# hikalaburagi.com > idu nimmade suddi ## Posts - [ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ](https://hikalaburagi.com/kalyana-karnataka/4230/): ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ ಬಿಸಿ ಗಾಳಿ ಪರಿಸ್ಥಿತಿ ಹೆಚ್ಚಾಗೋ ಸಾಧ್ಯತೆಯಿಂದ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆಯಾಗಿ ಹೀಟ್ ವೇವ್ (ಶಾಖದ ಹೊಡೆತ) ಆರೆಂಜ್ ಅಲರ್ಟ್ ನೀಡಿದ್ದು, ಬಿಸಿಲಿನ ಹೊಡೆತದಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆ ವರೆಗೆ ಮನೆಯಿಂದ ಹೊರಹೋಗುವದನ್ನು ಸಾಧ್ಯವಾದಷ್ಟು ಮಟ್ಟಿಗೆ ತಪ್ಪಿಸುವಂತೆ ಡಿ.ಸಿ ಬಿ.ಫೌಜಿಯಾ ತರನ್ನಮ್ ಅವರು ಸಲಹೆ ನೀಡಿದ್ದಾರೆ.   ಬಿಸಿಲಿನಲ್ಲಿ ಹೋಗುವಾಗ ದೇಹಕ್ಕೆ ರಕ್ಷಣಾತ್ಮಕವಾಗಿ ಕನ್ನಡಕಗಳು, ಛತ್ರಿ-ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಬೇಕು. ಪ್ರಯಾಣಿಕರು ತಮ್ಮೊಂದಿಗೆ ನೀರು ತೆಗೆದುಕೊಂಡು ಹೋಗಬೇಕು. ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸುವಂತೆ ಹಾಗೂ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವಂತೆ ಸಲಹೆ ನೀಡಿರುವ ಅವರು, ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕೆಂದು ಸಾರ್ವಜನಿಕರಲ್ಲಿ ಡಿ.ಸಿ. ಮನವಿ ಮಾಡಿದ್ದಾರೆ.   ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ […] - [ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ](https://hikalaburagi.com/kalyana-karnataka/4228/): ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 14ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ-21 ರನ್ವಯ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ ನಿಷೇಧಿಸಿ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಡಿ.ಸಿ ಬಿ.ಫೌಜಿಯಾ ತರನ್ನಮ್ ಅವರು ಆದೇಶಿಸಿದ್ದಾರೆ. - [ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ](https://hikalaburagi.com/kalyana-karnataka/kalaburagi-news/4225/): ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಭಕ್ತಿಪೂರ್ವಕವಾಗಿ ಆಚರಣೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವದ ವಿಚಾರಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಡಿ.ಎಸ್ ಲಕ್ಷ್ಮಣ ಶೃಂಗೇರಿ, ಪಿಡಿ ಜಗದೇವಪ್ಪ, ಸಿಪಿಓ ಎಸ್.ಎಸ್. ಮಠಪತಿ, ಮಧುಮತಿ (ಡಿಡಿ ಯೋಜನೆ), ಎ.ಎಸ್ ರೇವಣಸಿದ್ಧಪ್ಪ, ಎಓ ಶ್ರೀಕಾಂತ್ ಸೇರಿದಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. - [ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ](https://hikalaburagi.com/kalyana-karnataka/4222/): ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ ವಿ.ಜಿ.ಮಹಿಳಾ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು 600ಕ್ಕೆ 598 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿಲ್ಲಾವಾರು ಫಲಿತಾಂಶ ಅಂಕಪಟ್ಟಿಯಲ್ಲಿ ಕಲಬುರಗಿ ಜಿಲ್ಲೆ 29ನೇ ಸ್ಥಾನದಲ್ಲಿದರೂ ಕಳೆದ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ-1ರ ಫಲಿತಾಂಶಕ್ಕೆ ಹೋಲಿಸಿದಾಗ ಶೇ.21.27ರಷ್ಟು ಹೆಚ್ಚಳವಾಗಿದೆ. 2025ರಲ್ಲಿ ಶೇ.55.70 ರಷ್ಟಿದ್ದ ಫಲಿತಾಂಶ 2026ರಲ್ಲಿ ಶೇ.76.97ರಷ್ಟು ಫಲಿತಾಂಶ ಪಡೆಯುವ ಮೂಲಕ ಗಣನೀಯವಾಗಿ ಉತ್ತೀರ್ಣ ಪ್ರಮಾಣ ಹೆಚ್ಚಿಸಿಕೊಂಡಿದೆ. - [ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ](https://hikalaburagi.com/kalyana-karnataka/kalaburagi-news/4219/): ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ ಸಿ.ಎಸ್.ಆರ್ ಯೋಜನೆಯಡಿ ಅಲಿಂಕೋ (ALIMCO) ಘಟಕ ಕಲಬುರಗಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಪುನರ್‍ವಸತಿ ಕೇಂದ್ರ (DDRC) ಕಲಬುರಗಿ ಇವುಗಳ ಸಹಯೋಗದೊಂದಿಗೆ ಕಲಬುರಗಿ ಅಲಿಂಕೋ ಘಟಕ ಹಾಗೂ ಡಿ.ಡಿ.ಆರ್.ಸಿ ಕೇಂದ್ರ ಟ್ರಾಮಾ ಕೇರ್ ಸೆಂಟರ್ ನೆಲಮಹಡಿಯಲ್ಲಿ ಗುರುವಾರ ವಿಕಲಚೇತನ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನ 104 ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ಮೊತ್ತದ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ ಹುಸೇನ್ ಖಾನ್, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ. ಆರ್, ಡಾ. ರಾಜಶೇಖರ ಮಾಲಿಪಾಟೀಲ್, ಡಾ. […] - [ಕಲಬುರಗಿ| ಲಾರಿ - ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ](https://hikalaburagi.com/kalyana-karnataka/4216/): ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಯುವ ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಫರಹತಾಬಾದ ಸಮೀಪ ಗುರುವಾರ ನಡೆದಿದೆ. ಜೇವರ್ಗಿ ಪಟ್ಟಣದ ಲಕ್ಷ್ಮಿ ಚೌಕ್ ನಿವಾಸಿಗಳಾದ ಗಂಗಾರಾಮ ಶರಣಪ್ಪ(29) ಮೃತಪಟ್ಟ ದುರ್ದೈವಿಯಾಗಿದ್ದು, ತಿಪ್ಪಣ್ಣ ಸುಭಾಷ್ ಎಂಬಾತರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ತಿಪ್ಪಣ್ಣ ಸುಭಾಷ್ ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆ – 1 ರಲ್ಲಿ ಪ್ರಕರಣ ದಾಖಲಾಗಿದೆ. - [ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ](https://hikalaburagi.com/kalyana-karnataka/4213/): ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಮಾರ್ಚ್ 26ರ ಬೆಳಗಿನ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಎಲ್ಲಾ ತರಹದ ಮದ್ಯಪಾನ ಮಾರಾಟ ಮಾಡುವುದನ್ನು ನಿಷೇಧಿಸಿ, ಬಾರ್ ಹಾಗೂ ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ. ಈ ರಾಮನವಮಿ ಆಚರಣೆ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. - [ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್](https://hikalaburagi.com/kalyana-karnataka/kalaburagi-news/4210/): ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಲಭ್ಯತೆ, ಮೇವಿನ ಸಂಗ್ರಹ ಮತ್ತು ಬೇಸಿಗೆಯ ಶಾಖದ ಅಲೆ ಎದುರಿಸುವ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಜನವರಿ 01 ರಿಂದ ಮಾರ್ಚ್ 25, 2026 ರವರೆಗೆ ವಾಡಿಕೆ ಮಳೆಗಿಂತ (12.8 ಮಿ.ಮಿ) ಶೇ. 180% ರಷ್ಟು ಹೆಚ್ಚು ಅಂದರೆ ಒಟ್ಟು 35.9 ಮಿ.ಮಿ ಹೆಚ್ಚುವರಿ ಮಳೆಯಾಗಿರುತ್ತದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ಯಾವುದೇ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸದ ಕಾರಣ, ಟ್ಯಾಂಕರ್ ನೀರು ಸರಬರಾಜಿಗೆ ಎಸ್ಡಿಆರ್ಎಫ್ (SDRF) ಅನುದಾನ ಲಭ್ಯವಿರುವುದಿಲ್ಲ […] - [ಕಲಬುರಗಿ| ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ: ಡಾ.ಎಚ್.ಎಸ್.ಜಂಗೆ](https://hikalaburagi.com/kalyana-karnataka/kalaburagi-news/4207/): ಕಲಬುರಗಿ : ಕ್ರೀಡಾಕೂಟಗಳಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆಯಾಗುತ್ತದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಎಚ್.ಎಸ್.ಜಂಗೆ ಹೇಳಿದರು. ನಗರದ ದೊಡ್ಡಪ್ಪ ಅಪ್ಪ ಆಟದ ಮೈದಾನದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಂತರ್ ಮಹಾವಿದ್ಯಾಲಯಗಳ ಖೋ ಖೋ ಮಹಿಳಾ ತಂಡದ ಆಯ್ಕೆ ಪ್ರಕ್ರಿಯೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.  ಖೋ-ಖೋ ನಮ್ಮ ದೇಶದ ಪರಂಪರೆಯ ಕ್ರೀಡೆಯಾಗಿದ್ದು, ಇದು ವೇಗ, ಚಾತುರ್ಯ, ತಂಡದ ಮನೋಭಾವ ಮತ್ತು ಶಿಸ್ತುಗಳನ್ನು ಬೆಳೆಸುವ ಅತ್ಯುತ್ತಮ ಕ್ರೀಡೆಯಾಗಿದೆ. ವಿದ್ಯಾರ್ಥಿಗಳಲ್ಲಿ ಧೈರ್ಯ, ಸಹನಶೀಲತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಮುಂದಿನ ದಿನಗಳಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದೊಂದಿಗೆ ಅಂತರ್‌ವಿಶ್ವವಿದ್ಯಾಲಯ ಕ್ರೀಡೆಗಳನ್ನು ಹಮ್ಮಿಕೊಳ್ಳುವ ಯೋಜನೆ ಇದೆ ಎಂದರು.   ಮುಖ್ಯ ಅತಿಥಿ ಮಹಿಳಾ ಪೊಲೀಸ್ ಅಧಿಕಾರಿ ಅಕ್ಕಮಹಾದೇವಿ ಮಾತನಾಡಿ, ಓದು ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೇ ಮುಖ್ಯವಾಗಿದ್ದು, ಇದು ಜೀವನದಲ್ಲಿ ಶಿಸ್ತನ್ನು, ತಂಡದ ಮನೋಭಾವವನ್ನು ಮತ್ತು […] - [ಕಲಬುರಗಿ| ವಿಪತ್ತು ತರುವ ಆಪತ್ತಿನ ಸಂದರ್ಭದಲ್ಲಿ ಸಮಯ ಪ್ರಜ್ಞೆ, ಜಾಗೃತಿ ಮುಖ್ಯ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್](https://hikalaburagi.com/kalyana-karnataka/kalaburagi-news/4198/): ಕಲಬುರಗಿ: ದುರ್ಘಟನೆಗಳು ಸಂಭವಿಸಿದಾಗ ವಿಪತ್ತು ನಿರ್ವಹಣಾ ತಂಡದ ಮೊದಲ ಜವಬ್ದಾರಿ ಅಲ್ಲಿ ಸಿಲುಕಿರುವ ಜನರ ಜೀವ ಉಳಿಸುವುದು ಹಾಗೂ ದುರ್ಘಟನೆ ವಿಸ್ತರಿಸದಂತೆ ಕ್ರಮವಹಿಸುವುದು ಆಧ್ಯತೆಯಾಗಿರುತ್ತದೆ, ವಿಪತ್ತು ತರುವ ಆಪತ್ತಿನ ಸಂದರ್ಭದಲ್ಲಿ ಸಮಯ ಪ್ರಜ್ಞೆ ಹಾಗೂ ಜಾಗೃತಿ ಮುಖ್ಯ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಹೇಳಿದರು. ನಗರದ ನಂದೂರ ಕೈಗಾರಿಕೆ ಪ್ರದೇಶದಲ್ಲಿರುವ ಬಿಪಿಸಿಎಲ್ ಡಿಪೋದಲ್ಲಿ ಜಿಲ್ಲಾಡಳಿತ, ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಲಬುರಗಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತು ಆಫ್ ಸೈಟ್ ಅಣುಕು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಇದೊಂದು ಉತ್ತಮ ಪ್ರಾಕ್ಟೀಸ್ ಆಗಿದ್ದು, ಇಂತಹ ಅಣುಕು ಪ್ರದರ್ಶನಗಳನ್ನು ಕಾಲ-ಕಾಲಕ್ಕೆ ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಹಾಗೂ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.   ಅವಘಡ ಸಂಭವಿಸಿದ ಸಮಯದಲ್ಲಿ ಎನ್ಡಿಆರ್ ಎಫ್, ಎಸ್ ಡಿ ಆರ್ ಎಫ್, ಕಂದಾಯ, ಆರೋಗ್ಯ, ವಿದ್ಯುತ್ ಇಲಾಖೆಗಳು ಸೇರಿದಂತೆ ಇತರೆ ಸಂಬಂಧಿತ ಇಲಾಖೆಗಳು ಯಾವ ರೀತಿ […] - [ಕಲಬುರಗಿ: ಚಾಂದ್ ಬಿಬಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ](https://hikalaburagi.com/kalyana-karnataka/kalaburagi-news/4195/): ಕಲಬುರಗಿ: ಮಹಿಳೆಯರು ತಮ್ಮಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಮತ್ತು ಸ್ವಾವಲಂಬನೆಯನ್ನು ಬಲಪಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಚಾಂದ್ ಬಿಬಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ರುಖ್ಸಿಂದಾ ಹೀನಾ ಅಕಬರಿ ಹೇಳಿದರು. ನಗರದ ಚಾಂದ್ ಬಿಬಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಶನ್ ಅವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳಾ ಸಬಲೀಕರಣವು ಸಮಗ್ರ ಸಮಾಜದ ಪ್ರಗತಿಯ ಮೂಲಸ್ತಂಭವಾಗಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಪಡೆದು ಮುನ್ನಡೆಯಬೇಕು ಎಂದು ಹೇಳಿದರು.   ಸಂಪನ್ಮೂಲ ವ್ಯಕ್ತಿಗಳಾದ ಅನ್ವರ್ ಜಮಾದಾರ್ ಅವರು ಮಾತನಾಡಿ, “ಮಹಿಳೆಯರು ಸದೃಢ ಸಮಾಜದ ನಿರ್ಮಾತೃಗಳು. ಮಹಿಳೆಯ ಶಕ್ತಿ, ಜ್ಞಾನ ಮತ್ತು ಸಹನೆಯೇ ಸಮಾಜದ ನಿಜವಾದ ಬಲ” ಎಂದು ಹೇಳಿದರು. ಪ್ರಸ್ತಾವಿಕವಾಗಿ ಮಾತನಾಡಿದ ಆಯೋಜಕರಾದ ಡಾ.ಶರಬಯ್ಯ ಸ್ವಾಮಿ, “ಮಹಿಳೆಯರು ಎಂದರೆ ಕೇವಲ ಮಹಿಳೆಯಲ್ಲ; ಅವರು ತಂಗಿಯಾಗಿ, ತಾಯಿಯಾಗಿ, ಮಾಡದಿಯಾಗಿ, ರಾಜಕಾರಣಿಯಾಗಿ, ಪ್ರಧಾನಮಂತ್ರಿಯಾಗಿ ಹಾಗೂ ರಾಷ್ಟ್ರಪತಿಯಾಗಿ ವಿವಿಧ ಪಾತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ” […] - [ಕಲಬುರಗಿ: ಸಿಡಿಲು ಬಡಿದು ಯುವಕ ಬಲಿ](https://hikalaburagi.com/kalyana-karnataka/4192/): ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್‌ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಬಡಿದ ಸಿಡಿಲಿಗೆ ಯುವಕ ಮೃತಪಟ್ಟಿದ್ದಾನೆ. ಶಾಲಾಬಾಯಿ-ಕಿಶನ್ ದಂಪತಿಗೆ ನಾಲ್ವರು ಮಕ್ಕಳಿದ್ದು, ಇವರ ಪೈಕಿ ಮೂವರು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಕುಟುಂಬಕ್ಕೆ ಆಸರೆಯಾಗಿ ಒಕ್ಕಲುತನ ಮಾಡಿಕೊಂಡಿದ್ದ ದ್ವಿತೀಯ ಪುತ್ರ ಮಹೇಶ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. - [ಕಲಬುರಗಿ| ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದಲ್ಲಿ ಏಜೆನ್ಸಿ ಕಪ್ಪು ಪಟ್ಟಿಗೆ: ಡಿ.ಸಿ. ಬಿ.ಫೌಜಿಯಾ ತರನ್ನುಮ್](https://hikalaburagi.com/kalyana-karnataka/kalaburagi-news/4190/): ಕಲಬುರಗಿ: ಮಧ್ಯ ಪ್ರಾಚ್ಯ ದೇಶದಲ್ಲಿನ ಯುದ್ಧದ ಹಿನ್ನೆಲೆಯಲ್ಲಿ ಜನ ಆತಂಕಗೊಂಡು ಸಿಲಿಂಡಿರ್ ಬುಕ್ಕಿಂಗ್ ಮಾಡುತ್ತಿದ್ದು, ಇದನ್ನೆ ಬಂಡವಾಳ ಮಾಡಿಕೊಂಡು ಕಾಳ ಸಂತೆಯಲ್ಲಿ ಸಿಲಿಂಡಿರ್ ಮಾರಾಟ, ಅನಧಿಕೃತ ಫಿಲ್ಲಿಂಗ್ ಮಾಡಿದಲ್ಲಿ ಅಂತಹ ಏಜೆನ್ಸಿಗಳ ಪರವಾನಿಗೆ ರದ್ದುಪಡಿಸಿ ಅಗತ್ಯ ವಸ್ತುಗಳ ಕಾಯ್ದೆಯಡಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಐ.ಓ.ಸಿ.ಎಲ್, ಹೆಚ್.ಪಿ.ಸಿ.ಎಲ್., ಬಿ.ಪಿ.ಸಿ.ಎಲ್ ಕಂಪನಿ ಅಧಿಕಾರಿಗಳು ಮತ್ತು ಡೀಲರ್‌ಗಳೊಂಡಿದೆ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ಲೋಪವಾಗದಂತೆ ಗ್ಯಾಸ್ ಏಜೆನ್ಸಿಗಳು ಕಾರ್ಯನಿರ್ವಹಿಸಬೇಕು. ಇನ್ನು ಫಿಫೋ (ಮೊದಲು ನೊಂದಾಯಿಸಿದವರಿಗೆ ಮೊದಲು ವಿಲೇವಾರಿ) ಮಾದರಿಯಲ್ಲಿ ಸಿಲಿಂಡರ್ ಸರಬರಾಜು ಮಾಡಬೇಕು ಎಂದರು. ಜಿಲ್ಲೆಯ ಯಾವುದೇ ಆರೋಗ್ಯ ಸಂಸ್ಥೆಗಳಿಗೆ ಸಿಲಿಂಡಿರ್ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಬಡವರಿಗೆ ರಿಯಾಯಿತ ದರದಲ್ಲಿ ಉಪಹಾರ-ಊಟ ನೀಡುವ ಇಮದಿರಾ ಕ್ಯಾಂಟಿನ್ ಗೂ […] - [ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ](https://hikalaburagi.com/kalyana-karnataka/4187/): ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಕಲಬುರಗಿ ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಒಳಗೊಂಡ ಆಕರ್ಷಕ ಕಾಫಿ ಟೇಬಲ್ ಪುಸ್ತಕ ಹಾಗೂ ಪ್ರವಾಸಿ ಮಾಹಿತಿ ಬ್ರೋಶರ್‌ಗಳನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಆಶಯದಂತೆ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಪ್ರಥಮ ಬಾರಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಈ ಪ್ರಕಟಣೆಗಳನ್ನು ಸಿದ್ಧಪಡಿಸಲಾಗಿದೆ. ಸುಮಾರು ರೂ. 