ಕಲಬುರಗಿ| ಗನ್‌ನಿಂದ ಗುಂಡು ಹಾರಿಸಿಕೊಂಡು ಸಿಎಆರ್ ಪೇದೆ ಆತ್ಮಹತ್ಯೆ

Date:

Share post:

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ ಬಳಿ ನಡೆದಿದೆ.

 

ಮೃತರನ್ನು ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ನಿವಾಸಿ ಶಿವಕುಮಾರ್ ಮಾವನೂರ (32) ಎಂದು ಗುರುತಿಸಲಾಗಿದೆ.

2016ನೇ ಬ್ಯಾಚ್‌ನ ಪೊಲೀಸ್ ಪೇದೆಯಾಗಿದ್ದ ಶಿವಕುಮಾರ್ ಅವರು ಕರ್ತವ್ಯ ನಿರ್ವಹಣೆಗೆ ನೀಡಲಾಗಿದ್ದ 7.62 ಸೇವಾ ಗನ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಶಿವಕುಮಾರ್ ಅವರು ಕೆಲ ತಿಂಗಳ ಹಿಂದೆ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಯಾಗಿದ್ದು, ಸಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

 

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ ನಾಯಕ್, ಎಸಿಪಿ ಶರಣಪ್ಪ ಸುಬೇದಾರ, ಪಿಐ ಮಹಾಂತೇಶ ಪಾಟೀಲ್, ಮತ್ತಿತ್ತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಘಟನೆ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...