ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

Date:

Share post:

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ ಸಿ.ಎಸ್.ಆರ್ ಯೋಜನೆಯಡಿ ಅಲಿಂಕೋ (ALIMCO) ಘಟಕ ಕಲಬುರಗಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಪುನರ್‍ವಸತಿ ಕೇಂದ್ರ (DDRC) ಕಲಬುರಗಿ ಇವುಗಳ ಸಹಯೋಗದೊಂದಿಗೆ ಕಲಬುರಗಿ ಅಲಿಂಕೋ ಘಟಕ ಹಾಗೂ ಡಿ.ಡಿ.ಆರ್.ಸಿ ಕೇಂದ್ರ ಟ್ರಾಮಾ ಕೇರ್ ಸೆಂಟರ್ ನೆಲಮಹಡಿಯಲ್ಲಿ ಗುರುವಾರ ವಿಕಲಚೇತನ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ 104 ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ಮೊತ್ತದ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ ಹುಸೇನ್ ಖಾನ್, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ. ಆರ್, ಡಾ. ರಾಜಶೇಖರ ಮಾಲಿಪಾಟೀಲ್, ಡಾ. ನಿಶ್ಯಾಂತ ಪಾಣಿಗಾಂವ, ಡಿಡಿಆರ್‍ಸಿ ಕಾರ್ಯದರ್ಶಿ ಅಬ್ದುಲ್ ವಾಹಿದ್ ಮುನೀರ್, ಅಲಿಂಕೋ ಸಂಸ್ಥೆಯ ಸಿಬ್ಬಂದಿ ಅಭಿಷೇಕಕುಮಾರ, ಆನಂದ ಮತ್ತು ಡಿ.ಡಿ.ಆರ್.ಸಿ ಕಚೇರಿಯ ಸಿಬ್ಬಂದಿಗಳು, ವಿಕಲಚೇತನ ಕ್ಷೇತ್ರದಲ್ಲಿ ಕಾರ್ಯನಿರ್ವಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ ಎಂ.ಆರ್.ಡಬ್ಲ್ಯೂ ಅವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...