11.05 ಲಕ್ಷ ಅನುದಾನದಲ್ಲಿ ಮುದ್ರಿಸಲಾದ ಈ ಕಾಫಿ ಟೇಬಲ್ ಪುಸ್ತಕ ಹಾಗೂ ಬ್ರೋಶರ್‌ಗಳು ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಇತರೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಒಳಗೊಂಡಿವೆ. ಕಲಬುರಗಿ ಜಿಲ್ಲೆಗೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶಿ ಪ್ರವಾಸಿಗರಿಗೆ ಸಂಕ್ಷಿಪ್ತ ಮತ್ತು ಸ್ಪಷ್ಟ ಮಾಹಿತಿಯನ್ನು ಒದಗಿಸಲು ಬ್ರೋಶರ್‌ಗಳು ಸಹಾಯಕವಾಗಲಿವೆ. ಇದೇ ವೇಳೆ ಪ್ರವಾಸೋದ್ಯಮ ಮೇಳಗಳು, ಟ್ರಾವೆಲ್ […] - [ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ](https://hikalaburagi.com/kalyana-karnataka/kalaburagi-news/4184/): ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬೆಯಲು ಅಣಿಯಾಗಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಬಹಿರಂಗ ಪತ್ರ ಬರೆದಿರುವ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು, ಈ ಪರೀಕ್ಷೆಯು ನಿಮ್ಮ ಮುಂದಿನ ಶಿಕ್ಷಣದ ದಿಕ್ಕನ್ನು ನಿರ್ಧರಿಸುವ ಪ್ರಮುಖ ಘಟ್ಟವಾಗಿದೆ. ಹೀಗಾಗಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಹೆಚ್ಚು ಅಂಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸುವಂತೆ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದಲ್ಲದೆ ಪರೀಕ್ಷೆಗೆ ಶುಭ ಕೋರಿದ್ದಾರೆ. ಪರೀಕ್ಷೆಯು ಒತ್ತಡವಲ್ಲ, ಒಲವಿನ ಸಾಧನೆಗೆ ಸಂಭ್ರಮದ ಸದಾವಕಾಶ. ನಿಮ್ಮ ಪ್ರತಿಭೆಯ ಪ್ರಕಾಶಕ್ಕೆ, ಪರಿಶ್ರಮಕ್ಕೆ ಪ್ರತಿಫಲ ಪಡೆಯುವ ಪ್ರಯತ್ನವಷ್ಟೇ. ಭಯ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ. ಪ್ರಶ್ನೆಪತ್ರಿಕೆ ಗಮನದಿಂದ ಓದಿ ಉತ್ತರಗಳನ್ನು ಸ್ಪಷ್ಟವಾಗಿ ಮತ್ತು ಸುಂದರವಾಗಿ ಬರೆಯಬೇಕು. ಸಮಯದ ಸದ್ವಿನಿಯೋಗ ಅತ್ಯಗತ್ಯ ಎಂದು ಒತ್ತಿ ಹೇಳಿರುವ ಅವರು, ಪರೀಕ್ಷೆ ಜೊತೆಗೆ ಈ ಅವಧಿಯಲ್ಲಿ ಆರೋಗ್ಯದ ಕಡೆ ಗಮನ ಸಹ ನೀಡಬೇಕು. ಸಮತೋಲನ ಆಹಾರ, ಅಗತ್ಯ ನಿದ್ರೆ, ಯಥೇಚ್ಚವಾಗಿ […] - [ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ](https://hikalaburagi.com/kalyana-karnataka/kalaburagi-news/4181/): ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿ ಫಾದರ್ ಮ್ಯಾಕ್ಸಿಮ್ ಅವರು ಮಾತನಾಡಿ, ಕಾರಾಗೃಹದ ಬಂದಿಗಳಿಗೆ ಈ ಸಂಸ್ಥೆಯಲ್ಲಿ ಮನಃ ಪರಿವರ್ತನೆಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ತಾವೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಿ ಇಲ್ಲಿಂದ ಬಿಡುಗಡೆ ಹೊಂದಿ ತಮ್ಮ ಕುಟುಂಬದೊoದಿಗೆ ಒಳ್ಳೆಯ ಜೀವನ ನಡೆಸಿ ಎಂದು ಹಾರೈಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ. ಸುರೇಶ ಅವರು ಮಾತನಾಡಿ, ಮಹಿಳಾ ಬಂದಿಗಳಿಗೆ ಕರಕುಶಲ, ಕೌಶಲ್ಯಾಧಾರಿತ ತರಬೇತಿ ಸೇರಿದಂತೆ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಮನಃ ಪರಿವರ್ತನೆ ಹೊಂದಲು ಪ್ರಯತ್ನಿಸಲಾಗುತ್ತಿದೆ. ತಾವು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ಮಹಿಳಾ ಬಂದಿಗಳಿಗೆ ವಿವಿಧ ಆಟೋಟಗಳನ್ನು ಹಮ್ಮಿಕೊಂಡು ಬಂದಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಸಿಲಿನ […] - [ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ](https://hikalaburagi.com/kalyana-karnataka/4179/): ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಜರುಗಲಿದ್ದು, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಸಂತೋಷದಿಂದ ಪರೀಕ್ಷೆ ಬರೆಯುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಬರೆಯಲು ಸಜ್ಜಾಗಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಬಹಿರಂಗ ಪತ್ರ ಬರೆದು ಶುಭ ಕೋರಿರುವ ಜಿಲ್ಲಾಧಿಕಾರಿಗಳು, ಈಗಾಗಲೇ ಮೂರು ಬಾರಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಬರೆದು ಪ್ರಾಯೋಗಿಕ ಅನುಭವ ಪಡೆದಿದ್ದೀರಿ. ಹೀಗಾಗಿ ಮುಖ್ಯ ಪರೀಕ್ಷೆಯನ್ನು ಹಬ್ಬದ ರೀತಿಯಲ್ಲಿ ಖುಷಿಯಿಂದ ಪರೀಕ್ಷೆ ಬರೆಯಬೇಕು. ಈ ವಾರ್ಷಿಕ ಪರೀಕ್ಷೆಯು ನಿಮ್ಮ ಬಾಳಿನಲ್ಲಿ ಮಹತ್ವದ್ದಾಗಿದ್ದು, ನಿಮ್ಮ ಉನ್ನತ ಫಲಿತಾಂಶ ಪಡೆದು ಅಭಿನಂದನೆಗೆ ಅರ್ಹರಾಗುವುದನ್ನೆ ನಾವು ಆಶಿಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದಿದ್ದಾರೆ. ಪರೀಕ್ಷಾ ಮಂಡಳಿಯೂ ನಿಮಗೆ ಮಾದರಿ ಪ್ರಶ್ನೆ ಪರೀಕ್ಷೆ, ಪಠ್ಯಾಧಾರಿತ ಪ್ರಶ್ನೆ ಕೋಠೀ, ನೀಲ ನಕಾಶೆ ನೀಡಿ ಪರೀಕ್ಷೆಗೆ ಸಿದ್ಧವಾಗಲು ಎಲ್ಲಾ ರೀತಿಯ ಪ್ರಯತ್ನ ಮಾಡಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಮಕ್ಕಳಿಗಾಗಿ ಶಾಲಾ ಶಿಕ್ಷಣ ಇಲಾಖೆಯು […] - [ಕಲಬುರಗಿ| ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ](https://hikalaburagi.com/kalyana-karnataka/4175/): ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ ಮಕಾನದಾರ ಅವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿ ಇದ್ದ ವಿವಿಧ ಕಾಳು ಧಾನ್ಯಗಳು, ನಗದು ಹಣ, ಮನೆಯಲ್ಲಿದ್ದ ಒಂದು ತೊಲೆ ಬಂಗಾರ, ಟಿವಿ, ಫ್ರಿಜ್, ಫ್ಯಾನ್, ಕೂಲರ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಬೆಂಕಿ ಅಂಗಡಿಗೆ ಹೊಂದಿಕೊಂಡಿದ್ದ ಮನೆಯಿಗೂ ವ್ಯಾಪಿಸಿ, ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳಿಗೂ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ. - [ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ](https://hikalaburagi.com/kalyana-karnataka/4173/): ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-01 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23, ಜೇವರ್ಗಿ-17, ಸೇಡಂ-10 ಹೀಗೆ ಜಿಲ್ಲೆಯ ಒಟ್ಟು 141 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.   ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಬಿ.ಎನ್.ಎಸ್.ಎಸ್. ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.   ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರನ್ನು ಹೊರತುಪಡಿಸಿ, ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ […] - [ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಕೊರತೆ ಇಲ್ಲ: ಆಹಾರ ಇಲಾಖೆ ಡಿಡಿ ಸ್ಪಷ್ಟನೆ](https://hikalaburagi.com/kalyana-karnataka/kalaburagi-news/4170/): ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಗೃಹ ಬಳಕೆ ಅಡುಗೆ ಅನಿಲ ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು. ದೇಶಾದ್ಯಂತ ಎಲ್.ಪಿ.ಜಿ. (LPG) ಉತ್ಪಾದನೆ ಮತ್ತು ಬಾಟಲಿಂಗ್ ಎರಡು ಹೆಚ್ಚಿರುವುದರಿಂದ ದೇಶಿಯ ಎಲ್.ಪಿ.ಜಿ. (LPG) ಯ ಕೊರತೆಯಿಲ್ಲ. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (ಸಿಲಿಂಡರಗಳು) ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಯಾರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನುಮಾಡಿಕೊಳ್ಳಬಾರದೆಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕ್ಕಿಂಗ್ ಮಾಡುತ್ತಿರುವುದರಿಂದ IVRS/Missed Call ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಿ ಸದರಿ ಸಿಸ್ಟಮ್‍ಗಳು ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ IOCL, HPCL ಹಾಗೂ BPCL LPG ತೈಲ ಕಂಪನಿಗಳು ಗ್ರಾಹಕರಿಗೆ […] - [ಕಲಬುರಗಿ| ಪೊಲೀಸರ ನೆರವಿನಿಂದ ಮನೆ ಸೇರಿದ ಮಾನಸಿಕ ಆಸ್ವಸ್ಥೆ](https://hikalaburagi.com/kalyana-karnataka/kalaburagi-news/4167/): ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ ಪೋಷಕರ ಮನೆ ಸೇರಿದ ಘಟನೆ ವಾಡಿ ಪಟ್ಟಣದಲ್ಲಿ ರವಿವಾರ ನಡೆದಿದೆ. ಕಳೆದ 2 ತಿಂಗಳ ಹಿಂದೆ ಸಮೀಪದ ಹಲಕರ್ಟಿ ಗ್ರಾಮಕ್ಕೆ ಬಂದಿದ್ದ ರಾಯಚೂರು ತಾಲ್ಲೂಕಿನ ಇಡಪಾನೂರು ಗ್ರಾಮದ ಮಾನಸಿಕ ಆಸ್ವಸ್ಥ ಮಹಿಳೆ ನರಸಮ್ಮ ಬಸ್ ಸ್ಟಾಂಡ್ ನಲ್ಲಿಯೇ ವಾಸವಾಗಿದ್ದಳು. ಸ್ಥಳೀಯರು ಅನ್ನ ನೀರು ಹಾಗೂ ಬಟ್ಟೆ ಒದಗಿಸಿದ್ದರು. ಆದರೆ ಶನಿವಾರ ರಾತ್ರಿ ಬಟ್ಟೆ ಹರಿದ ಸ್ಥಿತಿಯಲ್ಲಿ ಮಹಿಳೆ ಕಂಡು ಬಂದಿದ್ದರಿಂದ ಸ್ಥಳೀಯರು ಪೊಲೀಸ್ ಠಾಣೆಗೆ ವರದಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಸಿಪಿಐ ಸಿದ್ದಬಸವನಗೌಡ ಪಿಎಸ್ಐ ತಿರುಮಲೇಶ ಕೆ. ಹಾಗೂ ರೇಣುಕಾ ಉಡಗಿ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪೋಷಕರ ಪತ್ತೆಯಲ್ಲಿ ನಿರತರಾಗಿದ್ದರು. ಇಡಪಾನೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಎಂದು ಗುರುತಿಸಿ ಪೋಷಕರ ಪತ್ತೆ ಹಚ್ಚಿ ಮಾಹಿತಿ ನೀಡಿದ್ದಾರೆ. ನಂತರ ತಡರಾತ್ರಿ ಠಾಣೆಗೆ ಬಂದ ಮಹಿಳೆಯ ಪೋಷಕರು ಮಹಿಳೆಯನ್ನು ಜತೆಯಲ್ಲಿ ಕರೆದುಕೊಂಡು […] - [ಕಲಬುರಗಿ| ಪಶು ವೈದ್ಯರನ್ನು ನೇಮಿಸಲು ಶಾಸಕ ಬಸವರಾಜ ಮತ್ತಿಮಡು ಆಗ್ರಹ](https://hikalaburagi.com/kalyana-karnataka/4163/): ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು ವೈದ್ಯರಿಲ್ಲದೇ ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಇದ್ದ ವೈದ್ಯರಿಗೆ ಮೈಸೂರು ಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಾಸಕ ಬಸವರಾಜ ಮತ್ತಿಮಡು ಆಗ್ರಹಿಸಿದರು. ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಸಮಸ್ಯೆಯ ಗಂಭೀರತೆ ಕುರಿತು ಸದನದ ಗಮನಕ್ಕೆ ತಂದ ಶಾಸಕ ಮತ್ತಿಮಡು, ಇರುವ ವೈದ್ಯರಿಗೆ ಪ್ರಭಾರಿ ವಹಿಸಲಾಗಿದೆ. ಪಶು ಸಂಗೋಪನೆಯಲ್ಲಿ ರೈತರು ತಮ್ಮ ಪಶುಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಗಮನ ಸೆಳೆದರು.   ಶಾಸಕ ಪ್ರಶ್ನೆಗೆ ಉತ್ತರಿಸಿದ ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ, ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ 64 ಸಾವಿರ ಜಾನುವಾರುಗಳಿದ್ದು, 13 ಆಸ್ಪತ್ರೆಗಳಿರಬೇಕು. ಆದರೆ 31 ಆಸ್ಪತ್ರೆಗಳಿವೆ. 17 ಪಶು ವೈದ್ಯರು, 53 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೇರೆ ಕಡೆ ಹೋಲಿಸಿದರೆ ವೈದ್ಯರಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವೈದ್ಯರನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ […] - [ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಲು ಸಂಸ್ಥೆಗಳಿಗೆ ಸಚಿವರ ಒತ್ತಾಯ](https://hikalaburagi.com/kalyana-karnataka/4160/): ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಆಗ್ರಹಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್* ರಹೀಮ್ ಖಾನ್ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ವಿಮಾನಯಾನ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ವಿಮಾನ ಸೇವೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿದರು. ಇಂಡಿಗೋ, ಏರ್ ಇಂಡಿಯಾ, ಅಲಯನ್ಸ್ ಏರ್, ಸ್ಟಾರ್ ಏರ್ ಮತ್ತು ಆಕಾಶ ಏರ್‌ನ ಅಧಿಕಾರಿಗಳು, ರಾಜ್ಯ ಸರ್ಕಾರಿ ಹಿರಿಯ ಅಧಿಕಾರಿಗಳಾದ ಆರ್. ವಿಶಾಲ್ ಮತ್ತು ಖುಷ್ಬು ಚೌಧರಿ ಅವರು ಉಪಸ್ಥಿತರಿದ್ದರು. 2019 ರಿಂದ ಅಭಿವೃದ್ಧಿಪಡಿಸಿದ ಕಲಬುರಗಿಯಲ್ಲಿ 742 ಎಕರೆ ಭೂಮಿ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಿರ್ವಹಿಸುವ ಸೌಲಭ್ಯಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುವ ಕುರಿತು ಚರ್ಚೆಗಳು ನಡೆದವು. ಎಲ್ಲಾ […] - [ಕಲಬುರಗಿ| ಕೃಷಿಯೇತರ ಭೂಮಿ ಪರಿವರ್ತನೆಗೆ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ](https://hikalaburagi.com/breaking-news/4157/): ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕೃಷಿಯೇತರ ಭೂಮಿ ಪರಿವರ್ತನೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಕುರಿತು ಕಲಬುರಗಿ ತಾಲೂಕಿನ ಮಾಲಗತ್ತಿ, ಕೆರೂರು ಹಾಗೂ ಫರಹತಾಬಾದ್ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ತಾಲೂಕಿನ ಫರಹತಾಬಾದ ಹೋಬಳಿಯ ಹೊನ್ನಕೀರಣಗಿ ಹಾಗೂ ನದಿಸಿನ್ನೂರ್ ಗ್ರಾಮದಲ್ಲಿ ನಡೆಯುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ ಮೂಲಸೌಕರ್ಯ ಕಾಮಗಾರಿಗಳನ್ನು ವೀಕ್ಷಿಸಿದರು. ಕಲಬುರಗಿ ತಹಶೀಲ್ದಾರರ ಕೆ.ಆನಂದಶೀಲ ಸೇರಿದಂತೆ ಇತರೆ ಸಿಬ್ಬಂದಿ ವರ್ಗದವರು ಇದ್ದರು. - [ಕಲಬುರಗಿ| ಸಂಶೋಧನೆಗೆ ವಿಧಾನಶಾಸ್ತ್ರದ ಜ್ಞಾನ ಅತ್ಯಗತ್ಯ: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ](https://hikalaburagi.com/kalyana-karnataka/4154/): ಕಲಬುರಗಿ: ಪರಿಣಾಮಕಾರಿ ಸಂಶೋಧನೆ ನಡೆಸಲು ಸಂಶೋಧನಾ ವಿಧಾನಶಾಸ್ತ್ರದ ಸಮಗ್ರ ಜ್ಞಾನ ಅತ್ಯಗತ್ಯವಾಗಿದೆ ಎಂದು ಕೇಂದ್ರೀಯ ವಿವಿಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು. ಆಳಂದ ತಾಲೂಕಿನ ಕಡಗಂಚಿ ಸಮೀಪದ ಕೇಂದ್ರೀಯ ವಿವಿಯ ಆರ್ಥಿಕ ಅಧ್ಯಯನ ಮತ್ತು ಯೋಜನಾ ವಿಭಾಗವು ಆಯೋಜಿಸಲಿರುವ ಸಂಶೋಧನಾ ವಿಧಾನಶಾಸ್ತ್ರ ಕಾರ್ಯಾಗಾರದ ಕರಪತ್ರವನ್ನು ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು. ವಿದ್ವಾಂಸರ ಸಂಶೋಧನಾ ಕೌಶಲ್ಯವನ್ನು ಮತ್ತಷ್ಟು ಚುರುಕುಗೊಳಿಸಿ ನವೀಕರಿಸಲು ಈ ರೀತಿಯ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಸಂಶೋಧನಾ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕೂಡ ಸಂಶೋಧನೆಗೆ ಹೊಸ ಆಯಾಮಗಳನ್ನು ನೀಡುತ್ತಿದೆ ಎಂದು ತಿಳಿಸಿದರು. ಕಾರ್ಯಾಗಾರದ ನಿರ್ದೇಶಕ ಡಾ. ಲಿಂಗಮೂರ್ತಿ ಮಾತನಾಡಿ, ನವದೆಹಲಿ ಮೂಲದ ಐಸಿಎಸ್ಎಸ್ಆರ್ ಸಂಸ್ಥೆಯು ಈ ಕಾರ್ಯಾಗಾರವನ್ನು ಪ್ರಾಯೋಜಿಸಿದ್ದು, ಸಂಶೋಧನಾ ವಿದ್ವಾಂಸರ ಪ್ರಸ್ತುತ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಗಾರದ ಪಠ್ಯಕ್ರಮವನ್ನು ರೂಪಿಸಲಾಗಿದೆ ಎಂದರು. ದೇಶದ ವಿವಿಧ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳ ತಜ್ಞರನ್ನು ಆಹ್ವಾನಿಸಲಾಗಿದ್ದು, ಕಾರ್ಯಾಗಾರವು ಮಾರ್ಚ್ […] - [ಕಲಬುರಗಿ| ಮುಟ್ಟಿನ ರಜೆ ದುಡಿಯುವ ಮಹಿಳೆಯ ಹಕ್ಕಿನ ಭಾಗ: ಕೆ.ನೀಲಾ](https://hikalaburagi.com/kalyana-karnataka/4151/): ಕಲಬುರಗಿ: ದುಡಿಯುವ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎಂದು ಸಲ್ಲಿಸಲಾದ ಅರ್ಜಿಯನ್ನು ತಳ್ಳಿಹಾಕುವ ವೇಳೆ ಭಾರತದ ಸರ್ವೋಚ್ಚ ನ್ಯಾಯಾಲಯ ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ನಕಾರಾತ್ಮಕ ಹಾಗೂ ತಾರತಮ್ಯಪೂರ್ಣವಾಗಿವೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಟೀಕಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಪಿಐ(ಎಂ) ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಮುಟ್ಟಿನ ರಜೆಗೆ ಸಂಬಂಧಿಸಿದ ಕಾನೂನು ಮಾಡಲಾಗಿದೆಯಾದರೆ ಉದ್ಯೋಗದಾತರು ಮಹಿಳೆಯರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದು ವರದಿಯಾಗಿದೆ. ಇದೇ ವೇಳೆ ಅಂತಹ ರಜೆ ವ್ಯವಸ್ಥೆ ಉದ್ಯಮಗಳ ಬೆಳವಣಿಗೆಗೆ ಹಾನಿಯಾಗಬಹುದು ಎಂಬುದಾಗಿ ನ್ಯಾಯಾಲಯವು ಹೇಳಿರುವುದು ಆಶ್ಚರ್ಯಕರ ಎಂದು ಹೇಳಿದ್ದಾರೆ.   