ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಕೊರತೆ ಇಲ್ಲ: ಆಹಾರ ಇಲಾಖೆ ಡಿಡಿ ಸ್ಪಷ್ಟನೆ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಗೃಹ ಬಳಕೆ ಅಡುಗೆ ಅನಿಲ ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು. ದೇಶಾದ್ಯಂತ ಎಲ್.ಪಿ.ಜಿ. (LPG) ಉತ್ಪಾದನೆ ಮತ್ತು ಬಾಟಲಿಂಗ್ ಎರಡು ಹೆಚ್ಚಿರುವುದರಿಂದ ದೇಶಿಯ ಎಲ್.ಪಿ.ಜಿ. (LPG) ಯ ಕೊರತೆಯಿಲ್ಲ. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (ಸಿಲಿಂಡರಗಳು) ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನುಮಾಡಿಕೊಳ್ಳಬಾರದೆಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ IVRS/Missed Call ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಿ ಸದರಿ ಸಿಸ್ಟಮ್‍ಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ IOCL, HPCL ಹಾಗೂ BPCL LPG ತೈಲ ಕಂಪನಿಗಳು ಗ್ರಾಹಕರಿಗೆ 6 ಬುಕ್ಕಿಂಗ್ ವಿಧಾನಗಳನ್ನು ಲಭ್ಯವಿದ್ದು, IVRS, Missed Call, Whatsapp, Mobile Application, OMC Portal ಹಾಗೂ ಪಾವತಿ ಅಪ್ಲಿಕೇಶನ್ ಗಳು (Paytm/ PhonePe) ನಂತಹ ಇತ್ಯಾದಿ. ಗ್ರಾಹಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ವ್ಯವಸ್ಥೆಯನ್ನು ಬಳಸಬೇಕು.

ಬೇಡಿಕೆಯ ಭಾಗವನ್ನು ನಿರ್ವಹಿಸಲು, ಪ್ರತಿ ಗ್ರಾಹಕರಿಗೆ ಕೊನೆಯ ಮರುಪೂರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್- ಬುಕ್ಕಿಂಗ್ ಅವಧಿಯನ್ನು ನಿಗದಿಪಡಿಸಲಾಗಿದೆ. ಒಂದು ವೇಳೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯಾ ತಾಲ್ಲೂಕಿನ ತಹಸೀಲ್ದಾರರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಕಛೇರಿಯ ದೂರವಾಣಿ ಸಂಖ್ಯೆ: 08472-200112 ಗೆ ಕರೆ ಮಾಡಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...