ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Date:

Share post:

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು.

ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಿಸಿ ವಿಧಿಸಿದ ಗುತ್ತಿಗೆ ಶುಲ್ಕದ ಮೊತ್ತ 2 ಕೋಟಿ 3.7 ಲಕ್ಷ ರೂಪಾಯಿ ಭರಿಸಲು ಆದೇಶವಾಗಿದ್ದು, ಸರ್ಕಾರಿ ನೌಕರರ ಸಂಘ ಯಾವುದೇ ಆದಾಯ ಹೊಂದಿರುವುದಿಲ್ಲ. ಹಾಗಾ ವಿಧಿಸಿದ ಗುತ್ತಿಗೆ ಅವಧಿ ಶುಲ್ಕವನ್ನು ಸಂಪೂರ್ಣ ವಿನಾಯಿತುಗೊಳಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳುಂಡಗಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ತಕ್ಷಣವೇ ಜಿಲ್ಲಾ ಸರ್ಕಾರಿ ನೌಕರರ ಭವನದ ನಿವೇಶನಕ್ಕೆ ವಿಧಿಸಿದ ಶುಲ್ಕದ ಮೊತ್ತ ವಿನಾಯಿತಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಸೂಚಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಧರ್ಮರಾಯ ಜವಳಿ, ಚಂದ್ರಕಾoತ ಏರಿ, ಎಂ ಬಿ. ಪಾಟೀಲ, ಕೃಷ್ಣಚಾರಿ ಜೋಶಿ, ರಾಜೇಶ ನೀಲಳ್ಳಿ, ಸಂತೋಷ ಸಲಗರ, ಅಣ್ಣಾರಾಯ ಹಾಬಾಳಕರ, ಪೀರಪ್ಪ, ರಾಜಶೇಖರ ಕುರಿಕೊಟಾ, ಆನಂದ, ಹುಸೇನ್ ಪಾಶಾ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...