ನ್ಯಾಯಾಲಯದ ಈ ರೀತಿಯ ದೃಷ್ಟಿಕೋನ ಮಹಿಳೆಯರ ಜೈವಿಕ ವಾಸ್ತವಗಳನ್ನು ಅಲಕ್ಷಿಸುವ ಪಿತೃಪ್ರಧಾನ ಮನೋಭಾವವನ್ನು ಮತ್ತೊಮ್ಮೆ ಪ್ರತಿಬಿಂಬಿಸುತ್ತದೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಜೈವಿಕ ಅಗತ್ಯಗಳನ್ನು ಪರಿಗಣಿಸಬೇಕಾಗಿಲ್ಲ ಎಂಬ ತಪ್ಪು ಕಲ್ಪನೆಯನ್ನು ಇದು ಬಲಪಡಿಸುತ್ತದೆ. ಮುಟ್ಟಿನ ರಜೆಯನ್ನು ಕಂಪನಿಗಳ ಬೆಳವಣಿಗೆಗೆ ಅಪಾಯಕಾರಿ ಎಂದು ಹೇಳುವ ಮೂಲಕ ಮಹಿಳೆಯರ ಆರೋಗ್ಯದ ಅಗತ್ಯಗಳಿಗಿಂತ ಉತ್ಪಾದಕತೆಯನ್ನು […] - [ಕಲಬುರಗಿ| ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ](https://hikalaburagi.com/kalyana-karnataka/kalaburagi-news/4147/): ಕಲಬುರಗಿ: ‘ಛಾಯಾಚಿತ್ರ ಕಲೆ ಯಂತ್ರ ಮುಖೇನ ಸೃಷ್ಟಿಯಾಗುತ್ತದೆ, ನಿಜ ಆದರೆ ಅದರ ಹಿಂದೆ ಸೃಜನಶೀಲ ಕಲಾವಿದನ ಮನಸ್ಸು ಇದ್ದರೆ ಅದು ಒಂದು ಸುಂದರ ಕಲಾಕೃತಿಯಾಗುತ್ತದೆ’ ಎಂದು ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ತೋಟದ ಹೇಳಿದರು. ನಗರದ ಮಾನಕರ ಲೇಔಟ್ ನಲ್ಲಿರುವ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾದ ಹವ್ಯಾಸಿ ಛಾಯಾಗ್ರಾಹಕ ಉದಯಕುಮಾರ ಬಗಲಿ ಅವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ ಸಸಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಸಾಹಿತಿ ವೆಂಕಣ್ಣ ದೊಣ್ಣೆಗೌಡ ಅವರು, ‘ಛಾಯಾಚಿತ್ರಗಳು ಕಾಲದ ದಾಖಲೆಗಳಾಗಿ ಮಹತ್ವದ ಪಾತ್ರ ವಹಿಸುತ್ತವೆ, ನಿಸರ್ಗದಲ್ಲಿ ಎಲ್ಲವೂ ನಿರಂತರ ಬದಲಾವಣೆಯ ಪ್ರಕ್ರಿಯೆಗೆ ಒಳಗತ್ತಲೇ ಇರುತ್ತದೆ, ಆದರೆ ತಲೆಮಾರುಗಳು ಉರುಳಿದರೂ, ಕಾಲದ ಅಂತರದಲ್ಲಿ, ಸನ್ನಿವೇಶ ಸಂದರ್ಭಗಳಲ್ಲಿ ಬದಲಾದ ಸ್ಥಿತಿಗಳನ್ನು ಛಾಯಾಚಿತ್ರಗಳು ತೋರಿಸುತ್ತವೆ’ ಎಂದರು. ಮುಂದುವರಿದು ‘ಸಾವಿರಾರು ಶಬ್ದಗಳಲ್ಲಿ ವರ್ಣಿಸಬಹುದಾದುದನ್ನು ಒಂದು ಛಾಯಾಚಿತ್ರ ನೋಟ ಒಂದರಲ್ಲೇ ಎಲ್ಲವನ್ನೂ ಅರಿವಿಗೆ ತಂದುಕೊಡುತ್ತದೆ’ ಎಂದರು. ‘ಛಾಯಾಚಿತ್ರಕಲೆಯಲ್ಲಿ ಸನ್ನಿವೇಶದ ಆಯ್ಕೆ, ನೆರಳು ಬೆಳಕಿನ ಹೊಯ್ ದಾಟ […] - [ಕಲಬುರಗಿ| ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಜೀಪ್ ಸಫಾರಿ ಮತ್ತು ಬೋಟಿಂಗ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ](https://hikalaburagi.com/kalyana-karnataka/4144/): ಕಲಬುರಗಿ: ಚಂದ್ರಂಪಳ್ಳಿ ಜಲಾಶಯ, ಗೊಟ್ಟಂಗೊಟ್ಟ, ಎತ್ತಿಪೊತ್ತ ಜಲಪಾತ‌ ಸೇರಿದಂತೆ ದಟ್ಟ ಅರಣ್ಯದೊಂದಿಗೆ ವನ್ಯಜೀವಿ ತಾಣವಾಗಿರುವ ಜಿಲ್ಲೆಯ‌ ಚಿಂಚೋಳಿಯನ್ನು ಮುಂದಿನ ಒಂದೂವರೆ ವರ್ಷದಲ್ಲಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.   ಶನಿವಾರ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿಯಲ್ಲಿ ಅರಣ್ಯ ಜೀಪ್ ಸಫಾರಿ ಹಾಗೂ‌ ಚಂದ್ರಂಪಳ್ಳಿ ಜಲಾಶಯದಲ್ಲಿ ದೋಣಿ‌ ವಿಹಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಂಚೋಳಿ ಸುತ್ತಮುತ್ತವಿರುವ 8-10 ಪ್ರವಾಸಿ ತಾಣಗಳನ್ನು ಸರ್ಕ್ಯೂಟ್ ನಲ್ಲಿ ಸೆರಿಸಲಾಗುವುದು. ಪ್ರವಾಸಿಗರು ಒಂದು ದಿನದ ಪ್ಯಾಕೇಜ್ ನಡಿ ಇದನೆಲ್ಲ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುಸು. ಕೆ.ಎಸ್.ಟಿ‌.ಡಿ.ಸಿ. ಯಿಂದ ಪ್ಯಾಕೇಜ್ ಟೂರ್ ವ್ಯವಸ್ಥೆ ಸಹ ಜಾರಿಗೆ ತರಲಾಗುವುದು ಎಂದರು.   ಚಿಂಚೋಳಿ ಸುತ್ತಮುತ್ತ ಪ್ರಾಕೃತಿಕ ತಾಣಗಳ ಸೌಂದರ್ಯ ಸವೆಯಲು ಪ್ರವಾಸಿಗರಿಗೆ ಪೂರಕವಾಗಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೆ ತೋಟಗಾರಿಕೆ ಇಲಾಖೆಯಿಂದ 6.50 ಕೋಟಿ ರೂ. ಮೊತ್ತದ ಡಿ.ಪಿ.ಅರ್. ಸಿದ್ದಪಡಿಸಲಾಗಿದೆ. ಪ್ರವಾಸೋದ್ಯಮ, […] - [ಕಲಬುರಗಿ| ಮುಂಗನಸು ಕೃತಿ ವರ್ತಮಾನದ ತಲ್ಲಣಗಳ ಪ್ರತಿಬಿಂಬ: ಡಾ. ಚಿದಾನಂದ ಚಿಕ್ಕಮಠ](https://hikalaburagi.com/kalyana-karnataka/kalaburagi-news/4141/): ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಹಿರಿಯ ಸಾಹಿತಿ ರೇವಣಸಿದ್ಧಪ್ಪ ದುಕಾನ ಅವರು ರಚಿಸಿದ “ಮುಂಗನಸು” ಕವನ ಸಂಕಲನದ ಜನಾರ್ಪಣೆ ಕಾರ್ಯಕ್ರಮ ರವಿವಾರ ಸಂಜೆ ನಗರದ ಕಲಾಮಂಡಳದಲ್ಲಿ ನೆರವೇರಿತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರಿಯ ಉಪಾಧ್ಯಕ್ಷರಾದ ಅಪ್ಪಾರಾವ ಅಕ್ಕೋಣೆ ಅವರು ಕೃತಿಯನ್ನು ಜನಾರ್ಪಣೆಗೊಳಿಸಿದರು. ಕೃತಿ ಕುರಿತು ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಚಿದಾನಂದ ಚಿಕ್ಕಮಠ, “ಮುಂಗನಸು” ಕವನ ಸಂಕಲನವು ವರ್ತಮಾನದ ಹಲವು ತಲ್ಲಣಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಕೃತಿಯಲ್ಲಿರುವ ಅನೇಕ ಕವಿತೆಗಳು ಇಂದಿನ ಕಲುಷಿತ ಪರಿಸರದ ಬಗ್ಗೆ ಕಳಕಳಿ ವ್ಯಕ್ತಪಡಿಸುವುದರ ಜೊತೆಗೆ ಸಾಮರಸ್ಯ, ಹಸಿವು, ಪ್ರೀತಿ, ತಂದೆ–ತಾಯಿ ಹಾಗೂ ಗುರುವಿನ ಆಶೀರ್ವಾದಗಳ ಮಹತ್ವವನ್ನು ಕವಿತೆಗಳ ಮೂಲಕ ಲೇಖಕರು ಅಭಿವ್ಯಕ್ತಿಸಿದ್ದಾರೆ ಎಂದು ಅವರು ತಿಳಿಸಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ವಿಜಯಕುಮಾರ ಪರುತೆ ವಹಿಸಿದ್ದರು. ಮಡಿವಾಳಪ್ಪ ಹಣಮಗೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಬಸವರಾಜ ಗೌನಳ್ಳಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ […] - [ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ](https://hikalaburagi.com/kalyana-karnataka/kalaburagi-news/4137/): ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಪುಟ್ಟಮಣಿ ದೇವಿದಾಸ ಸಹಾಯಕ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರು ಗೋದುತಾಯಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರು ತಮ್ಮ ಮುಖ್ಯ ಅತಿಥಿಯ ಭಾಷಣದಲ್ಲಿ ಭಾಷೆಯ ಮಹತ್ವ ವೈಶಿಷ್ಟತೆಗಳು, ಭಾಷೆಯ ಅಳಿವು ಉಳಿವು ವಿವಿಧ ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾತನಾಡಿದರು.   ಈ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಕನ್ನಡ ಭಾಷೆಯ ಮಹತ್ವವನ್ನು ಮತ್ತು ವಿವಿಧ ಭಾಷೆಗಳ ಅಳವಡಿಕೆಯ ಮೂಲಕ ಭಾಷೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕವಿತಾ ಠಾಕೂರ್, ಬಸಮ್ಮ ಗೊಬ್ಬುರ, ಡಾ.ಜ್ಯೋತಿಪ್ರಕಾಶ ದೇಶಮುಖ, ಕವಿತಾ ಎ ಎಮ್, ಡಾ ಶ್ರೀದೇವಿ ಸಿದ್ದಣ್ಣ, ಅಶ್ವಿನಿ ಮಠ್,ಡಾ ಮೌಶಿನಾ ಫಾತಿಮಾ, ಡಾ ಮಮತಾ […] - [ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ](https://hikalaburagi.com/kalyana-karnataka/kalaburagi-news/4134/): ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಂಗಳವಾರ ಸಂಜೆ ತೆರೆಬಿದ್ದಿದೆ. ಮಂಗಳವಾರದ ಮೊದಲ ಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಮುಡುಬಿ ಗುಂಡೇರಾವ ಅವರಿಗೆ ಕನ್ನಡ ಧ್ವಜ ಹಸ್ತಾಂತರ ಮಾಡಿ ಮಾತನಾಡಿದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್. ಅಪ್ಪಾ ಅವರು, ನಾವು ರಚಿಸುವ ಸಾಹಿತ್ಯದಿಂದ ಸಾಮರಸ್ಯದ ಜೀವನ ರೂಪಿಸುವಂತಿರಬೇಕು ಎಂದು ಅವರು ಹೇಳಿದರು. ನಾವು ಉಳಿಯಬೇಕಾದರೆ ಸಮಾಜ ಉಳಿಸಬೇಕು. ಅದಕ್ಕಾಗಿ ಬಸವಾದಿ ಶರಣರು ಸೌಹಾರ್ದತೆಯ ಬದುಕು ಕಟ್ಟಿಕೊಟ್ಟರು. ಇಂದು ಅಂಥ ಸೌಹಾರ್ದತೆಯ ಸಾಹಿತ್ಯ ಮತ್ತು ಕಲೆಗಳು ಅವಶ್ಯವಾಗಿವೆ ಎಂದರು. ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.   ಸಾರಂಗಮಠದ ಶ್ರೀ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿ, ಕಲಬುರಗಿ ಜಿಲ್ಲಾ ಕಸಾಪ ರಾಜ್ಯಕ್ಕೆ ಮಾದರಿಯಾಗಿದೆ. ಕಲೆ, ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಮುಂದಾಗಬೇಕಿದೆ ಎಂದರು.   ಸಮ್ಮೇಳನಾಧ್ಯಕ್ಷರ ಬದುಕು ಬರಹದ ಕುರಿತು ನರಸಪ್ಪ ಚಿನ್ನಕಟ್ಟಿ ಮಾತನಾಡಿದರು. ಅನ್ನ ಅರಿವು […] - [ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ](https://hikalaburagi.com/kalyana-karnataka/kalaburagi-news/4130/): ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಲಬುರಗಿ ನಗರವನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸೇಡಂ ಸಂಶೋಧನಾ ಸಾಹಿತಿ ಮುಡುಬಿ ಗುಂಡೇರಾವ ಒತ್ತಾಯಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿ. ಸಾರೋಟು ಮತ್ತು ವಿವಿಧ ಜಾನಪದ ಕಲೆಗಳೊಂದಿಗೆ ಮೆರವಣಿಗೆಯು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮಾರ್ಗವಾಗಿ ಸಾಗಿ ಕನ್ನಡ ಭವನ ತಲುಪಿ. ಬಾಪೂಗೌಡ ದರ್ಶನಾಪುರ ರಂಗಮಂದಿರ, ಕನ್ನಡ ಭವನ ಆವರಣದಲ್ಲಿ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಹಂಪಿ ಉತ್ಸವದ ಮಾದರಿಯಲ್ಲಿಯೇ ಈ ಭಾಗದ ಐತಿಹಾಸಿಕ ತಾಣಗಳಾದ ರಾಷ್ಟ್ರಕೂಟ ಉತ್ಸವ, ನಾಗಾವಿ ಉತ್ಸವ ಮತ್ತು ಸನ್ನತಿ ಉತ್ಸವಗಳನ್ನು ಸರ್ಕಾರವೇ ಪ್ರತಿವರ್ಷ ಅಧಿಕೃತವಾಗಿ ಆಚರಿಸಬೇಕು. ಕಾಳಗಿ, ಬೇಲೂರು ಮತ್ತು ಹಳೆಬೀಡಿಗಿಂತಲೂ ಕಲಾತ್ಮಕವಾಗಿ ಮಿಗಿಲಾದ ಸೂರ್ಯನಾರಾಯಣ ದೇವಾಲಯದಂತಹ ಸ್ಮಾರಕಗಳು ಇಂದು ಸರಿಯಾದ ನಿರ್ವಹಣೆಯಿಲ್ಲದೆ ಕುರಿ-ದನಗಳ ಕೊಟ್ಟಿಗೆಯಾಗುತ್ತಿವೆ ಎಂದು ಅವರು ತೀವ್ರ […] - [ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ](https://hikalaburagi.com/kalyana-karnataka/kalaburagi-news/4127/): ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈ.ಕ.ಶಿ.ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ ಗಂವ್ಹಾರ ಹೇಳಿದರು. ಸ್ವಾತಂತ್ರ್ಯ ಹೋರಾಟಗಾರ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸ್ಥಾಪಕ ಲಿಂಗೈಕ್ಯ ಮಹಾದೇವಪ್ಪ ರಾಂಪುರೆಯವರ 53 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ರಾಂಪುರೆ ಅವರು ತಮ್ಮ ಬದುಕಿನ ಜೊತೆಗೆ ಈ ಭಾಗದ ಜನರು ಬದಕು ಕಟ್ಟಿಕೊಳ್ಳಲು ಶಿಕ್ಚಣ ಸಂಸ್ಥೆಯನ್ನು ಹುಟ್ಟುಹಾಕಿದರು ಎಂದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕರಾದ ಆನಂದ ಪಾಟೀಲ, ಸವಿತಾ ಪಾಟೀಲ, ಜಾನಕಿ ಪಾಟೀಲ, ಸರಸ್ವತಿ ರಾಜಶ್ರೀ, ಝೈಬಾ ಅಕ್ತರ, ಬೋಧಕೇತರ ಸಿಬ್ಬಂದಿ ಅನಸುಯಾ ಗಾದಾ, ಪ್ರೀತಿ ಸೊರಡೆ, ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. - [ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ](https://hikalaburagi.com/kalyana-karnataka/kalaburagi-news/4124/): ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಿಸಿ ವಿಧಿಸಿದ ಗುತ್ತಿಗೆ ಶುಲ್ಕದ ಮೊತ್ತ 2 ಕೋಟಿ 3.7 ಲಕ್ಷ ರೂಪಾಯಿ ಭರಿಸಲು ಆದೇಶವಾಗಿದ್ದು, ಸರ್ಕಾರಿ ನೌಕರರ ಸಂಘ ಯಾವುದೇ ಆದಾಯ ಹೊಂದಿರುವುದಿಲ್ಲ. ಹಾಗಾ ವಿಧಿಸಿದ ಗುತ್ತಿಗೆ ಅವಧಿ ಶುಲ್ಕವನ್ನು ಸಂಪೂರ್ಣ ವಿನಾಯಿತುಗೊಳಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳುಂಡಗಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ತಕ್ಷಣವೇ ಜಿಲ್ಲಾ ಸರ್ಕಾರಿ ನೌಕರರ ಭವನದ ನಿವೇಶನಕ್ಕೆ ವಿಧಿಸಿದ ಶುಲ್ಕದ ಮೊತ್ತ ವಿನಾಯಿತಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಧರ್ಮರಾಯ ಜವಳಿ, ಚಂದ್ರಕಾoತ ಏರಿ, ಎಂ ಬಿ. ಪಾಟೀಲ, ಕೃಷ್ಣಚಾರಿ ಜೋಶಿ, ರಾಜೇಶ ನೀಲಳ್ಳಿ, ಸಂತೋಷ ಸಲಗರ, ಅಣ್ಣಾರಾಯ ಹಾಬಾಳಕರ, ಪೀರಪ್ಪ, ರಾಜಶೇಖರ ಕುರಿಕೊಟಾ, ಆನಂದ, ಹುಸೇನ್ ಪಾಶಾ ಇತರರು […] - [ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ](https://hikalaburagi.com/kalyana-karnataka/kalaburagi-news/4116/): ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ‌ ನಗರ ಸುತ್ತಾಡಿ ಮಹಾನಗರ ಪಾಲಿಕೆಯಿಂದ ನಗರದಾದ್ಯಂತ‌ ನಡೆಯುತ್ತಿರುವ ರಸ್ತೆ ಸುಧಾರಣೆ,‌ ದುರಸ್ತಿ, ಒಳಚರಂಡಿ ನಿರ್ಮಾಣ, ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲಿಸಿದರು. ಕಲಬುರಗಿ ಕೇoದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಕೆ.ಕೆ.ಆರ್.ಡಿ.ಬಿ.ಯ 2 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ಕಲ್ವರ್ಟ್ ಕಾಮಗಾರಿ ಪರಿಶೀಲಿಸಿದ ಡಿ.ಸಿ., ಇದು ಜನಸಂದಣಿ ಹೆಚ್ಚಿರುವ ಪ್ರದೇಶ ಇದಾಗಿರುವುದರಿಂದ ಕೂಡಲೇ ಕಾಮಗಾರಿ ಮುಗಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಮತ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ನಂತರ ಹಳೇ ಜೇವರ್ಗಿ ರಸ್ತೆಯ ಮೋಹನ ಲಾಡ್ಜ್ ನಿಂದ ರಾಮ ಮಂದಿರ ಸರ್ಕಲ್ ವರೆಗೆ ಎನ್.ಸಿ.ಎ.ಪಿ ಯೋಜನೆಯಡಿ ಸುಮಾರು 1.20 ಕೋಟಿ ರೂ. ವೆಚ್ಚದೊಂದಿಗೆ ಮೂರು ವರ್ಷಗಳ ನಿರ್ವಹಣೆ ಕಾಮಗಾರಿ ಪ್ರಗತಿಯಲ್ಲಿದ್ದು, ಸುಮಾರು‌ 87 ಲಕ್ಷ‌ ರೂ. ವೆಚ್ಚದಲ್ಲಿ ಖರೀದಿಸಿದ ಪಾಪ್ ಹೋಲ್ ಫಿಲ್ಲಿಂಗ್ ಮಶೀನ್ ಗಳಿಂದ ನಡೆಯುತ್ತಿರುವ ರಸ್ತೆ ಗುಂಡಿ […] - [ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ](https://hikalaburagi.com/kalyana-karnataka/kalaburagi-news/4113/): ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಸಹಾಯವಾಣಿ -1098, ಸಲಹಾ ಮಂಡಳಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿ.ಎಮ್.ಕೇರ, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2023 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಬಾಲ್ಯವಿವಾಹ ಪ್ರಕರಣಗಳಲ್ಲಿ ನ್ಯಾಯಾಲಯವು ಕುಟುಂಬದ 4 ಜನ ಸದಸ್ಯರಿಗೆ ಶಿಕ್ಷೆಯನ್ನು ವಿಧಿಸಿರುತ್ತದೆ. ಇಂತಹ ಇತ್ಯರ್ಥಗೊಂಡ ನ್ಯಾಯಾಲಯಗಳ ಪ್ರಕರಣಗಳನ್ನು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಜನರಿಗೆ ಅರಿವು ನೀಡಬೇಕೆಂದು ಸೂಚನೆ ನೀಡಿದರು. ಬಾಲಗರ್ಭಿಣಿ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡ್ಡಾಯವಾಗಿ ಪ್ರಥಮ ವರ್ತಮಾನ ವರದಿಯನ್ನು ಮಾಡಬೇಕು. ಕೇವಲ ಹೇಳಿಕೆಗಳನ್ನು ನೀಡದೆ ಸಂಬಂಧಪಟ್ಟ ಠಾಣೆಗೆ […] - [ಕಲಬುರಗಿ| 49.65 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಪಂಚಾಯತಿ ನೂತನ ಕಟ್ಟಡಕ್ಕೆ ಅನುಮೋದನೆ](https://hikalaburagi.com/kalyana-karnataka/kalaburagi-news/4110/): ಕಲಬುರಗಿ: ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತಿಗೆ 4 ದಶಕಗಳ ನಂತರ ಸ್ವಂತ ಕಟ್ಟಡ ಹೊಂದುವ ಯೋಗ ಇದೀಗ ಕೂಡಿ ಬಂದಿದ್ದು, ಗುರುವಾರ ಜರುಗಿದ ಸಚಿವ ಸಂಪುಟ ಸಭೆಯಲ್ಲಿ 49.65 ಕೋಟಿ ಅಂದಾಜು ಮೊತ್ತದ ಅನುದಾನದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ‌.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗೊರುವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಕಾಳಜಿಯ ಪರಿಣಾಮ ಪಂಚಾಯತ್ ವ್ಯವಸ್ಥೆ ಆರಂಭದಿಂದಲು 1986 ರಿಂದ ಸ್ವಂತ ಕಟ್ಟಡ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸ್ವಂತ ಕಟ್ಟಡ ಪಡೆಯುವ ಭಾಗ್ಯ ಒದಗಿ ಬಂದಿದೆ. 