ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

Date:

Share post:

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಪಟ್ಟಣದ ಮರಗೋಳ ಕಾಲೇಜಿನ ಬಳಿಯ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ.

ನಾಗರಾಜ (40) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ತಿರುಪತಿ ದೇವಕರ ಕೊಲೆ ಆರೋಪಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ತಿರುಪತಿ, ತನ್ನ ಸೋದರತ್ತೆಯ ಆಸ್ತಿಗಾಗಿ ಜೇವರ್ಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದ. ಆದರೆ ಇದಕ್ಕೆ ಅತ್ತೆಯ ಮಗ ನಾಗರಾಜ ಅಡ್ಡಿಯಾಗಿದ್ದ. ಇದರಿಂದ ಇತ್ತೀಚೆಗೆ ತೀವ್ರ ಕುಪಿತಗೊಂಡಿದ್ದ ತಿರುಪತಿ ನಾಗರಾಜನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಕಲಬುರಗಿ ಎಎಸ್‌ಪಿ ಮಹೇಶ ಮೇಘಣ್ಣನವರ, ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ಪಿ.ಎಸ್.ವನಂಜಕರ, ಪಿಎಸ್‌ಐ ಚಂದ್ರಕಾಂತ ಮೆಕಾಲೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು.

ಕೊಲೆಯ ಬಳಿಕ ಆರೋಪಿ ತಿರುಪತಿ ಪೊಲೀಸರಿಗೆ ಶರಣಾಗಿದ್ದಾನೆ.

ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...