ಕಲಬುರಗಿ| ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

Date:

Share post:

ಕಲಬುರಗಿ: ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಮನವಿ ಪತ್ರ ಸಲ್ಲಿಸಲಾಯಿತು.

ಇಲ್ಲಿನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇವೆ, ಈ ಕುರಿತು ತಪ್ಪಿತಸ್ಥರ ವಿರುದ್ಧ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಜೀವಂತ ಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಹರ್ಷನಂದಾ ಗುತ್ತೇದಾರ್, ನಿತೀನ್ ಗುತ್ತೇದಾರ್, ಮಹಾದೇವ ಬೆಳಮಗಿ, ಉಮೇಶ್ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಸಂತೋಷಿರಾಣಿ ಪಾಟೀಲ್ ತೆಲ್ಕೂರ, ಸಂತೋಷ್ ಹಾದಿಮನಿ, ಜಯಶ್ರೀ ಮತ್ತಿಮೂಡ, ಚಂದಮ್ಮ ಪಾಟೀಲ್, ಸುಧಾ ಹಾಲಕಾಯಿ, ಸವಿತಾ ಪಾಟೀಲ್, ಭಾಗ್ಯ ಭಾಗೋಡಿ, ಸಾವಿತ್ರಿಬಾಯಿ ಕುಳಗೇರಿ, ಅಂಬಾರಾಯ್ ಅಷ್ಟಗಿ, ಬಾಬುರಾವ್ ಹಾಗರಗುಂಡಗಿ, ವಿಶಾಲ ದರ್ಗಿ, ಶಿವರಾಜ್ ಪಾಟೀಲ್ ರದ್ದೇವಾಡಗಿ, ಶಿವ ಅಷ್ಟಗಿ, ಗೌರಿ ಚಿಚಕೋಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...