11 ತಾಲೂಕು ಪಂಚಾಯತಿ, 261 ಗ್ರಾಮ‌ ಪಂಚಾಯತಿ ಹೊಂದಿರುವ ಕಲಬುರಗಿ ಜಿಲ್ಲಾ ಪಂಚಾಯತ್ ಸಂಸ್ಥೆಗೆ ಇದೀಗ ನೂತನ ಆಡಳಿತ ‌ಭವನ ನಿರ್ಮಾಣಕ್ಕೆ ಗ್ಯಾರಂಟಿ‌ ಸರ್ಕಾರ ಹಸಿರು ನಿಶಾನೆ ತೋರಿದ್ದರಿಂದ, ಗ್ರಾಮೀಣ ಭಾಗದಲ್ಲಿ ಸುಗಮ ಆಡಳಿತಕ್ಕೆ ಮತ್ತು ಮೇಲ್ವಿಚಾರಣೆಗೆ […] - [ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ](https://hikalaburagi.com/kalyana-karnataka/kalaburagi-news/4107/): ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಇಂದು  ಲೋಕಾರ್ಪಣೆ ಮಾಡಲಾಯಿತು.  ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ 25.27 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ನೂತನ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ.  ಅದೇ ರೀತಿ 2023–24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಗಳ ಒಗ್ಗೂಡಿಸುವಿಕೆಯಲ್ಲಿ 35.50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣಗೊಂಡಿದೆ ಎಂದರು.  ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಮಾತನಾಡಿ, ಗ್ರಾಮೀಣ ಭಾರತ ಬಲಿಷ್ಠವಾಗದೇ ರಾಜ್ಯ ಹಾಗೂ ರಾಷ್ಟ್ರದ ಪ್ರಗತಿ ಸಾಧ್ಯವಿಲ್ಲ. ಮಕ್ಕಳ ಪೌಷ್ಟಿಕತೆ, ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಆಡಳಿತ ವ್ಯವಸ್ಥೆಯನ್ನು ಸದೃಢಗೊಳಿಸುವುದು ನಮ್ಮ ಜನಸೇವೆಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು. ಮಿಣಜಗಿ ಗ್ರಾಮದಂತಹ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ಜನರಿಗೆ ಗೌರವಯುತ ಜೀವನ […] - [ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ](https://hikalaburagi.com/kalyana-karnataka/kalaburagi-news/4104/): ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12 ರಿಂದ 28ರ ವರೆಗೆ ಜಿಲ್ಲೆಯ ಐದು ತಾಲೂಕಿನಲ್ಲಿ ಸಾಮೂಹಿಕ ಔಷಧಿ ಸೇವನೆಯ (ಎಂ.ಡಿ.ಎ) ಕಾರ್ಯಕ್ರಮ ನಡೆಯಲಿದ್ದು, ಯಾವೊಬ್ಬ ಅರ್ಹ ಶಾಲಾ-ಕಾಲೇಜು ಮಕ್ಕಳು, ವಯಸ್ಕರು ಗುಳಿಗೆ ನುಂಗುವ ಕಾರ್ಯದಿಂದ ಬಿಟ್ಟು ಹೋಗದಂತೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮೂಹಿಕ ಔಷಧ ನುಂಗಿಸುವ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕಲಬುರಗಿ ಗ್ರಾಮೀಣ, ಅಫಜಲಪೂರ, ಆಳಂದ, ಚಿಂಚೋಳಿ, ಸೇಡಂ ತಾಲೂಕಿನ 13 ಪಿ.ಎಚ್.ಸಿ. ಮತ್ತು 63 ಉಪ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ 222 ಗ್ರಾಮಗಳಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, 16,373 ಅಂಗನವಾಡಿ ಮಕ್ಕಳು, 63,350 ಶಾಲಾ ಮಕ್ಕಳು, 2,307 ಕಾಲೇಜು ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟು 3,14,689 ಜನರಿಗೆ ಡಿ.ಇ.ಸಿ., ಅಲ್ಬೆಂಡೋಜಾಲ್ ಹಾಗೂ ಐವರಮೆಕ್ಟಿನ್ ತ್ರಿವಳಿ […] - [ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ](https://hikalaburagi.com/kalyana-karnataka/kalaburagi-news/4101/): ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಆರಂಭದಲ್ಲಿ ಉಪನ್ಯಾಸಕ ಡಾ. ಶರಬಯ್ಯ ಸ್ವಾಮಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಎಂ. ಡಿ. ಅಶ್ಫಾಕ್ ಚುಲಬುಲ್ ಅವರು ಉಪಸ್ಥಿತರಿದ್ದು, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರುಕ್ಸಿಂದಾ ಹೀನಾ ಅಕ್ಬರಿ ಅವರು ವಹಿಸಿದ್ದರು. ಅವರು ಸಂವಿಧಾನದ ಮೌಲ್ಯಗಳು ಮತ್ತು ನಾಗರಿಕರ ಕರ್ತವ್ಯಗಳ ಕುರಿತು ಅಧ್ಯಕ್ಷೀಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಾದ ಕು. ಲಾಲಬಿ ಹಾಗೂ ಕು. ಆಫೀಯಾ ಅವರು ರಾಷ್ಟ್ರಭಕ್ತಿ ಮತ್ತು ಸಂವಿಧಾನ ಮೌಲ್ಯಗಳ ಕುರಿತು ಅರ್ಥಪೂರ್ಣ ಭಾಷಣಗಳನ್ನು ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಕು. ರಕ್ಷಿತಾ ಅವರು ಸಮರ್ಥವಾಗಿ ನಿರ್ವಹಿಸಿದರು. ಈ ವೇಳೆ ಉಪನ್ಯಾಸಕರಾದ ಡಾ. ಶರಬಯ್ಯ ಸ್ವಾಮಿ, ಡಾ. ಮಲ್ಲಿಕಾರ್ಜುನ ಡೊಂಣ್ಣೂರ್ ಹಾಗೂ ಮಲಿಕ್ ರೆಹಮಾನ್ ಅತ್ತರ್ ಅವರು […] - [ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ](https://hikalaburagi.com/kalyana-karnataka/kalaburagi-news/4098/): ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20 ವರ್ಷಗಳಿಂದ ಅಡುಗೆ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ, ದಿನಗೂಲಿ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಜಮಾಯಿಸಿದ ನೌಕರರು, ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಧರಣಿ ಸತ್ಯಾಗ್ರಹ ನಡೆಸಿದರು. ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಕನಿಷ್ಠ ವೇತನ ಹಾಗೂ ಸಕಾಲಕ್ಕೆ ಸಂಬಳ ನೀಡದೆ ಇಲಾಖೆಯು ಕಾರ್ಮಿಕರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ. ಕಳೆದ 5 ತಿಂಗಳಿಂದ ವೇತನವಿಲ್ಲದೆ ಕುಟುಂಬ ನಿರ್ವಹಣೆ ಮಾಡುವುದು ದುಸ್ತರವಾಗಿದೆ. ಸಾಲದ ಸುಳಿಗೆ ಸಿಲುಕಿರುವ ನೌಕರರ ಹಿತದೃಷ್ಟಿಯಿಂದ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಇತರೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ದಶರಥ ಕಲಗುರ್ತಿ, ಅಣ್ಣರಾಯ ಜಾಡಿ, ಭೀಮಾಶಂಕರ್ […] - [ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ](https://hikalaburagi.com/kalyana-karnataka/4095/): ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು. ಮಕ್ಕಳಿಗಾಗಿ ದೇಶ ಭಕ್ತಿಗೀತೆ, ನೃತ್ಯ, ಗಾಯನ ಸ್ಪರ್ಧೆ ಗಳನ್ನ ಏರ್ಪಡಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ದೇಶ ಸೇವೆ ಮಾಡಿ ನಿವೃತ್ತರಾದ ಸೈನಿಕರಿಗೆ, ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ-ಶಿಕ್ಷಕಿ ಯರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ನೌಕರರಿಗೆ ಸನ್ಮಾನಿಸಲಾಯಿತು. ಕೆ. ಹೆಚ್. ಬಿ. ನಿವಾಸಿಗಳ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಜು ಶೆಟ್ಟಿ ಮಾತಾಡಿ, ಕಾಲೋನಿಯ ಸ್ವಚ್ಛತೆ ಕಾಪಾಡಬೇಕು, ಕಾಲೋನಿಯ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕು ಮತ್ತು ನಾವೆಲ್ಲ ಜಾತಿ, ಮತ, ಧರ್ಮಗಳ ಭೇದ ಭಾವ ಮರೆತು ಸಮಾಜದ ಒಳಿತಿಗಾಗಿ ಒಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಸಮಾಜ […] - [ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ](https://hikalaburagi.com/kalyana-karnataka/4092/): ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ ಮತ್ತು ವೈಯಕ್ತಿಕ ಜವಾಬ್ದಾರಿಯತ್ತ ದಿಟ್ಟ ಹೆಜ್ಜೆ ಇಡುವ ಅಗತ್ಯವಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ಹೇಳಿದರು. ಜಿಲ್ಲಾ ಪೊಲೀಸ್ ಮೈದಾನದಲ್ಲಿ ಮಂಗಳವಾರ ಕಲಬುರಗಿ ನಗರ ಪೊಲೀಸ್ ಹಾಗೂ ಯುನೈಟೆಡ್ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿ”ಗೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯೇ ಮೊದಲು ನಿಯಮ ಪಾಲನೆ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು, 2026ನೇ ವರ್ಷ ರಸ್ತೆ ಸುರಕ್ಷತೆಯ ಚಳವಳಿ ಮತ್ತು ಕ್ರಿಯೆಯ ವರ್ಷವಾಗಬೇಕು ಎಂದು ಘೋಷಿಸಿದರು. ಕಾನೂನು ಜಾರಿಗೆ ತರುವ ಜವಾಬ್ದಾರಿ ಮಾತ್ರವಲ್ಲ, ಕಾನೂನನ್ನು ಗೌರವಿಸಿ ಪರಿಪಾಲಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಪ್ರತಿದಿನ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಕಳೆದುಹೋಗುತ್ತಿರುವುದನ್ನು ನೋಡುತ್ತಿದ್ದೇವೆ. ಅವರ ಮೇಲೆ ಅವಲಂಬಿತರಾದ ಕುಟುಂಬಗಳು ಅನುಭವಿಸುವ ದುಃಖವೂ ನಮ್ಮ ಮುಂದೆ ಇದೆ. ಟ್ರಾಫಿಕ್ ನಿಯಮಗಳನ್ನು ಪಾಲಿಸದಿದ್ದರೆ ನಮಗೂ ಅದೇ ಗತಿ ಬರುತ್ತದೆ ಎಂದು ಅವರು ಆತಂಕ […] - [ಕಲಬುರಗಿ| ವಾರಕ್ಕೆ 5 ದಿನದ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಮುಷ್ಕರ](https://hikalaburagi.com/kalyana-karnataka/4089/): ಕಲಬುರಗಿ: 12ನೆಯ ದ್ವೀಪಕ್ಷಿಯ ವೇತನ ಒಪ್ಪಂದದಂತೆ ಬ್ಯಾಂಕುಗಳಲ್ಲಿ ವಾರಕ್ಕೆ 5 ದಿನದ ಕೆಲಸ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಗ್ರಾಮೀಣ ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯ ವತಿಯಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿ ಕುಸನೂರ ರಸ್ತೆ ಆವರಣದಲ್ಲಿ ಮುಷ್ಕರ ನಡೆಸಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ ಶಿವಕುಮಾರ್ ಬಗಲೂರ ಅವರು, 2024 ರ ಮಾರ್ಚ್ 8ರಂದು IBA ಮತ್ತು UFBU ನಡುವೆ 12ನೆಯ ದ್ವೀಪಕ್ಷಿಯ ವೇತನ ಒಪ್ಪಂದದಂತೆ ವಾರಕ್ಕೆ 5 ದಿನದ ಬ್ಯಾಂಕಿಂಗ್ ಒಡಂಬಡಿಕೆಗೆ ಸಹಿ ಹಾಕಿದ್ದು, ಕೇಂದ್ರ ಸರ್ಕಾರಕ್ಕೆ ಜಾರಿಗೊಳಿಸಲು ಶಿಫಾರಸ್ಸು ಮಾಡಿತ್ತು. ಆದರೆ ಒಂದುವರೆ ವರ್ಷ ಕಳೆದರೂ ಕೇಂದ್ರ ಸರ್ಕಾರ ಜಾರಿಗೆ ತರುವಲ್ಲಿ ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆರೋಪ ಮಾಡಿದರು. ಈಗಾಗಲೇ RBI,NABARD,LIC,GIC,SEBI, SHARE MARKET ಎಲ್ಲವೂ ವಾರಕ್ಕೆ 5 ದಿನದ ಕೆಲಸ ಜಾರಿಯಲ್ಲಿದ್ದು, ಬ್ಯಾಂಕ್ ನೌಕರರಿಗೆ ಮಲತಾಯಿ ಧೋರಣೆ ತೋರಲಾಗುತ್ತಿದೆ. ಇದನ್ನು ಖಂಡಿಸುತ್ತಾ ಆದಷ್ಟು ಬೇಗ ಬ್ಯಾಂಕಿಂಗ್ […] - [ಕಲಬುರಗಿ| ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ರಿಜ್ವಾನ್ ಅಹ್ಮದ್ ನೇಮಕ](https://hikalaburagi.com/kalyana-karnataka/kalaburagi-news/4086/): ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮೊಹಮ್ಮದ್ ರಿಜ್ವಾನ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಾಲರಾಜ ಗುತ್ತೇದಾರ ಅವರು ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಬಾಲರಾಜ ಗುತ್ತೇದಾರ, ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ತಿಳಿಸಿದ್ದಾರೆ. - [ಕಲಬುರಗಿ| ಮದ್ಯದಂಗಡಿಗಳಲ್ಲಿ ಕಳ್ಳತನ; 2.11 ಲಕ್ಷ ದೋಚಿದ ಖದೀಮರು](https://hikalaburagi.com/kalyana-karnataka/kalaburagi-news/4083/): ಕಲಬುರಗಿ: ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದಂಗಡಿಗಳ ಕೀಲಿ ಮುರಿದ ಕಳ್ಳರು 2.11 ಲಕ್ಷದಷ್ಟು ನಗದು ಕದ್ದು ಪರಾರಿಯಾಗಿರುವ ಘಟನೆ ಮಂಗಳವಾದ ನಸುಕಿನ ಜಾವದಲ್ಲಿ ನಡೆದಿದೆ. ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್. ಪಾಟೀಲ ಅವರಿಗೆ ಸೇರಿದ ಅಂಗಡಿಯಿಂದ ₹1.30 ಲಕ್ಷ, ಎಸ್ಬಿಐ ಬ್ಯಾಂಕ್ ಸಮೀಪದಲ್ಲಿರುವ ನಾಗಯ್ಯ ಕೋಟಕಿ ಅವರಿಗೆ ಸೇರಿದ ಮದ್ಯದ ಅಂಗಡಿಯಿಂದ 81 ಸಾವಿರ ನಗದು ಹಣ ಸೇರಿದಂತೆ ಒಟ್ಟಾರೆ 2.11 ಲಕ್ಷ ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಂಗಡಿಯ ಶಟರ್ ಎತ್ತುವ ನಾಲ್ವರು ಕಳ್ಳರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಕಲಬುರಗಿ| ‘ಕವಿರಾಜಮಾರ್ಗ’ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ: ಬಿ.ಎಚ್.ನಿರಗುಡಿ](https://hikalaburagi.com/kalyana-karnataka/4080/): ಕಲಬುರಗಿ: ಕನ್ನಡದ ಮೊಟ್ಟಮೊದಲ ಲಕ್ಷಣ ಗ್ರಂಥವಾಗಿರುವ “ಕವಿರಾಜಮಾರ್ಗ” (ಕ್ರಿ.ಶ. 850) ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಜ.29 ರಂದು ಬೆಳಗ್ಗೆ 10.45 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪುಸ್ತಕ ಪ್ರಾಧಿಕಾರ ಸದಸ್ಯ, ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಲಬುರಗಿ ಹಾಗೂ ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಅವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರೋ a ಕಾರ್ಯಕ್ರಮವನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ರಮೇಶ ಲಂಡನಕರ್ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ವಹಿಸಲಿದ್ದಾರೆ. ಆಶಯ ನುಡಿಯನ್ನು ಕಲಾನಿಕಾಯದ ಡೀನರಾದ ಪ್ರೊ. ಎಚ್. ಟಿ. ಪೋತೆ ಅವರು ನೀಡಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ವಿರುಪಣ್ಣ ಕಲ್ಲೂರು, ಡಾ. ಸಿದ್ಧರಾಮ ಹೊನಕಲ್ ಹಾಗೂ ಮಹಿಪಾಲರೆಡ್ಡಿ ಮುನ್ನೂರು […] - [ಕಲಬುರಗಿ| ಹೆಚ್ಚು ಗಳಿಕೆಯ ಆಮಿಷ: ನಿವೃತ್ತ ನೌಕರನಿಗೆ ಕೋಟಿ ವಂಚನೆ](https://hikalaburagi.com/kalyana-karnataka/kalaburagi-news/4078/): ಕಲಬುರಗಿ: ಹೆಚ್ಚಿನ ಹಣ ಗಳಿಕೆಯ ಆಮಿಷವೊಡ್ಡಿ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂ ನಿವೃತ್ತ ನೌಕರರೊಬ್ಬರಿಗೆ 2.24 ಕೋಟಿ ರೂ. ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಅಕ್ಕಮಹಾದೇವಿ ಕಾಲೊನಿಯ ನಿವಾಸಿ, ಜೆಸ್ಕಾಂ ನಿವೃತ್ತ ನೌಕರರಾಗಿರುವ 63 ವರ್ಷದ ದತ್ತಪ್ಪ ಸುರಪುರ ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ‘ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ರೀಲ್ಸ್ ನೋಡುತ್ತಿದ್ದಾಗ ಕಳೆದ ವರ್ಷ ಜೂನ್ 11ರಂದು ‘ಆಟೊ ಟ್ರೇಡಿಂಗ್’ ಜಾಹೀರಾತು ಕಾಣಿಸಿತ್ತು. ಅದರ ಮೇಲಿನ ಲಿಂಕ್ ಕ್ಲಿಕ್ ಮಾಡಿ, ನನ್ನ ವೈಯಕ್ತಿಕ ಮಾಹಿತಿ ನಮೂದಿಸಿದೆ. ಬಳಿಕ ಅರುಣ ಜೋಶಿ ಎಂಬಾತ ‘ಕ್ವಾಂಟಾ ಪಲ್ಸ್‌’ನಲ್ಲಿ ಹೂಡಿಕೆಗೆ ಉತ್ತೇಜಿಸಿದ್ದಾನೆ. ಆರಂಭದಲ್ಲಿ ₹12 ಸಾವಿರ ಹೂಡಿಕೆ ಮಾಡಿದೆ. ನಿತ್ಯ ಆಟೊ ಟ್ರೇಡಿಂಗ್ ಲಾಭವಾಗಿ ₹500, ₹800 ಖಾತೆಗೆ ಬರುತ್ತಿತ್ತು’, ಹೀಗೆ ಹೂಡಿಕೆಯ ನೆಪದಲ್ಲಿ ಹಣ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಕಲಬುರಗಿ| ಬೆಳೆ ಪರಿಹಾರಕ್ಕೆ ಆಗ್ರಹಿಸಿ ಎತ್ತಿನ ಬಂಡಿಯೊಂದಿಗೆ ರೈತರ ಪ್ರತಿಭಟನೆ](https://hikalaburagi.com/kalyana-karnataka/kalaburagi-news/4075/): ಕಲಬುರಗಿ: ಕಾಳಗಿ ತಾಲೂಕಿನ ವಿವಿಧ ಗ್ರಾಮಗಳ ರೈತರಿಗೆ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಹಣ ಮಂಜೂರು ಮಾಡುವಂತೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ, ವಿವಿಧ ಸಂಘಟನೆಗಳ ಮುಖಂಡರುಗಳ ನೇತೃತ್ವದಲ್ಲಿ ಕಾಳಗಿ ತಹಸೀಲ್ ಕಚೇರಿ ಮುಂದೆ ಮಂಗಳವಾರ ಎತ್ತಿನ ಬಂಡಿ ಹಾಗೂ ಟ್ರ್ಯಾಕ್ಟ‌ರ್ ಗಳೊಂದಿಗೆ ರೈತರು ಧರಣಿ ಸತ್ಯಾಗ್ರಹ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪ್ರಮುಖರು, ಕಾಳಗಿ ತಾಲೂಕಿನಲ್ಲಿ ರೈತರು ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದನ್ನು ಪರಿಗಣಿಸಿ ರಾಜ್ಯ ಹಾಗೂ ಕೇಂದ್ರ ಸರಕಾರ ಪರಿಹಾರವನ್ನು ನೀಡಿರುತ್ತದೆ. ಆದರೆ ನೂರಾರು ರೈತರು ಪರಿಹಾರ ಸಿಗದೆ ವಂಚಿತರಾಗಿದ್ದಾರೆ. ಕೈಬಿಟ್ಟಿರುವ ರೈತರ ಹೆಸರನ್ನು ತಂತ್ರಾಂಶದಲ್ಲಿ ನಮೂದಿಸಿ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.   