆಚ್ಚುವರಿಯಾಗಿ ಅನುದಾನ ನೀಡಿ ಭವನ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಿಲ್ಲಾ ಮಾದಿಗರ ಸಮಾಜದ ಅಭಿವೃದ್ಧಿ ಒಕ್ಕೂಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು 2025ರ ಏಪ್ರಿಲ್ 3 ರಂದು ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದು ಇನ್ನೂ 6.50 ಕೋಟಿ ಕಟ್ಟಡ ಕಾಮಗಾರಿಗೆ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಿದ್ದಾರೆ, ಅದಲ್ಲದೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ಮಂಜುರಾತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರತಿಯಾಗಿ ಹೆಚ್ಚುವರಿ ಹಣ ನಮ್ಮಲ್ಲಿ ಇಲ್ಲ ಎಂದು ಹೇಳಿ, ಸ್ಥಳೀಯರಿಂದ ಹಣ ಸಂಗ್ರಹಿಸಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಹಿಂಬರಹ ಕಳಿಸಿರುತ್ತಾರೆ. ಹಾಗಾಗಿ ಮಂಜೂರಾಗಬೇಕಿರುವ ಹಣವನ್ನು ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

ಇದೇ ವೇಳೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಟ್ಟಡ ಕಾಮಗಾರಿಯನ್ನು 4 ರಿಂದ 5 ತಿಂಗಳ ಒಳಗಾಗಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಲಿಂಗರಾಜ ತಾರಫೈಲ, ಮಲ್ಲಿಕಾರ್ಜುನ ಜೀನಕೇರಿ, ರಾಜು ವಾಡೇಕರ, ದಶರಥ ಕಲಗುರ್ತಿ, ಪರಮೇಶ್ವರ ಖಾನಾಪೂರ, ಮಲ್ಲಿಕಾರ್ಜುನ ದೊಡ್ಡಮನಿ, ರಾಜು ಕಟ್ಟಿಮನಿ, ರಮೇಶ ವಾಡೇಕರ, ಬಾಬು ಸುಂಠಾಣ, ಬಂಡೇಶ ರತ್ನಡಗಿ, ಶ್ರೀಮಂತ ಭಂಡಾರ, ಶಿವಪುತ್ರ ನಾಗನಳ್ಳಿ, ಮಲ್ಲಿಕಾರ್ಜುನ ಸರಡಗಿ, ಸಚಿನ ಕಟ್ಟಿಮನಿ, ರಂಜೀತ ಮೂಲಿಮನಿ, ಗುಂಡು ಸಂಗವಾರ, ಚಂದ್ರಕಾoತ ನಾಟೀಕರ, ಪ್ರದೀಪ ಬಾಚನಾಳಕರ್, ಶರಣು ಸಗರಕರ, ಕಾಶಿನಾಥ ಹಾದಿಮನಿ, ಪ್ರದೀಪ ಭಾವೆ, ವಿನೇಶ ಸೇರಿದಂತೆ ಹಲವರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...