ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

Date:

Share post:

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ -1098, ಸಲಹಾ ಮಂಡಳಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿ.ಎಮ್.ಕೇರ, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಬಾಲ್ಯವಿವಾಹ ಪ್ರಕರಣಗಳಲ್ಲಿ ನ್ಯಾಯಾಲಯವು ಕುಟುಂಬದ 4 ಜನ ಸದಸ್ಯರಿಗೆ ಶಿಕ್ಷೆಯನ್ನು ವಿಧಿಸಿರುತ್ತದೆ. ಇಂತಹ ಇತ್ಯರ್ಥಗೊಂಡ ನ್ಯಾಯಾಲಯಗಳ ಪ್ರಕರಣಗಳನ್ನು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಜನರಿಗೆ ಅರಿವು ನೀಡಬೇಕೆಂದು ಸೂಚನೆ ನೀಡಿದರು.

ಬಾಲಗರ್ಭಿಣಿ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡ್ಡಾಯವಾಗಿ ಪ್ರಥಮ ವರ್ತಮಾನ ವರದಿಯನ್ನು ಮಾಡಬೇಕು. ಕೇವಲ ಹೇಳಿಕೆಗಳನ್ನು ನೀಡದೆ ಸಂಬಂಧಪಟ್ಟ ಠಾಣೆಗೆ ತೆರಳಿ ವರದಿ ಮಾಡುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೋವಿಡ್‍ನಲ್ಲಿ ಪಾಲಕರನ್ನು ಕಳೆದುಕೊಂಡಿರುವ ಪಿ.ಎಂ.ಕೇರ್ ಯೋಜನೆ ಅಡಿ ದಾಖಲಾಗಿರುವ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಸ್ನೇಹ ಪತ್ರವನ್ನು ವಿತರಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ವಿ. ಮಂಜುಳಾ ಪಾಟೀಲ ಅವರು ಪಿ.ಪಿ.ಟಿ. ಮೂಲಕ ಪ್ರತಿಯೊಂದು ಇಲಾಖೆಯ ಮಾಹಿತಿ ನೀಡಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಹಾನಗರ ಪಾಲಿಕೆ ಆಯುಕ್ತರಾದ ಅವಿನಾಶ ಶಿಂಧೆ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ದೊಡ್ಡಮನಿ, ಡಿ.ಹೆಚ್.ಓ. ಡಾ.ಶರಣಬಸಪ್ಪ ಕ್ಯಾತನಾಳ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕ ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆಪ್ತ ಸಮಾಲೋಚಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...