ಹಾಲು ಉತ್ಪಾದಕರ ಸಹಕಾರ ಸಂಘಗಳ(ಕೆಎಂಎಫ್) ಮಾದರಿಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು, ಪ್ರತಿ ಕ್ವಿಂಟಲ್ ತೊಗರಿಗೆ 12500 ಬೆಂಬಲ ಬೆಲೆ ನೀಡಬೇಕು, ರಾಜ್ಯ ಹಾಗೂ […] - [ಕಲಬುರಗಿ| 4 ಮಕ್ಕಳಿಗೆ ಹುಚ್ಚಿನಾಯಿ ಕಡಿತ; ಲಾಡ್ಲಾಪುರದಲ್ಲಿ ಹೆಚ್ಚಿದ ಆತಂಕ](https://hikalaburagi.com/kalyana-karnataka/kalaburagi-news/4069/): ಕಲಬುರಗಿ: ಲಾಡ್ಲಾಪುರ ಗ್ರಾಮದಲ್ಲಿ ಬೀದಿ ಹಾಗೂ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಮೇಲೆ ಎರಗಿ ಕಚ್ಚಿ ಗಾಯಗೊಳಿಸುತ್ತಿವೆ. ಇದು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.  ಸೋಮವಾರ ಸಂಜೆ ಶಾಲೆಯಿಂದ ಮರಳಿ ಬರುವಾಗ ಚಿಕ್ಕ ಮಕ್ಕಳ ಮೇಲೆ ಹುಚ್ಚುನಾಯಿಗಳು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವುದು ವಾಡಿಯಲ್ಲಿ ವರದಿಯಾಗಿದೆ. ಬಸ್ ಸ್ಟಾಂಡ್ ಏರಿಯಾದಲ್ಲಿ ಹಿಂಡು ಹಿಂಡಾಗಿ ನಾಯಿಗಳು ತಿರುಗುತ್ತಿದ್ದು ಅದರಲ್ಲಿ ಹುಚ್ಚುನಾಯಿಗಳು ಸೇರಿಕೊಂಡಿದ್ದು, ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಸೋಮವಾರ 4 ಜನ ಶಾಲಾ ಬಾಲಕಿಯರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ ಕೈ ಕಾಲು ಮುಖಕ್ಕೆ ಕಚ್ಚಿ ಗಾಯಗೊಳಿಸಿದೆ. ಸಿಟ್ಟಿಗೆದ್ದ ಗ್ರಾಮಸ್ಥರು ನಾಯಿಯನ್ನು ಹಿಡಿದು ಸಾಯಿಸಲು ಓಡಾಡಿದ್ದು ಕೈಗೆ ಸಿಗದೇ ಪರಾರಿಯಾಗಿದೆ. ಲಾವಣ್ಯ, ದಿವ್ಯಾ, ಅನಬಿಯ ಎಂಬ ಬಾಲಕಿಯರ ಕೈ, ತೋಳು, ಮುಖ ಮತ್ತು ಬೆನ್ನಿಗೆ ಕಚ್ಚಿ ಗಂಭೀರ ಗಾಯಗೊಳಿಸಿವೆ. ಗಾಯಗೊಂಡ ಬಾಲಕಿಯರನ್ನು ಪೋಷಕರು ಅಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಮರಳಿದ್ದಾರೆ. ಕಳೆದ ತಿಂಗಳು ಸ್ಥಳೀಯ ಪ್ರಾಥಮಿಕ ಶಾಲೆಯ 5ನೇ ತರಗತಿಯ […] - [ಕಲಬುರಗಿ| ರಾಜ್ಯಪಾಲರ ನಡೆ ಅಸಂವಿಧಾನ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ](https://hikalaburagi.com/kalyana-karnataka/4066/): ಕಲಬುರಗಿ: ಭಾಷಣದಲ್ಲಿ ಕೇಂದ್ರದ ವಿರುದ್ದ ಯಾವುದೇ ಅವಹೇಳನಾಕಾರಿ ಮಾತುಗಳಿರಲಿಲ್ಲ. ಅವರು ಭಾಷಣ ಓದದ ನಿರ್ಗಮಿಸಿದ್ದು ಸರಿಯಲ್ಲ. ಅದು ಸಂವಿಧಾನ ವಿರೋಧಿ ನಡೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ರಾಜ್ಯಪಾಲರು ತಾಳ್ಮೆಯಿಂದ ಭಾಷಣ ಓದಿ ನಂತರ ರಾಷ್ಟ್ರಗೀತೆ ಗೆ ಗೌರವ ಸಲ್ಲಿಸಬೇಕಿತ್ತು. ಅವರ ವರ್ತನೆ ಸಂವಿಧಾನಕ್ಕೆ ತಕ್ಕುದಾಗಿರಲಿಲ್ಲ. ಹಾಗಾಗಿ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹಾಗೂ ಶಾಸಕ ಶರತ್ ಬಚ್ಚೇಗೌಡ ಆಕ್ಷೇಪಿಸಿದ್ದಾರೆ. ಅವರ ಮೇಲೆ ಕ್ರಮಕ್ಕೆ ಒತ್ತಾಯಿಸುತ್ತಿರುವ ಬಿಜೆಪಿಗರು ರಾಷ್ಟ್ರಗೀತೆ ಗೆ ಗೌರವ ಸಲ್ಲಿಸದ ರಾಜ್ಯಪಾಲರ ಮೇಲೆ ಕ್ರಮಕ್ಕೆ ಯಾಕೆ ಒತ್ತಾಯಿಸುತ್ತಿಲ್ಲ ಎಂದು ಪ್ರಶ್ನಿಸಿದರು. ” ರಾಜ್ಯಪಾಲರ‌ ನಡೆ ಅಸಂವಿಧಾನಿಕ. ನಮ್ಮ ಭಾಷಣಲ್ಲಿ ಅವಹೇಳನಕಾರಿ ಮಾತಿದೆಯಾ,? ಸಿಎಂ ಅವರು ಮೋದಿಗೆ, ನಾನು ಸಿ ಆರ್ ಪಾಟೀಲ್,ಮ ಅವರಿಗೆ ಹಾಗೂ ಶಿವರಾಜ್ ಸಿಂಗ್ ಚವ್ಹಾಣ ಅವರಿಗೆ ಹಾಗೂ ಕೃಷ್ಣ ಭೈರೇಗೌಡರು ಕೇಂದ್ರಕ್ಕೆ ರಾಜ್ಯದ ಬೇಡಿಕೆಗಳ ಬಗ್ಗೆ ಕೊಟ್ಟಿರುವ ಪತ್ರಗಳ ವಿವರ ಇವೆ ಅಷ್ಟೇ” ಎಂದರು. “ಪಂಚಾಯತಿಗಳಿಗೆ 15 ನೆಯ ಹಣಕಾಸಿನ ಆಯೋಗದ ಅನುದಾನ ಕೇಳುವುದು […] - [ಕಲಬುರಗಿ| ಪ್ರಬುದ್ದ ಸಮಾಜ ನಿರ್ಮಾಣಕ್ಕಾಗಿ ಆರೆಸ್ಸೆಸ್ ನಿಂದ ದೂರವಿರಿ ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ](https://hikalaburagi.com/kalyana-karnataka/4063/): ಕಲಬುರಗಿ: ಪ್ರಬುದ್ಧ ಸಮಾಜ‌ ನಿರ್ಮಾಣವಾಗಬೇಕಾದರೆ ಆರ್ ಎಸ್ ಎಸ್ ಹಾಗೂ ಮನುವಾದಿ ಸಿದ್ದಾಂತಗಳಿಂದ ದೂರುವಿರುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಯುವಕರಿಗೆ ಕರೆ‌ ನೀಡಿದರು. ನಗರದ ಘಾಟ್ಗೆ ಲೇಔಟ್ ನಲ್ಲಿ‌ ನಿರ್ಮಾಣವಾಗಿರುವ  ಪ್ರಬುದ್ಧ ಬುದ್ಧ ವಿಹಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನಕ್ಕೆ ಗೌರವ ನೀಡದ ಆರ್ ಎಸ್ ಎಸ್ ಹಾಗೂ ಮನುವಾದದ‌‌ ಸಿದ್ದಾಂತದಿಂದ ನೀವು ದೂರವಿರಬೇಕು ಎಂದು ಒತ್ತಿ ಹೇಳಿದ ಸಚಿವರು,  ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಕೊನೆಯ ಭಾಷಣದಲ್ಲಿ ಹೇಳಿರುವಂತೆ ಅವರ ಮಾತುಗಳನ್ನು‌ ಅಕ್ಷರಶಃ ಪಾಲಿಸಬೇಕು ಅಂದಾಗ ಮಾತ್ರ ಪ್ರಬುದ್ಧ ಸಮಾಜ ನಿರ್ಮಾಣವಾಗಲಿದೆ ಎಂದರು. ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಿದ್ದಾರೆ, ದೊಡ್ಡ ದೊಡ್ಡ ವ್ಯವಹಾರಗಳಲ್ಲಿ‌ ತಮ್ಮನ್ನು ತೊಡಗಿಸಿಕೊಂಡು ಮಾಡಿಕೊಂಡು ಆರಾಮಾಗಿದ್ದಾರೆ. ಆದರೆ, ಹಿಂದುಳಿದವರ, ಬಡವರ ಹಾಗೂ ಆದಿವಾಸಿಗಳ ಮಕ್ಕಳು ಮಾತ್ರ ಧ್ವಜ‌ ಹಿಡಿದುಕೊಂಡು ಓಡಾಡಬೇಕು. ಇವರು ಮಾತ್ರಧರ್ಮದ ಹೆಸರಲ್ಲಿ […] - [ಕಲಬುರಗಿ| ಮತದಾರರಲ್ಲಿ ಜಾಗೃತಿ ಅಭಿಯಾನ: ಸೈಕಲ್‌ ಜಾಥಾಗೆ ಚಾಲನೆ](https://hikalaburagi.com/kalyana-karnataka/kalaburagi-news/4060/): ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಲ್ಲಿ ಜಾಗೃತಿ ಜಾಥಾ ಉಂಟು ಮಾಡುವ ನಿಟ್ಟಿನಲ್ಲಿ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಯೋಜಿಸಿದ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಗತ್ ವೃತ್ತದಲ್ಲಿ ಚಾಲನೆ ನೀಡಿ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಪ್ರೇರೇಪಿಸಿದರು. ಜಗತ್ ವೃತ್ತದಿಂದ‌ ಅರಂಭಗೊಂಡ ಜಾಥಾ ಡಿ.ಸಿ. ಕಚೇರಿ ವರೆಗೂ ಸಾಗಿತ್ತು.ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಸೈಕಲ್ ತುಳಿದು ಸಂತಸಪಟ್ಟರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ ಆನಂದಶೀಲ, ತಾಲೂಕಾ ಪಂಚಾಯತ್ ಇ‌.ಓಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಯುವಕರು, ಸೈಕ್ಳಿಸ್ಟ್ ಗಳು ಜಾಥಾದಲ್ಲಿ […] - [ಕಲಬುರಗಿ| ಫೆಬ್ರವರಿ 21 ರಿಂದ 28ರವರಿಗೆ ಕಲಬುರಗಿಯಲ್ಲಿ ರಾಷ್ಟ್ರೀಯ ನಾಟಕೋತ್ಸವ: ಸಚಿವ ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/kalaburagi-news/4057/): ಕಲಬುರಗಿ: ಕಲಬುರಗಿಯನ್ನು ಕರ್ನಾಟಕದ ಸೃಜನಶೀಲ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಕಲಬುರಗಿಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಬೆಂಗಳೂರಿನ ರಂಗಶಂಕರ ಸಹಯೋಗದಲ್ಲಿ ಫೆಬ್ರವರಿ 21 ರಿಂದ 28 ರವರೆಗೆ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿಯ ಸಮಸ್ತ ಕಲಾಭಿಮಾನಿಗಳು ಈ ನಾಟಕೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ನಾಟಕೋತ್ಸವ-26 ರ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಕಲಬುರಗಿ ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಬೆಂಗಳೂರಿನ ಪ್ರಸಿದ್ಧ ರಂಗಶಂಕರ ಸಹಭಾಗಿತ್ವದಲ್ಲಿ ಮುಂದಿನ ಐದು ವರ್ಷಗಳ ಕಾಲ ನಿರಂತರ ನಾಟಕೋತ್ಸವ ಆಯೋಜಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. ನಾಟಕೋತ್ಸವದಲ್ಲಿ ನಗರದ ಎಸ್ ಎಮ್ ಪಂಡಿತ್ ರಂಗಮಂದಿರದಲ್ಲಿ ಕನ್ನಡದ ಪ್ರಸಿದ್ಧ ನಾಟಕಗಳು ಸೇರಿದಂತೆ ವಿವಿಧ ರಾಜ್ಯಗಳ ಬೇರೆ ಭಾಷೆಯ ನಾಟಕಗಳನ್ನು, ಕಲಬುರಗಿ ರಂಗಾಯಣದಲ್ಲಿ ವಿಶೇಷವಾಗಿ ಮಕ್ಕಳಿಗಾಗಿ ನಾಟಕಗಳು ಮತ್ತು ಕಲಬುರಗಿ ಜಿಲ್ಲಾ ಕನ್ನಡ […] - [ನವ ಕಲಬುರಗಿ ನಿರ್ಮಾಣಕ್ಕೆ ಪಣ: 300 ಕೋಟಿ ರೂ. ವೆಚ್ಚದಲ್ಲಿ ನಗರಾಭಿವೃದ್ಧಿಗೆ ಆದ್ಯತೆ: ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/kalaburagi-news/4054/): ಕಲಬುರಗಿ: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಲಬುರಗಿ ನಗರದ ನಿವಾಸಿಗಳ ಜೀವನಮಟ್ಟ ಸುಧಾರಣೆ ಮತ್ತು ಹಸಿರು-ನೀಲಿ ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ನವ ಕಲಬುರಗಿ ನಿರ್ಮಾಣ ಮಾಡಲು ಸರ್ಕಾರ ಪಣತೊಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ರವಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಕಲಬುರಗಿ ನಗರ ಹೇಗಿರಬೇಕೆಂಬ ಪರಿಕಲ್ಪನೆಯೊಂದಿಗೆ ಸಕಲ ಸೌಲಭ್ಯವುಳ್ಳ ನಗವನ್ನಾಗಿಸಲು ಈಗಾಗಲೆ ಅರ್ಬನ್ ಪ್ಲ್ಯಾನರ್‌ಗಳ ಸೇವೆ ಪಡೆದು ನೀಲಿ ನಕ್ಷೆ ಸಿದ್ದಪಡಿಸಿದ್ದು, ಅದರಂತೆ ಅಭಿವೃದ್ಧಿ ಕೆಲಸ ಕಾರ್ಯಗಳು ಹಂತ-ಹಂತವಾಗಿ ಮಾಡಲಾಗುತ್ತಿದೆ ಎಂದರು. ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರ ಕಲಬುರಗಿ ಮಹಾನಗರದಲ್ಲಿ ರೋಡ್ ಅಡಿಟ್ ಮಾಡಿಸಿದೆ. 783.82 ಕಿ.ಮೀ ನೆಲಗಟ್ಟಿದ ರಸ್ತೆ, 219.96 ಕಿ.ಮೀ. ನೆಲಹಾಸು ಇಲ್ಲದ ರಸ್ತೆ ಇದ್ದು, ಒಟ್ಟಾರೆ 1003.78 ಕಿ.ಮೀ. ರಸ್ತೆ ಜಾಲ ನಗರದಲ್ಲಿರುವುದನ್ನು ಗುರುತಿಸಲಾಗಿದೆ. ಸುಮಾರು 300 ಕೋಟಿ ರೂ. ರಸ್ತೆ ಸುಧಾರಣೆಗೆ […] - [ಕಲಬುರಗಿ| ಹಣಕ್ಕೆ ಮತ‌ ಮಾರಿಕೊಳ್ಳಬೇಡಿ, ಬುದ್ದಿವಂತಿಕೆಯಿಂದ ಮತ ಚಲಾಯಿಸಿ: ಟಿ.ಎನ್.ಇನವಳ್ಳಿ](https://hikalaburagi.com/kalyana-karnataka/kalaburagi-news/4051/): ಕಲಬುರಗಿ: ಪ್ರಜಾಪ್ರಭತ್ವದ ವ್ಯವಸ್ಥೆಯಲ್ಲಿ ಮತದಾನ ಬಹಳ ಅಮೂಲ್ಯವಾದುದು. ಹೀಗಾಗಿ ಮತವನ್ನು ಹಣಕ್ಕೆ ಮಾರಿಕೊಳ್ಳದೆ ಅರ್ಹರನ್ನು ಚುನಾಯಿಸಲು ಬುದ್ದಿವಂತಿಕೆಯಿಂದ ಮತ‌ ಚಲಾಯಿಸಬೇಕು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದ ನ್ಯಾಯಧೀಶರಾದ ನ್ಯಾ. ಟಿ.ಎನ್. ಇನವಳ್ಳಿ ಹೇಳಿದರು. ರವಿವಾರ ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಯೋಜಿಸಿದ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಬದ್ದ ಹಕ್ಕಾಗಿರುವ ಮತದಾನ ಅರ್ಥ ತಿಳಿದುಕೊಂಡು ಮತ ಚಲಾಯಿಸಬೇಕು ಎಂದರು. ತಂದೆ-ತಾಯಿ ಮತ್ತು ಗುರುಗಳು ಎಲ್ಲಿ ಸರಿಯಾಗಿಲ್ಚೋ ಅಲ್ಲಿ ಒಳೆಯ ಮತದಾರರು ಇರಲು ಸಾಧ್ಯವಿಲ್ಲ. ಬಹುತೇಕ ಪಾಲಕರು ಮಕ್ಕಳು ಡಾಕ್ಟರ್, ಇಂಜಿನಿಯರ್, ಐ.ಎ.ಎಸ್, ಐ.ಪಿ.ಎಸ್ ಅಧಿಕಾರಿಯಾಗಲಿ ಎಂಬುವುದು ಅವರ ಹೆಬ್ಬಯಕೆಯಾಗಿರುತ್ತದೆ. ಆದರೆ ಮಕ್ಕಳು ಒಳ್ಳೆಯ ಪ್ರಜೆಯಾಗಿ ಎನ್ನುವುದಿಲ್ಲ. ಇದು ಸಮಾಜಕ್ಕೆ ಮಾರಕವಾಗಿದೆ. ಪ್ರಜೆಗಳು ದೇಶದ ಪ್ರಾಣಧಾತು ಇದ್ದಂತೆ. ಚುನಾವಣೆಯಲ್ಲಿ ಮತದಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ದೇಶದ ಭವಿಷ್ಯ ಮತ್ತು ಮೌಲ್ಯ ನಿರ್ಣಯವಾಗುತ್ತದೆ ಎಂಬುದನ್ನು ಯಾರು ಮರೆಯಬಾರದು […] - [ಕಲಬುರಗಿ| ದಕ್ಷ ಪೊಲೀಸ್ ಅಧಿಕಾರಿ ಎಂ ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ](https://hikalaburagi.com/kalyana-karnataka/4045/): ಕಲಬುರಗಿ: ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ಮೂಲತಃ ಮೈಸೂರು ಜಿಲ್ಲೆಯವರಾದ ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ಸೇವಾ ಪದಕವನ್ನು ಘೋಷಿಸಿದೆ. ಅಸಾಧಾರಣ ಧೈರ್ಯ, ವಿಶಿಷ್ಟ ಹಾಗೂ ನಿಷ್ಠಾವಂತ ಸೇವೆ, ದೀರ್ಘಕಾಲದ ಶ್ರೇಷ್ಠ ಕಾರ್ಯನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗೆ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಗುರುತಿಸಿದ್ದರಿಂದ ಹಿರಿಯ ಐಪಿಎಸ್ ಅಧಿಕಾರಿ ಪುಟ್ಟಮಾದಯ್ಯ ಎಂ ಅವರಿಗೆ ರಾಷ್ಟ್ರಪತಿ ಪದಕ ಪುರಸ್ಕಾರ ಲಭಿಸಿದೆ. ಈ ಗೌರವವನ್ನು ರಾಷ್ಟ್ರಪತಿಯವರಿಂದ ನೀಡಲಾಗುವ ಪೊಲೀಸ್ ಶ್ರೇಣಿಯ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಪುಟ್ಟಮಾದಯ್ಯ ಎಂ ಅವರು ಈ ಹಿಂದೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ನಿಯಂತ್ರಣ, ಸಾರ್ವಜನಿಕರೊಂದಿಗೆ ಸ್ನೇಹಪೂರ್ಣ ಪೊಲೀಸ್ ವ್ಯವಸ್ಥೆ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದರು. ಅವರ ಸೇವಾ ಅವಧಿಯಲ್ಲಿ ಜಿಲ್ಲೆಯಲ್ಲಿನ […] - [ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ](https://hikalaburagi.com/breaking-news/4042/): ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನ ಮಾಡುವುದರ ಜೊತೆಗೆ 592 ಭರವಸೆಗಳ ಪೈಕಿ 243 ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿರುವುದು ಬಡವರ ಸರ್ಕಾರ. ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.   ಸೋಮವಾರ ಸೇಡಂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಲ್ಯಾಣ‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇಡಂ ಮತಕ್ಷೇತ್ರಕ್ಕೆ‌ ಸಂಬಂಧಿಸಿದ ವಿವಿಧ ಇಲಾಖೆಯ ಸುಮಾರು 579.68 ಕೋಟಿ ರೂ. ವೆಚ್ಚದ 292 ಯೋಜನೆಗಳಿಗೆ ಅಡಿಗಲ್ಲು ಹಾಗೂ 108.35 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಕೈಗೆತ್ತಿಕೊಂಡು ಪೂರ್ಣಗೊಂಡ 75 ಅಭಿವೃದ್ದಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.   ಕಳೆದ ಎರಡೂವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 1.12 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಆರಂಭದಲ್ಲಿ ಇಂತಹ ಯೋಜನೆಗಳನ್ನು ವಿರೋಧಿಸಿದ […] - [ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್](https://hikalaburagi.com/kalyana-karnataka/4039/): ಕಲಬುರಗಿ: “ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಡ್ರಾಮಿಯಲ್ಲಿ ನಡೆದ ವಿವಿಧ ಶಂಕುಸ್ಥಾಪನೆ, ಕಾಮಗಾರಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಇಂದು ಯಡ್ರಾಮಿಯಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ನಡೆದಿದ್ದು, ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭೆ ಸದಸ್ಯರು ಹಾಗೂ ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಿದ್ದೀರಿ. ಆಮೂಲಕ ರಾಜ್ಯದಲ್ಲಿ ನಮಗೆ ದೊಡ್ಡ ಶಕ್ತಿ ನೀಡಿದ್ದು, ನಿಮಗೆ ನಮಿಸುತ್ತೇನೆ. 