ಕಲಬುರಗಿ: 11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಸಚಿವ ಶಿವಾನಂದ ಪಾಟೀಲ ಆದೇಶ

Date:

Share post:

ಕಲಬುರಗಿ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ 7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದಾರೆ.

 

ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ.

 

ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು . ನೋಂದಣಿ ಮತ್ತು ಖರೀದಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸಿದ್ದತೆ ಮಾಡಿಕೊಂಡು ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿದ್ದಾರೆ.

ರೈತರ ಹೆಸರಿನಲ್ಲಿ ವರ್ತಕರು ಮತ್ತು ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಖರೀದಿ ಪ್ರಗತಿಯ ವಿವರವನ್ನು ಪ್ರತಿ ದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...