ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

Date:

Share post:

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಪುಟ್ಟಮಣಿ ದೇವಿದಾಸ ಸಹಾಯಕ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರು ಗೋದುತಾಯಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರು ತಮ್ಮ ಮುಖ್ಯ ಅತಿಥಿಯ ಭಾಷಣದಲ್ಲಿ ಭಾಷೆಯ ಮಹತ್ವ ವೈಶಿಷ್ಟತೆಗಳು, ಭಾಷೆಯ ಅಳಿವು ಉಳಿವು ವಿವಿಧ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾತನಾಡಿದರು.

 

ಈ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಕನ್ನಡ ಭಾಷೆಯ ಮಹತ್ವವನ್ನು ಮತ್ತು ವಿವಿಧ ಭಾಷೆಗಳ ಅಳವಡಿಕೆಯ ಮೂಲಕ ಭಾಷೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕವಿತಾ ಠಾಕೂರ್, ಬಸಮ್ಮ ಗೊಬ್ಬುರ, ಡಾ.ಜ್ಯೋತಿಪ್ರಕಾಶ ದೇಶಮುಖ, ಕವಿತಾ ಎ ಎಮ್, ಡಾ ಶ್ರೀದೇವಿ ಸಿದ್ದಣ್ಣ, ಅಶ್ವಿನಿ ಮಠ್,ಡಾ ಮೌಶಿನಾ ಫಾತಿಮಾ, ಡಾ ಮಮತಾ ಬಿ ನಾಟಿಕಾರ್, ತಸ್ಮಿಯಾ ರೂಬಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...