1 ಸಾವಿರ ಕೋಟಿ ಹಣವನ್ನು ಈ ಒಂದು ಕ್ಷೇತ್ರಕ್ಕೆ ಮಾತ್ರ ನೀಡಲಾಗಿದೆ. ಇತ್ತೀಚೆಗೆ ನಾಲ್ಕೈದು ಬಾರಿ ನಾನು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಈ ಭಾಗದ ಅಭಿವೃದ್ಧಿಗೆ ಸಾವಿರಾರು ಕೋಟಿ ಮೊತ್ತದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ” […] - [ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್](https://hikalaburagi.com/kalyana-karnataka/4036/): ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ ಪ್ರತಿ ಹೊಸ ತಾಲ್ಲೂಕಿಗೆ ಸಾರ್ವಜನಿಕರಿಗೆ ಸಹಾಯವಾಗುವಂತೆ ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳನ್ನು ಕಟ್ಟಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು. ಯಡ್ರಾಮಿಯಲ್ಲಿ ನಡೆದ ವಿವಿಧ ಅಡಿಗಲ್ಲು, ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮದು ಸಗರನಾಡು, ಸೂಫಿ ಸಂತರ ಈ ನಾಡಿನಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ, ಇಲ್ಲಿ ಪ್ರಜಾಸೌಧ ಕಟ್ಟಲು ನಮ್ಮ ತಾಯಿ ಶ್ರೀಮತಿ ಧರ್ಮಸಿಂಗ್ ಅವರು ತಮ್ಮ 5 ಎಕ್ಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ ಎಂದು ಸ್ಮರಿಸಿದರು. ಶಿಕ್ಷಣ ಅತ್ಯಂತ ಪ್ರಭಾವಿಯಾಗಿದ್ದು, ಪ್ರಯತ್ನ ಪಟ್ಟವರು ಸೋಲಲು ಸಾಧ್ಯವಿಲ್ಲ, ಪ್ರತಿ ಗೆಲುವಿನ ಹಿಂದೆ ಶ್ರಮವಿರುತ್ತದೆ. ಈ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಈ ಭಾಗಕ್ಕೆ 300 ಕೆಪಿಎಸ್ ಶಾಲೆಗಳನ್ನು ನೀಡಲಾಗಿದೆ, ಹೆಚ್ಚಿನ ಅಭಿವೃದ್ಧಿಗಾಗಿ ಸಿಎಸ್ಸಾರ್ ಖಾಸಗಿ ಕಂಪನಿಗಳ ಧನಸಹಾಯ ಪಡೆಯಲಾಗುತ್ತಿದೆ, ನಮ್ಮ ಭಾಗದ […] - [ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  ](https://hikalaburagi.com/breaking-news/4033/): ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ ಶಿಕ್ಷಕರ ಕೊರತೆ, ನುರಿತ ಶಿಕ್ಷಕರು ಈ ಭಾಗದಲ್ಲಿಲ್ಲ, ಶಾಲೆ ಕಟ್ಟಡ ಇರದಿದ್ದರು ಪರ್ವಾಗಿಲ್ಲ ಮರದ ಕೆಳಗೆ ಓದಿಸಿ ಆದರೆ ಪರಿಪೂರ್ಣ ಶಿಕ್ಷಕರನ್ನು ನೇಮಕಾತಿ ಮಾಡಿ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು. ಇಂದು ಅವರು ಯಡ್ರಾಮಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮತ್ತು ಕಂದಾಯ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಭಾಗಿತ್ವದಲ್ಲಿ 163.55 ಕೋಟಿ ರೂ ವೆಚ್ಚದಲ್ಲಿ 16 ಹೊಸ ಪ್ರಜಾಸೌಧಗಳು ಮತ್ತು 600 ಕೋಟಿ ರೂ ರಿಂದ 900 ಕೋಟಿ ರೂ ವೆಚ್ಚದಲ್ಲಿ 300 ಕೆಪಿಎಸ್ ನೂತನ ಶಾಲೆಗಳ ಮಂಜೂರಾತಿ, ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ಸರ್ವತೋಮುಖ ಏಳಿಗೆಗೆ 905.87 ಕೋಟಿ ರೂ ಗಳ ಬೃಹತ್ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ […] - [ಕಲಬುರಗಿ| ಹತ್ತು ವರ್ಷಗಳಲ್ಲಿ ಅಸಮಾನತೆಯಿಂದ ಕಲ್ಯಾಣ ಕರ್ನಾಟಕ ಪಾರು: ಮುಖ್ಯಮಂತ್ರಿ ಸಿದ್ದರಾಮಯ್ಯ](https://hikalaburagi.com/kalyana-karnataka/kalaburagi-news/4030/): ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದು 371-ಜೆ ಜಾರಿ ಮಾಡಿ, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೆಲ್ಲ ವರ್ಷದಿಂದ ವರ್ಷಕ್ಕೆ ಸಾವಿರಾರು ಕೋಟಿ ರೂ.ಗಳ ಅನುದಾನ ಹೆಚ್ಚಿಗೆ ನೀಡಿ ಮುಖ್ಯವಾಗಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ದಿಯ ವೇಗವನ್ನು ಹೆಚ್ಚಿಸಿದ್ದು, ಇದೇ ರೀತಿ ಅಭಿವೃದ್ಧಿ ಕಾರ್ಯಗಳು ಮುಂದುವರೆದಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದರು. ಅವರು ಇಂದು ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಯಡ್ರಾಮಿ ಪಟ್ಟಣದ ಕೆಪಿಎಸ್ ಶಾಲಾ ಆವರಣ ಆಯೋಜಿಸಲಾಗಿದ್ದ ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ […] - [ಕಲಬುರಗಿ| ಪ್ರಬುದ್ಧ ಅಕಾಡೆಮಿಯಲ್ಲಿ ಈ ಭಾಗದ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯ ಅರಳಲಿ, ಕನಸು ನನಸಾಗಲಿ: ಸಚಿವ ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/kalaburagi-news/4023/): ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಅಗತ್ಯ ತರಬೇತಿ‌ ನೀಡುವ ಕನಸು ಇಂದು ನನಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಎಂದು ಹರ್ಷ ವ್ಯಕ್ತಪಡಿಸಿದರು. ಕಲಬುರಗಿ ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಬುದ್ಧ ಪರೀಕ್ಷಾ ಪೂರ್ವ ತರಬೇತಿ ಅಕಾಡೆಮಿ ( ಕೇಂದ್ರ ) ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಾವು ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಈ ಕೇಂದ್ರಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು. ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ಭವಿಷ್ಯದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಆದರೆ, ನಮ್ಮ ನಂತರ ಅಧಿಕಾರಕ್ಕೆ ಬಂದ ಸರ್ಕಾರ ಈ ಕೇಂದ್ರದ ಕಾಮಗಾರಿ ಕೈಗೊಳ್ಳಲಿಲ್ಲ. ಆದರೆ, ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ಸುಮಾರು 10,000 ಚದರ ಅಡಿಯಲ್ಲಿ ರೂ […] - [ಕಲಬುರಗಿ| ಮಹಾನಗರ ಪಾಲಿಕೆಯ 108.10ಕೋಟಿ ರೂ. ಕಾಮಗಾರಿಗಳಿಗೆ ಅಡಿಗಲ್ಲು; ಕಲಬುರಗಿ ನೀಲಿ ನಕ್ಷೆ ಬದಲಾಯಿಸುತ್ತೇವೆ: ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/kalaburagi-news/4017/): ಕಲಬುರಗಿ: ಮುಂದಿನ 50 ವರ್ಷದಲ್ಲಿ ಕಲಬುರಗಿ ಹೇಗಿರಬೇಕೆಂಬುದು ಸಂಕಲ್ಪ ಹೊಂದಿದ್ದು, ಅದರಂತೆ ಮುಂದಿನ ಎರಡೂವರೆ ವರ್ಷದಲ್ಲಿ ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಕಲಬುರಗಿ‌ ನಗರದ ನೀಲಿ ನಕ್ಷೆ ಬದಲಾಯಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ರವಿವಾರ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಕಲಬುರಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಕಲಬುರಗಿ, ಕೆ.ಕೆ.ಆರ್.ಡಿ.ಬಿ ಹಾಗೂ ವಸತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಎನ್.ಜಿ.ಬಿ ಪರಿಸರ ಪರಿಹಾರ ನಿಧಿಯಲ್ಲಿ ಒಳಚರಂಡಿ ಕಾಮಗಾರಿ ಹಾಗೂ ವಿವಿಧ ಅನುದಾನದ ಅಡಿಯಲ್ಲಿ ಒಟ್ಟು ರೂ. 108.82 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ, ಪಾಲಿಕೆ ಶೇ.24.10 ಯೋಜನೆ ಅಡಿಯಲ್ಲಿ ಪೌರಕಾರ್ಮಿಕರಿಗೆ ನಿವೇಶನ ಖರೀದಿ ಪತ್ರ ವಿತರಣೆ ಹಾಗೂ ಕುಷ್ಠ ರೋಗದಿಂದ ಗುಣಮುಖ ಹೊಂದಿದವರಿಗೆ ನಿವೇಶನ ಹಕ್ಕು ಪತ್ರ ವಿತರಣಾ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ […] - [ಕಲಬುರಗಿ| 20 ಗ್ರಾಮದಲ್ಲಿ "ಸ್ಪಂದನ" ಗ್ರಾಮ ಹಿರಿಯರ‌ ಕೇಂದ್ರ: ಲಾಂಛನ ಬಿಡುಗಡೆ ಮಾಡಿದ‌ ಸಚಿವ‌ ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/kalaburagi-news/4014/): ಕಲಬುರಗಿ: ಗ್ರಾಮೀಣ ಭಾಗದಲ್ಲಿ ಹಿರಿಯ ನಾಗರಿಕರಲ್ಲಿ ಸಾಮಾನ್ಯವಾಗಿ ಕಂಡುಬರುವ ನಿರ್ಲಕ್ಷ್ಯತೆ ಮತ್ತು ಪ್ರತ್ಯೇಕತೆಯ ಭಾವನೆ ಉಂಟಾಗದಂತೆ ಅವರನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ದೇಹ ಮತ್ತು ಮನಸ್ಸನ್ನು ಸಕ್ರಿಯವಾಗಿಡುವ ಉದ್ದೇಶದಿಂದ ಕಲಬುರಗಿಯಲ್ಲಿ ಪ್ರಾಯೋಗಿಕವಾಗಿ ತೆರೆಯಲಾಗುತ್ತಿರುವ “ಸ್ಪಂದನ” ಗ್ರಾಮ ಹಿರಿಯರ‌ ಕೇಂದ್ರದ‌ ಲಾಂಛನವನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡಗಡೆ ಮಾಡಿದರು. ರವಿವಾರ ಕಲಬುರಗಿ‌ ನಗರದ ವಾಜಪೇಯಿ ಬಡಾಣೆಯ ಪ್ರಬುದ್ಧ ಅಕಾಡೆಮಿ ಉದ್ಘಾಟನೆ ಕಾರ್ಯಕ್ರಮದಲ್ಲಿ “ಸ್ಪಂದನ” ಕೇಂದ್ರದ ಪೋಸ್ಟರ್ ಅನಾವರಣ ಮಾಡಿದರು. ವಲಸೆ ಮತ್ತು ಹೆಚ್ಚುತ್ತಿರುವ ವಿಭಕ್ತ ಕುಟುಂಬಗಳ ವ್ಯವಸ್ಥೆ ಹಾಗೂ ಡಿಜಿಟಲ್ ಕ್ರಾಂತಿಯಿಂದಾಗಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಹಿರಿಯ ನಾಗರಿಕರಲ್ಲಿ ನಿರ್ಲಕ್ಷ್ಯ ಮತ್ತು ಪ್ರತ್ಯೇಕತೆಯ ಭಾವನೆ ಉಂಟಾಗುತ್ತದೆ. ಇದರಿಂದ ಹಿರಿಯ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮ ಕ್ಷೀಣಿಸುವ ಸಾಧ್ಯತೆ ಇದ್ದು, ಇದನ್ನು ತಪ್ಪಿಸಲೆಂದೇ ಈ ಕೇಂದ್ರಗಳು ತೆರೆದು ಅಲ್ಲಿ ಹಿರಿಯ ನಾಗರಿಕರನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ […] - [ಕಲಬುರಗಿ| ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ; ಹೆಮ್ಮೆಯ ಸಂಗತಿ ಎಂದ ಸಚಿವ ಪ್ರಿಯಾಂಕ್ ಖರ್ಗೆ](https://hikalaburagi.com/kalyana-karnataka/4011/): ಕಲಬುರಗಿ: ಸಾರ್ವಜನಿಕರ ಸೇವೆ, ನಾಗರಿಕ ಸ್ನೇಹಿ, ವೃತ್ತಿಪರತೆ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ. ಹಾಗಾಗಿ ಅಂತರಾಷ್ಟ್ರೀಯ ISO 9001 2015 ಪ್ರಶಸ್ತಿ ಲಭಿಸಿದೆ. ಇದು ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಪ್ರತಿಯೊಬ್ಬ ಸಿಬ್ಬಂದಿ ಕಾರಣರಾಗಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ರವಿವಾರ ಬೆಳಗ್ಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡುತ್ತಿದ್ದರು. ಈಗ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸಿಕ್ಕಿದೆ. ಆದರೆ ಜನರಿಂದ ಹೊಗಳಿಗೆಯ ಪ್ರಶಸ್ತಿ ಪಡೆಯುವಲ್ಲಿ ಪೊಲೀಸರು ಮತ್ತಷ್ಟು ಜನಸ್ನೇಹಿ ಆದಾಗ ಮಾತ್ರ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು. ಕ್ರೈಮ್ ನಲ್ಲಿ ಸಾಕಷ್ಟು ಇಳಿಮುಖವಾಗಿದೆ. ಎಸ್ಸಿ ಎಸ್ ಟಿ ಸಂಬಂಧಿಸಿದ ಕೇಸ್ ಗಳು ಕಮ್ಮಿಯಾಗಿವೆ. ಸಾಮಾನ್ಯ ಅಪರಾಧ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಿವೆ. ಚೈನ್ ಕಳ್ಳತನ ಗಳೂ […] - [ಕಲಬುರಗಿ| ವೆನೆಜುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಪ್ರತಿಭಟನೆ](https://hikalaburagi.com/kalyana-karnataka/kalaburagi-news/4008/): ಕಲಬುರಗಿ: ಸಿಪಿಐ, ಸಿಪಿಐಎಂ ಹಾಗೂ ಎಸ್.ಯು.ಸಿ.ಐ ಎಡ ಪಕ್ಷಗಳ ನೇತೃತ್ವದಲ್ಲಿ ವೆನೆಜುವೆಲಾ ದೇಶದ ಮೇಲೆ ಅಮೆರಿಕ ದಾಳಿ ಖಂಡಿಸಿ, ಇಲ್ಲಿಯ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಲ್ಲಿ ಅಮೇರಿಕಾ ಸಾಮ್ರಾಜ್ಯಶಾಹಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ವೆನೆಜುವೆಲಾ ವಿರುದ್ಧ ಯು.ಎಸ್. ಆಕ್ರಮಣ ಹಾಗೂ ಅಲ್ಲಿನ ಅಧ್ಯಕ್ಷ ನಿಕೋಲಸ್ ಮಡುರೊ, ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಅಪಹರಣವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ವಿಶ್ವಸಂಸ್ಥೆಯ ಚಾರ್ಟರನ್ನು ಮತ್ತು ಹಲವು ಅಂತರರಾಷ್ಟೀಯ ಕಾನೂನು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು. ‘ನರ್ಕೊ-ಟೆರರಿಸ್ಟ (ಮಾದಕದ್ರವ್ಯ-ಭಯೋತ್ಪಾದಕ) ಗ್ಯಾಂಗುಗಳ ವಿರುದ್ಧ ಯುದ್ಧದ ನೆಪದಲ್ಲಿ ವೆನೆಜುವೆಲಾದ ಸುತ್ತಲೂ ಕಳೆದ ಹಲವು ದಶಕಗಳಲ್ಲಿ ಕಂಡಿರದ ಭಾರೀ ನೌಕಾ-ವಾಯುಸೇನಾ ಜಮಾವಣೆಯಾಗಿತ್ತು. ಯಾವುದೇ ಪುರಾವೆ ಇಲ್ಲದೆ ನರ್ಕೊ-ಟೆರರಿಸ್ಟ ಗ್ಯಾಂಗುಗಳದ್ದು ಎಂದು ಆಪಾದಿಸಿ 35 ನಾಗರಿಕ ದೋಣಿಗಳ ಮೇಲೆ ಬಾಂಬ್ ದಾಳಿ ನಡೆಸಿ 115 ಅಮಾಯಕ ಜನರ ಕಗ್ಗೊಲೆ ಮಾಡಲಾಗಿದೆ. “ದಿಗ್ಬಂಧಿತ ತೈಲ” ಸಾಗಾಣಿಕೆಯೆಂದು ಆಪಾದಿಸಿ ಎರಡು ತೈಲ ಹಡಗಗಳನ್ನು […] - [ಕಲಬುರಗಿ ಜಿಲ್ಲೆಗೆ ನಾಳೆ(ಜ.12) ಸಿಎಂ ಆಗಮನ| ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸಿ: ಪ್ರಿಯಾಂಕ್ ಖರ್ಗೆ ಸೂಚನೆ](https://hikalaburagi.com/kalyana-karnataka/kalaburagi-news/4005/): ಕಲಬುರಗಿ: ಜ.12 ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ “ಪ್ರಜಾ ಸೌಧ” ನಿರ್ಮಾಣಕ್ಕೆ ಅಡಿಗಲ್ಲು ಸೇರಿದಂತೆ ಯಡ್ರಾಮಿ ಮತ್ತು ಸೇಡಂ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ಡಿ.ಸಿ.ಎಂ ಡಿ.ಕೆ.ಶಿವಕುಮಾರ ಅವರುಗಳು ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಪರಸ್ಪರ‌ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು. ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಸೋಮವಾರ ಮೊದಲು ಯಡ್ರಾಮಿ ನಂತರ‌ ಸೇಡಂನಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಸುಮಾರು 1,595 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ,‌ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಸೇರಿದಂತೆ ಪ್ರದೇಶದ ಸಚಿವರು,‌ ಚುನಾಯಿತ ಜನಪ್ರತಿನಿಧಿಗಳು ಸಹ ಆಗಮಿಸಲಿರುವ ಹಿನ್ನೆಲೆಯಲ್ಲಿ ಗಣ್ಯರ […] - [ಕಲಬುರಗಿ| ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ](https://hikalaburagi.com/kalyana-karnataka/kalaburagi-news/4002/): ಕಲಬುರಗಿ: ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಮನವಿ ಪತ್ರ ಸಲ್ಲಿಸಲಾಯಿತು. ಇಲ್ಲಿನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇವೆ, ಈ ಕುರಿತು ತಪ್ಪಿತಸ್ಥರ ವಿರುದ್ಧ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಜೀವಂತ ಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಹರ್ಷನಂದಾ ಗುತ್ತೇದಾರ್, ನಿತೀನ್ ಗುತ್ತೇದಾರ್, ಮಹಾದೇವ ಬೆಳಮಗಿ, ಉಮೇಶ್ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಸಂತೋಷಿರಾಣಿ ಪಾಟೀಲ್ ತೆಲ್ಕೂರ, ಸಂತೋಷ್ ಹಾದಿಮನಿ, ಜಯಶ್ರೀ ಮತ್ತಿಮೂಡ, […] - [ಕಲಬುರಗಿ| ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣವನ್ನು ನೀಡಿ: ಬಸವರಾಜ ದೇಶಮುಖ](https://hikalaburagi.com/kalyana-karnataka/kalaburagi-news/3999/): ಕಲಬುರಗಿ : ವಿದ್ಯಾರ್ಥಿಗಳಿಗೆ ಮೌಲ್ಯಧಾರಿತ ಶಿಕ್ಷಣವನ್ನು ನೀಡುವುದು ಶಿಕ್ಷಕರ ಮಹತ್ವದ ಜವಾಬ್ದಾರಿಯಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು. ನಗರದ ಗೋದುತಾಯಿ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದಲ್ಲಿ ಶನಿವಾರ ಜ್ಞಾನ ಶಕ್ತಿ ವಿದ್ಯಾರ್ಥಿ ಅಕಾಡೆಮಿ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗದೇ, ಶಿಸ್ತು, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತಿದೆ. ಮಹಿಳಾ ಶಿಕ್ಷಣವು ಸಮಾಜದ ಅಭಿವೃದ್ಧಿಯ ಮೂಲಸ್ತಂಭವಾಗಿದೆ. ಒಬ್ಬ ಹೆಣ್ಣುಮಗುವಿಗೆ ಶಿಕ್ಷಣ ನೀಡುವುದು ಎಂದರೆ ಒಂದು ಕುಟುಂಬಕ್ಕೆ, ಒಂದು ಸಮಾಜಕ್ಕೆ ಮತ್ತು ದೇಶದ ಭವಿಷ್ಯಕ್ಕೆ ಬೆಳಕು ನೀಡಿದಂತೆಯೇ. ಮಹಿಳೆಯರು ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗುತ್ತಾರೆ, ಆತ್ಮವಿಶ್ವಾಸವನ್ನು ಹೊಂದುತ್ತಾರೆ ಮತ್ತು ಸಮಾಜದ ಪರಿವರ್ತನೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಲಿಂ. ಪೂಜ್ಯ ದೊಡ್ಡಪ್ಪ ಅಪ್ಪ ಅವರು ಹೆಣ್ಣು ಮಕ್ಕಳಿಗಾಗಿಯೇ ಅಂದು ಆರಂಭಿಸಿದ ಶಾಲೆ ಇಂದು ಲಿಂ.ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ವಿಶ್ವವಿದ್ಯಾಲಯದ ಮಟ್ಟಕ್ಕೆ ಬೆಳೆಸಿದ್ದಾರೆ. ಈ ಭಾಗದ ಮಹಿಳೆಯರು ಹೆಚ್ಚಿನ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆಯಬೇಕು ಎಂದರು. […] - [ಕಲಬುರಗಿ| ರಾಜ್ಯ ಸರ್ಕಾರದ ವಿರುದ್ಧ ಕುದರೆ, ಕತ್ತೆಗಳೊಂದಿಗೆ ವಿನೂತನ ಹೋರಾಟ](https://hikalaburagi.com/kalyana-karnataka/kalaburagi-news/3996/): ಕಲಬುರಗಿ: ಕೇವಲ ಗ್ಯಾರಂಟಿಗಳಲ್ಲಿಯೇ ಸರ್ಕಾರ ಮುಳಿಗದೆ. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯತ್ತ ಗಮನ ಸಹರಿಸದೇ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಅವರ ನೇತೃತ್ವದಲ್ಲಿ ಕುದರೆ ಹಾಗೂ ಕತ್ತೆಗಳೊಂದಿಗೆ ವಿನೂತನ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಎಸ್‌ವಿಪಿ ವೃತ್ತದಿಂದ ಶುರುವಾರ ಕುದುರೆ ಹಾಗೂ ಕತ್ತೆಗಳೊಂದಿಗಿನ ಪ್ರತಿಭಟನೆ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮುಕ್ತಾಯವಾಯಿತು, ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಗೃಹ ಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ರೂ. 