ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

Date:

Share post:

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಇಂದು  ಲೋಕಾರ್ಪಣೆ ಮಾಡಲಾಯಿತು.

 ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ 25.27 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ.  ಅದೇ ರೀತಿ 2023–24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಗಳ ಒಗ್ಗೂಡಿಸುವಿಕೆಯಲ್ಲಿ 35.50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣಗೊಂಡಿದೆ ಎಂದರು.

 ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಮಾತನಾಡಿ, ಗ್ರಾಮೀಣ ಭಾರತ ಬಲಿಷ್ಠವಾಗದೇ ರಾಜ್ಯ ಹಾಗೂ ರಾಷ್ಟ್ರದ ಪ್ರಗತಿ ಸಾಧ್ಯವಿಲ್ಲ. ಮಕ್ಕಳ ಪೌಷ್ಟಿಕತೆ, ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಆಡಳಿತ ವ್ಯವಸ್ಥೆಯನ್ನು ಸದೃಢಗೊಳಿಸುವುದು ನಮ್ಮ ಜನಸೇವೆಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

ಮಿಣಜಗಿ ಗ್ರಾಮದಂತಹ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ಜನರಿಗೆ ಗೌರವಯುತ ಜೀವನ ಸೌಲಭ್ಯ ಒದಗಿಸುವುದೇ ನಮ್ಮ ರಾಜಕೀಯ ಬದ್ಧತೆ ಎಂದು  ತಿಳಿಸಿದ ಅವರು, ಅಫಜಲಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಕಲ್ಪ ನಿರಂತರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್, ಜಿ.ಪಂ. ಎಇಇ ಶರಣಯ್ಯ ಸ್ವಾಮಿ, ಪಿಡಿಒ ಸಿದ್ಧರಾಮ ಚಿಂಚೋಳಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...