ಕಲಬುರಗಿ| ಫೋನ್‌ಪೇ ಮೂಲಕ 15 ಸಾವಿರ ಪಡೆದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Date:

Share post:

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಅನುದಾನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ಫೋನ್‌ಪೇ ಮೂಲಕ ₹15 ಸಾವಿರ ಸ್ವೀಕರಿಸಿದ್ದ ಕರದಾಳ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್‌ರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಆಗಿರುವ ಸಂತೋಷ ರಾಠೋಡ ಬಂಧಿತ ಆರೋಪಿ. ಹನಿಕೆರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಅವರು ಲೋಕಾಯುಕ್ತಕ್ಕೆ ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ದೂರಿನ ಪ್ರಕಾರ, ಸಿಖಂದರ್ ಅವರ ಅಕ್ಕ ಸವಿತಾ ಅವರಿಗೆ ಸರ್ಕಾರದ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ಬಿಡುಗಡೆ ಮಾಡಲು ಸಂತೋಷ ರಾಠೋಡ 22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಮೊದಲ ಹಂತವಾಗಿ ಫೋನ್‌ಪೇ ಮೂಲಕ ₹15 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಅವರನ್ನು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಬಂಧಿತ ಆರೋಪಿಯನ್ನು ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...