2,000 ನೀಡಲಾಗುತ್ತಿದೆ. ಆದರೆ ಅದರಿಂದ ಮಹಿಳೆಯರಿಗೆ ಏನು ಲಾಭ? ಅದರ ಬದಲಾಗಿ ಮಹಿಳೆಯರಿಗೆ ಉದ್ಯೋಗವಕಾಶಗಳನ್ನು ಸೃಷ್ಠಿ ಮಾಡುವಂತ ಯೋಜನೆಗಳನ್ನು ರೂಪಸಬೇಕಾಗಿತ್ತು. ಅಲ್ಲದೇ ಅನ್ನಭಾಗ ಯೋಜನೆಯಲ್ಲಿಯೂ ಪಡಿತರ ಅಕ್ಕಿ ಬದಲು ತಲಾ 38 ರೂ ಹಣವನ್ನು ಖಾತೆಗೆ ಹಾಕಲಾಗುತ್ತಿದೆ. ಹಣದ ಬದಲು ಅಕ್ಕಿ ಖರೀದಿಸಲು ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ? ಗೃಹಜ್ಯೋತಿ ಯೋಜನೆಯಲ್ಲಿ ಉಚಿತ ವಿದ್ಯುತ್ ಎಂದು ಮಾತ್ರ ಹೇಳಲಾಗುತ್ತಿದೆ. ಅದರ […] - [ಕಲಬುರಗಿ| ಡಾ.ಬಾಬು ಜಗಜೀವನ ರಾಮ ಭವನಕ್ಕೆ ಅನುದಾನಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ](https://hikalaburagi.com/kalyana-karnataka/kalaburagi-news/3993/): ಕಲಬುರಗಿ: ನಗರದಲ್ಲಿ ನಿರ್ಮಿಸುತ್ತಿರುವ ಡಾ. ಬಾಬು ಜಗಜೀವನ ರಾಮ ಅವರ ಬೃಹತ್ ಭವನಕ್ಕೆ ಹೆಚ್ಚುವರಿಯಾಗಿ ಅನುದಾನ ನೀಡಿ ಭವನ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಿಲ್ಲಾ ಮಾದಿಗರ ಸಮಾಜದ ಅಭಿವೃದ್ಧಿ ಒಕ್ಕೂಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು 2025ರ ಏಪ್ರಿಲ್ 3 ರಂದು ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದು ಇನ್ನೂ 6.50 ಕೋಟಿ ಕಟ್ಟಡ ಕಾಮಗಾರಿಗೆ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಿದ್ದಾರೆ, ಅದಲ್ಲದೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ಮಂಜುರಾತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರತಿಯಾಗಿ ಹೆಚ್ಚುವರಿ ಹಣ ನಮ್ಮಲ್ಲಿ ಇಲ್ಲ ಎಂದು ಹೇಳಿ, ಸ್ಥಳೀಯರಿಂದ ಹಣ ಸಂಗ್ರಹಿಸಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಹಿಂಬರಹ ಕಳಿಸಿರುತ್ತಾರೆ. ಹಾಗಾಗಿ ಮಂಜೂರಾಗಬೇಕಿರುವ ಹಣವನ್ನು ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು. ಇದೇ ವೇಳೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಚಿವ ಪ್ರಿಯಾಂಕ್ ಖರ್ಗೆ […] - [ಕಲಬುರಗಿ| ರಾಜ್ಯದಲ್ಲಿ 900 ಕೆ.ಪಿ.ಎಸ್. ಶಾಲೆ ನಿರ್ಮಾಣ; ಶಿಕ್ಷಕರ ಭರ್ತಿ ಒತ್ತು: ಸಚಿವ ಎಸ್.ಮಧು ಬಂಗಾರಪ್ಪ](https://hikalaburagi.com/kalyana-karnataka/3990/): ಕಲಬುರಗಿ: ಹಳ್ಳಿ ಮಕ್ಕಳಿಗೆ ಖಾಸಗಿ ಕಾನ್ವೆಂಟ್ ಶಾಲೆ ಮೀರಿಸುವ ಗುಣಮಟ್ಟದ ಶಿಕ್ಷಣ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ ದಿನದಲ್ಲಿ ರಾಜ್ಯದಾದ್ಯಂತ 900 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಿಸಲಾಗುತ್ತದೆ ಎಂದು ಶಾಲಾ‌ ಶಿಕ್ಷಣ ಮತ್ತು ಸಾಕ್ಷರತೆ ಸಚಿವ‌ ಎಸ್.ಮಧು ಬಂಗಾರಪ್ಪ ಹೇಳಿದರು. ಬುಧವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ‌ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆಯಿಂದ 600, ಹಿಂದುಳಿದ, ಅಲ್ಪಸಂಖಾತ ಕಲ್ಯಾಣ ಇಲಾಖೆ ಹಾಗೂ ಸಿ.ಎಸ್.ಆರ್. ನಿಧಿಯಡಿ ತಲಾ 100 ಸೇರಿ 900 ಶಾಲೆ ನಿರ್ಮಿಸಲಾಗುತ್ತದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಲಾಖೆಯಿಂದ 100 ಸಂಖ್ಯೆ ಜೊತೆಗೆ ಕೆ.ಕೆ.ಆರ್.ಡಿ.ಬಿ. ಮಂಡಳಿಯಿಂದ ಹೆಚ್ಚುವರಿಯಾಗಿ 200 ಶಾಲೆ ಅಸ್ತಿತ್ವಕ್ಕೆ ಬರಲಿವೆ ಎಂದರು. ಹೊಸದಾಗಿ 900 ಕೆ.ಪಿ.ಎಸ್. ಶಾಲೆ ಜೊತೆಗೆ ಪ್ರಸ್ತುತ ಅಸ್ತಿತ್ವದಲ್ಲಿರುವ 309 ಮಾದರಿ ಶಾಲೆಗೆ ಹೆಚ್ಚಿನ ಅನುದಾನ ನೀಡಿ ಮೂಲಸೌಕರ್ಯ ಬಲವರ್ಧನೆ ಮಾಡಲಾಗುವುದು. ಕೆ.ಪಿ.ಎಸ್. ಶಾಲೆಯಲ್ಲಿನ ಶಿಕ್ಷಕರಿಗೆ ಅಗತ್ಯಕ್ಕನುಗುಣವಾಗಿ ತರಬೇತಿ ಸಹ ನೀಡುವ ಕಾರ್ಯ ನಡೆದಿದೆ […] - [ಕಲಬುರಗಿ| ಬೆಂಬಲ ಬೆಲೆ, ಬೆಳೆ ವಿಮೆ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ](https://hikalaburagi.com/kalyana-karnataka/kalaburagi-news/3987/): ಕಲಬುರಗಿ: ತೊಗರಿ ಬೆಳೆಗಾರರ ಸಂರಕ್ಷಣೆಗಾಗಿ, ಬೆಂಬಲ ಬೆಲೆಗಾಗಿ, ಬೆಳೆ ವಿಮೆ ಹಣ ಬಿಡುಗಡೆ ಮಾಡುವುದು, ಪರಿಹಾರದ ಹಣ ತಾರತಮ್ಯ ಬಗೆಹರಿಸಿ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿ ಮತ್ತು ಇಸ್ಕೊ ಟೋಕಿಯೊ ಬೆಳೆ ವಿಮಾ ಕಂಪನಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸಿದರು. ಪ್ರತಿಭಟನೆಕಾರರು ನಂತರ ಅಧಿಕಾರಿಯ ಮೂಲಕ ಮುಖ್ಯಮಂತ್ರಿಗೆ, ಜಿಲ್ಲಾಧಿಕಾರಿಗೆ, ಜಂಟಿ ಕೃಷಿ ನಿರ್ದೇಶಕರಿಗೆ, ಇಫ್ಕೋ ಟೋಕಿಯೋ ಜನರಲ್ ಇನ್ಸುರೆನ್ಸ್ ಕಂಪನಿಯ ಪ್ರಧಾನ ವ್ಯವಸ್ಥಾಪಕರಿಗೆ, ಶಾಖಾ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಬೆಳೆ ಮೇಲೆ. ಇದು ಬಂಪರ್ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಒಂದೆಡೆ ಬರ, ಇನ್ನೊಂದೆಡೆ ನೆರೆ. ಎರಡೂ ಪಾರಾಗಿ ಬಂದರೂ ಸೂಕ್ತ ಬೆಲೆ […] - [ಕಲಬುರಗಿ| ಸಾಮಾಜಿಕ ನ್ಯಾಯದ ಹೋರಾಟಕ್ಕೆ ಸಾವಿತ್ರಿಬಾಯಿ ಫುಲೆ ಪ್ರೇರಣೆ: ಶಿವಲಿಂಗಪ್ಪ ಕಿನ್ನೂರ್](https://hikalaburagi.com/kalyana-karnataka/3984/): ಕಲಬುರಗಿ: ಮಾತೆ ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ನ್ಯಾಯ, ಮಹಿಳಾ ಶಿಕ್ಷಣ ಮತ್ತು ಶೋಷಿತ ಸಮುದಾಯಗಳ ಹಕ್ಕುಗಳ ಹೋರಾಟಕ್ಕೆ ಅಪಾರ ಪ್ರೇರಣೆಯಾಗಿದ್ದಾರೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಶಿವಲಿಂಗಪ್ಪ ಕಿನ್ನೂರ್ ಹೇಳಿದರು. ರಾಷ್ಟ್ರೀಯ ಸಮಾಜ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಇಂದು ಪಕ್ಷದ ಕಚೇರಿಯಲ್ಲಿ ರಾಷ್ಟ್ರ ಮಾತೆ ಸಾವಿತ್ರಿಬಾಯಿ ಜ್ಯೋತಿಬಾ ಫುಲೆ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್, ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ಹಾಗೂ ಸಾಮಾಜಿಕ ಸಮಾನತೆಯ ಹೋರಾಟದಲ್ಲಿ ಸಲ್ಲಿಸಿದ ಅನನ್ಯ ಕೊಡುಗೆಗಳನ್ನು ಸ್ಮರಿಸಿದರು. ಅವರ ಜೀವನ ಚರಿತ್ರೆಯನ್ನು ಜನಸಾಮಾನ್ಯರಲ್ಲಿ, ವಿಶೇಷವಾಗಿ ಯುವಪೀಳಿಗೆ ಯಲ್ಲಿ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಶಕ್ತಿಗೆ ತಕ್ಕಂತೆ ‘ಅಳಿಲು ಸೇವೆ’ ಸಲ್ಲಿಸುವ ಮೂಲಕ ಸಾಮಾಜಿಕ ಪರಿವರ್ತನೆಯ ಹೋರಾಟದಲ್ಲಿ ಭಾಗಿಯಾಗಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಶರಣಪ್ಪ […] - [ಕಲಬುರಗಿ| ಸೇಡಂ ತಾಲ್ಲೂಕು ಕಚೇರಿಗೆ ಹುಸಿ ಬಾಂಬ್ ಬೆದರಿಕೆ; ತಪಾಸಣೆ](https://hikalaburagi.com/kalyana-karnataka/kalaburagi-news/3981/): ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ತಾಲ್ಲೂಕು ಕಚೇರಿ ಪ್ರಜಾಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ಮಂಗಳವಾರ ನಡೆದಿದೆ. ಅನಾಮಿಕ ಇಮೇಲ್ ಮೂಲಕ ತಹಶೀಲ್ದಾರ್ ಅವರ ಅಧಿಕೃತ ಇಮೇಲ್‌ಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶ್ರೀಯಾಂಕ್ ಧನಶ್ರೀ ಅವರು ತಕ್ಷಣವೇ ಸೇಡಂ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳದ ತಂಡದವರು ಹಾಗೂ ಶ್ವಾನದಳದ ಸಿಬ್ಬಂದಿ ಪ್ರಜಾಸೌಧಕ್ಕೆ ದೌಡಾಯಿಸಿ ಕಟ್ಟಡದ ಒಳಭಾಗ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಿದರು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಭಯಭೀತರಾದ ಕಚೇರಿ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದು, ಇಮೇಲ್ ಮೂಲ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಈ ಸಂದರ್ಭದಲ್ಲಿ ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ತಹಸಿಲ್ದಾರ್ […] - [ಕಲಬುರಗಿ| “ಆನೆ ಕದ್ದರು ಕಳ್ಳ - ಅಡಿಕೆ ಕದ್ದರೂ ಕಳ್ಳ”; ತಪ್ಪಿತಸ್ಥ ಸರ್ಕಾರಿ ನೌಕರರ ಮೇಲೆ ಕಟ್ಟುನಿಟ್ಟಿನ ಕ್ರಮ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್](https://hikalaburagi.com/breaking-news/3978/): ಕಲಬುರಗಿ: ಕಾನೂನಿನಲ್ಲಿ ಸರ್ಕಾರಿ ನೌಕರರ ಪ್ರತಿ ತಪ್ಪಿಗೂ ತನ್ನದೇ ಆದ ಶಿಕ್ಷೆ ಇದೆ, ಎಲ್ಲಾ ಕಳ್ಳರನ್ನು ಒಂದೇ ತಕ್ಕಡಿಯಲ್ಲಿ ತೂಗುವುದಿಲ್ಲ, “ಆನೆ ಕದ್ದರು ಕಳ್ಳ – ಅಡಿಕೆ ಕದ್ದರೂ ಕಳ್ಳ” ಆಗುವ ಕಾರಣಕ್ಕೆ ತಪ್ಪಿತಸ್ಥ ಸರ್ಕಾರಿ ನೌಕರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ “ಕಲಬುರಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ” ಉದ್ದೇಶಿಸಿ ಮಾತನಾಡಿದ ಅವರು ಲೋಕಾಯುಕ್ತ ಬೆಂಗಳೂರಿನ ಕೇಂದ್ರ ಕಚೇರಿಯಿಂದ ರಾಜ್ಯದಲ್ಲಿ ವಲಯವಾರು ನೇರ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಜನವರಿ 2 ರಿಂದ ಇಂದಿನವರೆಗೆ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಗಳಲ್ಲಿ ವಿವಿಧ ಇಲಾಖೆಗಳ ತಪಾಸಣೆ ಮಾಡಲಾಗಿದೆ ಎಂದರು. ಇಬ್ಬರೂ ನ್ಯಾಯಾದೀಶರನ್ನು ಒಳಗೊಂಡಂತೆ ಒಬ್ಬ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, 5 ಅಪರ ಪೊಲೀಸ್ ವರಿಷ್ಠಾಧಿಕಾರಿಗಳು, 16 ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮತ್ತು 26 ಪೊಲೀಸ್ ಸಿಬ್ಬಂದಿ ಒಳಗೊಂಡ ಒಟ್ಟು […] - [ಕಲಬುರಗಿ ನಗರದಲ್ಲಿನ 7 ಕೆರೆ ಜಾಗ ಒತ್ತುವರಿ ತೆರವುಗೊಳಿಸಿ, ಜಮೀನು ಜಪ್ತಿ ಮಾಡಿ: ನ್ಯಾ. ಬಿ.ಎಸ್.ಪಾಟೀಲ](https://hikalaburagi.com/kalyana-karnataka/kalaburagi-news/3975/): ಕಲಬುರಗಿ: ಕಲಬುರಗಿ ಮಹಾನಗರದಲ್ಲಿ ನಿಜಾಮರ ಕಾಲದಿಂದ ಇರುವ 7 ಕೆರೆಗಳಲ್ಲಿ ಆಗಿರುವ ಒತ್ತುವರಿಯನ್ನು ತೆರವುಗೊಳಿಸಿ ಜಮೀನನ್ನು ಮರಳಿ ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದರು. ಸೋಮವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿ ನಗರದಲ್ಲಿನ ಕೆರೆ ಒತ್ತುವರಿ ಸಂಬಂಧ ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಙಧಿಸಿದಂತೆ ಇಂದಿಲ್ಲಿ ವಿಚಾರಣೆ ನಡೆಸಿದ್ದು, ನಿಜಾಮ ಸರ್ಕಾರದಿಂದಲೆ ಜಮೀನು ಹಂಚಿಕೆಯಾಗಿದೆ ಎಂದು ಹೇಳಲಾಗುತ್ತಿದೆಯಾದರು ಅಧಿಕಾರಿಗಳ ಬಳಿ ಅಧಿಕೃತ ದಾಖಲೆ ಇಲ್ಲ. ಕಂದಾಯ ದಾಖಲೆಯಲ್ಲಿ ಅದು ಸರ್ಕಾರಿ ಜಮೀನಾಗಿದೆ. ಹೀಗಾಗಿ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದ ಅವರು, ಒತ್ತುವರಿಯಾದ ಜಾಗದಲ್ಲಿ ಪ್ರಸ್ತುತ ಇರುವ ಜನವಸತಿ ಬಗ್ಗೆಯೂ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದರು. ಹಿಂದೆ 3-4 ವರ್ಷದ ಹಿಂದೆ ಕಲಬುರಗಿಗೆ ಬಂದು ಹೋಗಿದ್ದೆ. ಇದೀಗ ನೋಡಿದರೂ ಇಲ್ಲಿ […] - [ಕಲಬುರಗಿ| ಹೆಸರು, ಉದ್ದು, ಸೂರ್ಯಕಾಂತಿ ಕಾಳು ಹಾಗೂ ಸೋಯಾಬಿನ್ ಮಾರಾಟ ಮಾಡಲು ಕಾಲಾವಧಿ ವಿಸ್ತರಣೆ: ಡಿಸಿ ಫೌಜಿಯಾ ತರನ್ನುಮ್](https://hikalaburagi.com/kalyana-karnataka/kalaburagi-news/3973/): ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಮಾರಾಟ ಮಾಡಲು ಈಗಾಗಲೇ ನಿಗದಿತ ಅವಧಿಯಲ್ಲಿ ನೊಂದಾಯಿಸಿಕೊಂಡಿರುವ ರೈತರು ಮಾರಾಟ ಮಾಡುವ ಕಾಲಾವಧಿ ವಿಸ್ತರಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ಹೆಸರು ಕಾಳು ಪ್ರತಿ ಕ್ವಿಂಟಾಲ್‍ಗೆ 8,768 ರೂ., ಉದ್ದಿನ ಕಾಳು ಪ್ರತಿ ಕ್ವಿಂಟಾಲ್‍ಗೆ 7,800 ರೂ. ಮತ್ತು ಸೂರ್ಯಕಾಂತಿ ಪ್ರತಿ ಕ್ವಿಂಟಾಲ್‍ಗೆ 7,721 ರೂ. ಗಳಂತೆ ಖರೀದಿಸಲಾಗುತ್ತಿದ್ದು, ಈ ಉತ್ಪನ್ನಗಳ ಮಾರಾಟ ಮಾಡಲು ಇದೇ ಜನವರಿ 22ರ ವರೆಗೆ ಹಾಗೂ ಸೋಯಾಬೀನ್ ಪ್ರತಿ ಕ್ವಿಂಟಾಲ್‍ಗೆ 5,328 ರೂ. ಗಳಂತೆ ಮಾರಾಟ ಮಾಡಲು ಜನವರಿ 26 ರವರೆಗೆ ಕಾಲಾವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ರೈತರು ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (ಪಿ.ಎ.ಸಿ.ಎಸ್) (PACS) ಹಾಗೂ (ಎಫ್.ಪಿ.ಓ.) FPO ಗಳಿಗೆ ಭೇಟಿ ನೀಡಿ […] - [ಕಲಬುರಗಿ| ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಡಾ.ಅಜಯ್ ಸಿಂಗ್](https://hikalaburagi.com/kalyana-karnataka/kalaburagi-news/3967/): ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ ಕಾಯ್ದೆ ವಿಶೇಷ ಮೀಸಲಾತಿ ತಂದು ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒಂದೆಡೆ ಪಣ ತೊಟ್ಟಿದರೆ, ಅತ್ತ ಕೇಂದ್ರ ಸರ್ಕಾರ ಮ್ಯಾಚಿಂಗ್‌ ಗ್ರ್ಯಾಂಟ್ ನೀಡದೆ ವಿಳಂಬ ಧೋರಣೆ ತೋರುತ್ತಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಹೇಳಿದರು. ಕೆ.ಕೆ.ಆರ್.ಡಿ.ಬಿ. ಮಂಡಳಿ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರಪತಿ, ಪ್ರಧಾನಮಂತ್ರಿ, ಹಣಕಾಸು ಸಚಿವರಿಗೆ ಹಲವಾರು ಬಾರಿ ಸಿ.ಎಂ. ಅವರು ಪತ್ರ ಬರೆದಿದ್ದಾರೆ. ಇದಲ್ಲದೆ ಖುದ್ದಾಗಿ ಭೇಟಿಯಾಗಿ ಮನವರಿಕೆ ಮಾಡಿದ್ದರು ಇದೂವರೆಗೆ ಅನುದಾನ ಬಂದಿಲ್ಲ. ಹೀಗಾಗಿ ಸಿ.ಎಂ. ಅವರೊಂದಿಗೆ ಚರ್ಚಿಸಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲು ಶೀಘ್ರ ದಿನಾಂಕ ನಿಗದಿಪಡಿಸಲಾಗುವುದು ಎಂದರು.   2013-14 ರಿಂದ 2025-26ನೇ ಸಾಲಿನ ವರೆಗೆ ರಾಜ್ಯ ಸರ್ಕಾರದಿಂದ ಕೆ.ಕೆ.ಆರ್.ಡಿ.ಬಿ ಮಂಡಳಿಗೆ 24,878 ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಇದೇ ಮೊತ್ತವನ್ನು ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ […] - [ಕಲಬುರಗಿ| ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ](https://hikalaburagi.com/kalyana-karnataka/kalaburagi-news/3963/): ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ, ಇಂತಹ ಸಂದರ್ಭದಲ್ಲಿ ಮನುಷ್ಯ ತನ್ನ ಹಕ್ಕುಗಳನ್ನು ಮರೆತಿರುವನು ಎಂದು ಸೇಠ್ ಶಂಕರಲಾಲ್ ಲಾಹೋಟಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿಯರಾದ ಕರುಣಾ ಅವರು ಹೇಳಿದರು. ಮುಂದುವರೆದು ಹೆಚ್ಚುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು ಮತ್ತು ಸಾಂವಿಧಾನಿಕ ನಿಬಂಧನೆಗಳ ಬೆಳಕಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್ ಅವರು ಮಾನವ ಹಕ್ಕುಗಳ ಸಂರಕ್ಷಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗೀತಾ ಪಾಟೀಲ್ ಅವರು ಸ್ವಾಗತ ಮತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕವಿತಾ ಅಶೋಕ್ ಅವರು ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ದಿವ್ಯಾ ವಂದಿಸಿದರು. ಕಾರ್ಯಕ್ರಮದಲ್ಲಿ ಡಾ ನಾಗರತ್ನ, ಶಿವಲೀಲಾ ಧೋತ್ರೆ, ದಾನಮ್ಮ ಬಿರಾದಾರ್, ಬಸಮ್ಮ ಗೊಬ್ಬುರ, ಅಶ್ವಿನಿ ಮಠ, ಮೋಹ್ಸಿನ ಫಾತಿಮಾ ಇನ್ನಿತರರು ಮತ್ತು ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. - [ಕಲಬುರಗಿ| ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು; ಮೂವರು ಗಂಭೀರ](https://hikalaburagi.com/breaking-news/3960/): ಕಲಬುರಗಿ: ಜೀಪ್ ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿಯಿಂದ ಅಫಜಲಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಜೀಪ್ ನಲ್ಲಿದ್ದ ಅಫಜಲಪುರ ತಾಲೂಕಿನ ತೆಲ್ಲೋಣಿ ಗ್ರಾಮದ ಚಂದ್ರಕಾಂತ, ಸುಲೋಚನಾ ಚಂದ್ರಕಾಂತ ಹಾಗೂ ಮಿಟ್ಟುಸಾಬ ರಸೂಲ್ ಪಟೇಲ್ ಎಂಬಾತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಬಸ್ ನಲ್ಲಿದ್ದ ಗುರುದೇವಿ, ವಿಜಯಲಕ್ಷ್ಮಿ ಹಾಗೂ ಶ್ರೀಶೈಲ ಎಂಬುವವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಕಲಬುರಗಿ ನಗರದಲ್ಲಿರುವ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ. ಕಲಬುರಗಿಯಿಂದ ಅಫಜಲಪುರಕ್ಕೆ ಹೊರಟಿದ್ದ ಬಸ್‌ ಹಾಗೂ ಅಫಜಲಪುರದಿಂದ ಕಲಬುರಗಿಗೆ ಬರುತ್ತಿದ್ದ ಜೀಪ್ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಕಲಬುರಗಿ ಮಹಾನಗರ ಸಂಚಾರ ವಿಭಾಗದ ಎಸಿಪಿ ಸುಧಾ ಆದಿ, ಟ್ರಾಫಿಕ್ 1 ಠಾಣೆಯ ಇನ್ಸೆಕ್ಟರ್ ಶಕೀಲ್ ಅಂಗಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ […] - [ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಬಿ.