ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿ ಇಕ್ರಮ‌ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಂದ ಅಧಿಕಾರ ವಹಿಸಿಕೊಂಡರು.

ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು.

ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರಾಗಿ ವರ್ಗಾಯಿಸಿ ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್ ಶರೀಫ್ ಅವರನ್ನು ನಿಯೋಜಿಸಿತ್ತು.

ಕರ್ನಾಟಕ ಮೂಲದವರಾದ ಇಕ್ರಮ್ ಶರೀಫ್ ಅವರು ಅಮೆರಿಕಾದ ವರ್ಜೀನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.(ಅರ್ಥಶಾಸ್ತ್ರ) ಪದವಿ ಪಡೆದಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿತ್ತು. ಇವರು ಕಳೆದ 2024ರ ಜುಲೈ ನಿಂದ ಇಲ್ಲಿಯವರೆಗೆ ಹಣಕಾಸು ಇಲಾಖೆಯಲ್ಲಿ ಆಯವ್ಯಯ ಸಿದ್ದಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದು ನೂತನ ಜಿಲ್ಲಾಧಿಕಾರಿಗಳಿಗೆ ಶುಭಕೋರಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...