ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Date:

Share post:

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿ ಫಾದರ್ ಮ್ಯಾಕ್ಸಿಮ್ ಅವರು ಮಾತನಾಡಿ, ಕಾರಾಗೃಹದ ಬಂದಿಗಳಿಗೆ ಈ ಸಂಸ್ಥೆಯಲ್ಲಿ ಮನಃ ಪರಿವರ್ತನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ತಾವೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿ ಇಲ್ಲಿಂದ ಬಿಡುಗಡೆ ಹೊಂದಿ ತಮ್ಮ ಕುಟುಂಬದೊoದಿಗೆ ಒಳ್ಳೆಯ ಜೀವನ ನಡೆಸಿ ಎಂದು ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ. ಸುರೇಶ ಅವರು ಮಾತನಾಡಿ, ಮಹಿಳಾ ಬಂದಿಗಳಿಗೆ ಕರಕುಶಲ, ಕೌಶಲ್ಯಾಧಾರಿತ ತರಬೇತಿ ಸೇರಿದಂತೆ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಮನಃ ಪರಿವರ್ತನೆ ಹೊಂದಲು ಪ್ರಯತ್ನಿಸಲಾಗುತ್ತಿದೆ. ತಾವು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಬಂದಿಗಳಿಗೆ ವಿವಿಧ ಆಟೋಟಗಳನ್ನು ಹಮ್ಮಿಕೊಂಡು ಬಂದಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟರವರು ಮಹಿಳಾ ಬಂದಿ ವಿಭಾಗಕ್ಕೆ ವಾಟರ್ ಕೂಲರ್ ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ರಾಕೇಶ ಕಾಂಬ್ಳೆ, ಸಹಾಯಕ ಅಧೀಕ್ಷಕರಾದ ಸುರೇಶ ಬಿ, ಚನ್ನಪ್ಪ ಯಟಗಾಲ್, ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಫಾದರ್ ವಿಲಿಯಂ ಮಿರಂಡಾ, ಬ್ರದರ್ ಫ್ಲೇಮಿಂಗ್, ಜೀಜಾ, ಅನಿತಾ, ಜೈಲರ್‌ಗಳಾದ ಸಾಗರ್ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಉಪಸ್ಥಿತರಿದ್ದರು.

ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮೂಲಗೆ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಿಸ್ಟರ್ ಡೈನಾ ಮತ್ತು ಸಿಸ್ಟರ್ ವಸಂತಾ ವಂದಿಸಿದರು. ಈ ಸಂದರ್ಭದಲ್ಲಿ ಕಾರಾಗೃಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ...