ಕಲಬುರಗಿ| ಮತದಾರರಲ್ಲಿ ಜಾಗೃತಿ ಅಭಿಯಾನ: ಸೈಕಲ್‌ ಜಾಥಾಗೆ ಚಾಲನೆ

Date:

Share post:

ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಲ್ಲಿ ಜಾಗೃತಿ ಜಾಥಾ ಉಂಟು ಮಾಡುವ ನಿಟ್ಟಿನಲ್ಲಿ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಯೋಜಿಸಿದ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಗತ್ ವೃತ್ತದಲ್ಲಿ ಚಾಲನೆ ನೀಡಿ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಪ್ರೇರೇಪಿಸಿದರು.

ಜಗತ್ ವೃತ್ತದಿಂದ‌ ಅರಂಭಗೊಂಡ ಜಾಥಾ ಡಿ.ಸಿ. ಕಚೇರಿ ವರೆಗೂ ಸಾಗಿತ್ತು.ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಸೈಕಲ್ ತುಳಿದು ಸಂತಸಪಟ್ಟರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ ಆನಂದಶೀಲ, ತಾಲೂಕಾ ಪಂಚಾಯತ್ ಇ‌.ಓಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಯುವಕರು, ಸೈಕ್ಳಿಸ್ಟ್ ಗಳು ಜಾಥಾದಲ್ಲಿ ಭಾಗಿಯಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...