ಫೌಜಿಯಾ ತರನ್ನುಮ್](https://hikalaburagi.com/kalyana-karnataka/kalaburagi-news/3958/): ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿಗೆ ನಿಗದಿಪಡಿಸಿದ ಗರಿಷ್ಠ ಕ್ವಿಂಟಾಲ್ ಮಿತಿ ಬದಲಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಈ ಹಿಂದೆ ಸರ್ಕಾರದ ಆದೇಶ ದಿ.25-09-2025 ಮತ್ತು 29-09-2025ರಲ್ಲಿ ಹೆಸರು ಕಾಳು ಪ್ರತಿ ಎಕರೆಗೆ 3 ಕ್ವಿಂಟಾಲ್‌ನಂತೆ ಪ್ರತಿ ರೈತನಿಂದ ಗರಿಷ್ಠ 15 ಕ್ವಿಂಟಾಲ್, ಉದ್ದು ಕಾಳು ಪ್ರತಿ ಎಕರೆಗೆ 5 ಕ್ವಿಂಟಾಲ್‌ನಂತೆ ಗರಿಷ್ಠ 30 ಕ್ವಿಂಟಾಲ್, ಸೂರ್ಯಕಾಂತಿ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಹಾಗೂ ಸೋಯಾಬೀನ್ ಪ್ರತಿ ಎಕರೆಗೆ 5 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿಗೆ ಆದೇಶಿಸಲಾಗಿತು. ಇದೀಗ ಸರ್ಕಾರ ಆದೇಶ ಮಾರ್ಪಡಿಸಿದ್ದು, ಅದರಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲಾಗುತ್ತಿದೆ […] - [ಕಲಬುರಗಿ| ಅಂಬೇಡ್ಕರ್ ರವರನ್ನು ನಿಜವಾಗಿಯೂ ಗೌರವಿಸಿದ್ದು ಬಿಜೆಪಿ, ಕಾಂಗ್ರೆಸ್ ಅಲ್ಲ: ಅಶೋಕ್ ಬಗಲಿ](https://hikalaburagi.com/kalyana-karnataka/kalaburagi-news/3955/): ಕಲಬುರಗಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪ ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ನಿಜವಾಗಿಯೂ ಗೌರವಿದ್ದು, ಅವರ ವಿಚಾರಗಳನ್ನು ಹೆಚ್ಚು ಪ್ರಚಾರ ಪಡಿಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯೇ ಹೊರತು ಕಾಂಗ್ರೆಸ್- ಕಮುನಿಷ್ಠರು ಪಕ್ಷ ಅಲ್ಲ ಎಂದು ಕಲಬುರಗಿ (ಗ್ರಾಮಾಂತರ) ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ್ ಬಗಲಿ ಹೇಳಿದರು. ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕಲಬುರಗಿ ನಗರದ ಜಗತ್ ಬಳಿಯಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಬಿಜೆಪಿ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇತ್ತೀಚೆಗೆ ಕಾಂಗ್ರೆಸ್ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಹಾಸ್ಯಾಸ್ಪದ ಅಂಬೇಡ್ಕರ್ ರವರಿಗೆ ಚುನಾವಣೆಯಲ್ಲಿ ಸೋಲಿಸಿದ್ದೆ ಕಾಂಗ್ರೆಸ್ ಆದರೆ ಈಗ ಅವರ ಬಗ್ಗೆ ಹಾಡಿ ಹೊಗಳುತ್ತಿದೆ ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಮತ್ತು ಅವರಿಗೆ ಸಂಬಂಧಿಸಿದಂತೆ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿ ಅಂಬೇಡ್ಕರ್ […] - [ಕಲಬುರಗಿ| ಚಾಂದ್ ಬೀಬೀ ಮಹಿಳಾ ಕಾಲೇಜಿನಲ್ಲಿ "ಭಾರತೀಯ ಸಂವಿಧಾನ ದಿನ" ಆಚರಣೆ](https://hikalaburagi.com/kalyana-karnataka/kalaburagi-news/3951/): ಕಲಬುರಗಿ: ನಗರದ ಚಾಂದ್ ಬೀಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ” ಭಾರತೀಯ ಸಂವಿಧಾನ ದಿನ” ವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ರುಕ್ಷಿಂದಾ ಹೀನಾ ಅಕ್ಬರಿ ಅವರು ಭಾರತರತ್ನ, ಸಂವಿಧಾನ ನಿರ್ಮಾತೃ ಡಾ. ಬಿ. ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ.ಶರಬಯ್ಯ ಸ್ವಾಮಿ ಮಾತನಾಡಿ, “ಭಾರತೀಯ ಸಂವಿಧಾನ ದಿನ” ವನ್ನು ಪ್ರತಿವರ್ಷ ನವೆಂಬರ್ 26ರಂದು ಆಚರಿಸಲಾಗುತ್ತದೆ. ಈ ದಿನ 1949 ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥವಾಗಿದೆ. ನಮ್ಮ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿ, ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುತ್ತದೆ. ಸಂವಿಧಾನದ ಮುಖ್ಯ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಅಪಾರ ಕೊಡುಗೆಯನ್ನು ಗೌರವಿಸುವ ದಿನವೂ ಇದಾಗಿದೆ ಎಂದರು. 2015 ರಲ್ಲಿ ಭಾರತ ಸರ್ಕಾರವು ನವೆಂಬರ್ 26 ಅನ್ನು ಅಧಿಕೃತವಾಗಿ “ಸಂವಿಧಾನ ದಿನ” ವೆಂದು ಘೋಷಿಸಿತು.ನಾವೆಲ್ಲರೂ ಈ ದಿನ ಸಂವಿಧಾನದ ಮೌಲ್ಯಗಳನ್ನು […] - [ಕಲಬುರಗಿ| ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆದ ಎಂಆರ್ಎಂಸಿ ವಿದ್ಯಾರ್ಥಿನಿಯರು](https://hikalaburagi.com/kalyana-karnataka/kalaburagi-news/3947/): ಕಲಬುರಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ ಇವರುಗಳು ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ಕಮ್ಯೂನಿಟಿ ಮೇಡಿಸಿನ್ ವಿಭಾಗದ ಮುಖ್ಯಸ್ಥರಾದ […] - [ಕಲಬುರಗಿ| ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ](https://hikalaburagi.com/kalyana-karnataka/kalaburagi-news/3944/): ಕಲಬುರಗಿ: ಸ್ವಾತಂತ್ರ ಪೂರ್ವ ಮುನುಷ್ಯರನ್ನು ಮನುಷ್ಯರ ರೀತಿಯಲ್ಲಿ ಕಾಣದ ಮತಾಂಧತೆ, ಜಾತಿಯತೆ, ಮೂಢನಂಬಿಕೆ, ಅಸ್ಪೃಶ್ಯತೆ ದೇಶದಲ್ಲಿ ತಾಂಡವಾಡುತ್ತಿತ್ತು. ಇಂತಹ ಎಲ್ಲಾ ಕಷ್ಟಗಳನ್ನು ಅನುಭವಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟ ಸಂವಿಧಾನ ಜಾರಿಯಾದ ಪರಿಣಾಮ ಇಂದು ದೇಶದಲ್ಲಿ ಜಾತಿ, ಧರ್ಮ, ವರ್ಣವಿಲ್ಲದೆ ಸರ್ವರು ಸಮಾನೆತಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು. ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಡಾ.ಎಸ್.ಎಂ.ಪoಡಿತ ರಂಗಮಂದಿರದಲ್ಲಿ ಆಯೋಜಿಸಿದ “ಸಂವಿಧಾನ ದಿನಾಚರಣೆ-2025” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಸ್ವಾತಂತ್ರ್ಯ ಪೂರ್ವ ಅಮೆರಿಕಾದಿಂದ ಬಂದ ಅಕ್ಕಿ ತಿನ್ನಬೇಕಿತ್ತು. ಸ್ವಾತಂತ್ರ‍್ಯ ಬಂದ ನಂತರ ದೇಶದ ಸಮಗ್ರ ಅಭಿವೃದ್ಧಿಗೆ ಮತ್ತು ಸರ್ವರ ಏಳಿಗೆಗೆ ಅಂಬೇಡರ್ ಅವರು ಸಂವಿಧಾನ ಎಂಬ ಮಹಾಗ್ರಂಥ ನೀಡಿದ ಫಲವಾಗಿ ಇಂದು ವಿಶ್ವಕ್ಕೆ ಆಹಾರ ಧಾನ್ಯ ನೀಡುವ ಸಾಮರ್ಥ್ಯ ನಮಗಿದೆ. ಬರಿ ಇಷ್ಟೆ ಅಲ್ಲ ವಿಶ್ವಕ್ಕೆ ಡಾಕ್ಟರ್, […] - [ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ](https://hikalaburagi.com/kalyana-karnataka/kalaburagi-news/3940/): ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದ ಲಿಪಿಕ/ ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕರುಗಳಾದ ಬಿ. ಸುರೇಶ, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಪುಂಡಲಿಕ ಟಿ.ಕೆ. ಶ್ಯಾಮ ಬಿದ್ರಿ, ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಕಾರಾಗೃಹ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು. - [ಕಲಬುರಗಿ| ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ: ಶೋಭಾದೇವಿ](https://hikalaburagi.com/kalyana-karnataka/kalaburagi-news/3936/): ಕಲಬುರಗಿ: ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು ಮತ್ತು ಕೊಬ್ಬುಗಳು: ಇವು ದೇಹದ ಕಾರ್ಯಚಟುವಟಿಕೆಗೆ ಪ್ರಮುಖವಾಗಿವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಬೀನ್ಸ್ ಮತ್ತು ದ್ವಿದಳ ಧಾನ್ಯಗಳಿಂದ ಉತ್ತಮ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ಪಡೆಯಬಹುದು. ಜೀವಸತ್ವಗಳು ಮತ್ತು ಖನಿಜಗಳು: ಇವು ದೇಹದಿಂದ ಉತ್ಪತ್ತಿಯಾಗುವುದಿಲ್ಲ, ಆದ್ದರಿಂದ ಆಹಾರದ ಮೂಲಕ ಪಡೆಯಬೇಕು. ಹಣ್ಣುಗಳು, ತರಕಾರಿಗಳು, ಹಾಲು ಮತ್ತು ಧಾನ್ಯಗಳಂತಹ ವಿವಿಧ ಆಹಾರಗಳಲ್ಲಿ ಇವು ಲಭ್ಯವಿವೆ ಎಂದು ತಿಳಿಸಿದರು. ಕಾರ್ಬೋಹೈಡ್ರೇಟ್‌ಗಳು, […] - [ಕಲಬುರಗಿ| ಭೀಕರ ರಸ್ತೆ ಅಪಘಾತ; ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು ](https://hikalaburagi.com/breaking-news/3928/): ಕಲಬುರಗಿ: ಜೇವರ್ಗಿ ತಾಲೂಕಿನ ಹೊರವಲಯದ ಗೌನಳ್ಳಿ ಕ್ರಾಸ್ ಹತ್ತಿರ ಇನೋವಾ ಕರ್ ರಸ್ತೆ ಪಕ್ಕದ ಡಿವೈಡರ್ ಗೇ ಡಿಕ್ಕಿ ಹೊಡೆದು ಸ್ಥಳದಲ್ಲೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ, ಸಹೋದರ ಶಂಕರ್ ಬೀಳಗಿ, ಈರಣ್ಣ ಈರಣ್ಣ ಶಿರಸಂಗಿ ಸಾವನಪ್ಪಿದ್ದಾರೆ. ಇನ್ನಿಬ್ಬರು ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕೆತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ಮದುವೆಗೆ ತೆರಳುವಾಗ ಈ ಘಟನೆ ನಡೆದಿದೆ. ಒಟ್ಟು ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದೂ ಅದರಲ್ಲಿ ಮೂವರು ಸಾವನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. - [ಕಲಬುರಗಿ| ಕೊಲೆಗೆ ಯತ್ನ ಆರೋಪ; ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಬಂಧನ](https://hikalaburagi.com/breaking-news/3924/): ಕಲಬುರಗಿ: ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಅವರನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯಾ ಎಂಬಾತರನ್ನು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಣಿಕಂಠ ರಾಠೋಡ್ ಅದೇ ಗ್ರಾಮದಲ್ಲಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬಳಿಕ ಗ್ರಾಮದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಲಾಗಿದೆ. ಬಳಿಕ ರಶೀದ್ ಮುತ್ಯಾ ಅಲ್ಲಿಂದ ಕಾರಿನ ಮೂಲಕ ಬೇರೆ ಕಡೆಗೆ ಹೋಗುತ್ತಿದ್ದ ವೇಳೆ ಕಾರಿಗೆ ಕಲ್ಲು ಹೊಡೆದಿದ್ದು, ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಕೊಲೆಗೆ ಯತ್ನಿಸಿರುವ ಆರೋಪದ ಮೇರೆಗೆ ಮಣಿಕಂಠ ರಾಠೋಡ್ ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಕಲಬುರಗಿ| ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು](https://hikalaburagi.com/breaking-news/3921/): ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಗುರುವಾರ ಬೆಳಗ್ಗೆ ನಡೆದಿದೆ. ಕಲಬುರಗಿ ತಾಲ್ಲೂಕಿನ ನದಿಸಿನ್ನೂರ್ ಗ್ರಾಮದ ನಿವಾಸಿ ಸತೀಶ್ ಕುಮಾರ್ ನಾಯ್ಕೋಡಿ(33) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಕಲಬುರಗಿಯಿಂದ ಗಾಣಗಾಪುರ ಕಡೆಗೆ ಹೋಗುತ್ತಿದ್ದ ಸತೀಶಕುಮಾರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆ – 1 ರಲ್ಲಿ ಪ್ರಕರಣ ದಾಖಲಾಗಿದೆ. - [ಕಲಬುರಗಿ| ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ವಿರುದ್ಧ ಜಾತಿ ನಿಂದನಾ ಕೇಸ್ ದಾಖಲು](https://hikalaburagi.com/cinema/3918/): ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದ ಮೇರೆಗೆ “ಕಾಮಿಡಿ ಖಿಲಾಡಿಗಳು” ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಇಲ್ಲಿನ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನಾ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭಂಡಾರಿ ಅವರ ದೂರಿನ ಮೇರೆಗೆ ಸಬ್ ಅರ್ಬನ್ ಠಾಣೆಯ ಪೊಲೀಸರು, ಎಸ್ಸಿ, ಎಸ್ಟಿ ಕಾಯ್ದೆಯ ಪ್ರಕಾರ ಜಾತಿ ನಿಂದನಾ ಕೇಸ್ ದಾಖಲಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಶೋಷಿತ ಸಮುದಾಯದ ಹೊಲೆಯ ಜಾತಿಗೆ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿ ವಿಕೃತಿ ಮೆರೆದಿದ್ದು, ನಯನಾ ಅವರು ಕೆಟ್ಟ ಪದಬಳಕೆ ಮಾಡಿರುವುದರಿಂದ ಅಪಮಾನವಾಗಿದೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದರು. - [ಕಲಬುರಗಿ| ಸಂಗಮೇಶ್ವರ ಆಸ್ಪತ್ರೆಯಲ್ಲಿ ವಿಶ್ವ ಪ್ರೀಮೆಚುರಿಟಿ ದಿನಾಚರಣೆ](https://hikalaburagi.com/kalyana-karnataka/kalaburagi-news/3915/): ಕಲಬುರಗಿ: ಅವಧಿಪೂರ್ವ ಜನನ ಸಂಬಂಧಿತ ಸಾವುಗಳು, ಸವಾಲುಗಳು ಮತ್ತು ಅವುಗಳನ್ನು ತಡೆಗಟ್ಟಲು ಕೈಗೆಟುಕುವ ಮಾರ್ಗಗಳು ಸೇರಿದಂತೆ ಅವಧಿಪೂರ್ವ ಜನನಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ನ.17 ರಂದು ವಿಶ್ವ ಅವಧಿಪೂರ್ವ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ ಎಂದು ಖ್ಯಾತ ಮಕ್ಕಳ ತಜ್ಞ ಡಾ ಕಿರಣ್ ಹೊಸ ಗೌಡ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಗಮೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ 2025 ನೇ ಸಾಲಿನ ಪ್ರೀಮಾಚುರಿಟಿ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಈ ದಿನದಂದು, ವಿಶ್ವ ಆರೋಗ್ಯ ಸಂಸ್ಥೆ ,ಪ್ಯಾನ್ ಅಮೇರಿಕನ್ ಆರೋಗ್ಯ ಸಂಸ್ಥೆ , ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಕ್ಕಳ ತುರ್ತು ನಿಧಿ ಮತ್ತು ಮಾರ್ಚ್ ಆಫ್ ಡೈಮ್ಸ್ ಸೇರಿದಂತೆ ವಿವಿಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು, ಆಸ್ಪತ್ರೆಗಳು, ಲಾಭರಹಿತ ಸಂಸ್ಥೆಗಳು ಮತ್ತು ಆರೋಗ್ಯ ವೃತ್ತಿಪರರು ಒಟ್ಟಾಗಿ ಚಟುವಟಿಕೆಗಳು ಮತ್ತು ವಿಶೇಷ ಕಾರ್ಯಕ್ರಮಗಳನ್ನು ನಡೆಸಿ ವಿಶ್ವಾದ್ಯಂತ ಅಕಾಲಿಕ ಜನನದ ತೊಂದರೆಗಳು ಮತ್ತು ಹೊರೆಗಳ ಬಗ್ಗೆ ಜಾಗೃತಿ […] - [ಕಲಬುರಗಿ| ವಿದ್ಯುತ್ ಕಂಬಕ್ಕೆ ಲೈನ್ ಮ್ಯಾನ್ ಆತ್ಮಹತ್ಯೆ; ಅಧಿಕಾರಿಗಳ ಕಿರುಕುಳ ಆರೋಪ](https://hikalaburagi.com/breaking-news/3912/): ಕಲಬುರಗಿ: ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಲೈನ್ ಮ್ಯಾನ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಬಸವಪಟ್ಟಣ ಗ್ರಾಮದ ನಿವಾಸಿ ಪರಮೇಶ್ವರ ಚೊಬಚಿ, ಅದೇ ಗ್ರಾಮದ ಜಮೀನಿನಿಂದರ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ ಎಂದು ಆರೋಪಿಸಲಾಗಿದೆ. ಘಟನೆ ಫರಹತಾಬಾದ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. - [ಕಲಬುರಗಿ| ವರ್ಣಕಲಾಶ್ರಿ ಪ್ರಶಸ್ತಿಗೆ ಕಲಾವಿದ ರೆಹಮಾನ್ ಪಟೇಲ್ ಆಯ್ಕೆ](https://hikalaburagi.com/kalyana-karnataka/kalaburagi-news/3908/): ಕಲಬುರಗಿ: ಬೆಳಗಾವಿ ಆಧಾರಿತ ವರ್ಣಕಲಾ ಸಂಸ್ಕೃತಿಕ ಸಂಘವು 2024–25ರ ವರ್ಣಕಲಾಶ್ರಿ ಪ್ರಶಸ್ತಿಗೆ ಇಲ್ಲಿನ ಖ್ಯಾತ ಚಿತ್ರಕಲಾವಿದ ರೆಹಮಾನ್ ಪಟೇಲ್ ಅವರನ್ನು ಆಯ್ಕೆ ಮಾಡಿದೆ. ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಸುರಪುರ ಪರಂಪರೆಯ ಕಲೆಯನ್ನು ಪುನರುಜ್ಜೀವನಗೊಳಿಸಿ, ಅದನ್ನು ಪೋಷಿಸಿ ಬೆಳೆಸಿದ ರೆಹಮಾನ್ ಪಟೇಲ್ ಅವರ ಸಮರ್ಪಣೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ನವೆಂಬರ್ 23ರಂದು ಕಲಾಮಹರ್ಷಿ ಕೆ.ಬಿ. ಕುಲಕರ್ಣಿ ಕಲಾ ಗ್ಯಾಲರಿ, ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರವಿ ಭಜನತ್ರಿ, ಬಿಇಒ, ಶಾಲಾ ಶಿಕ್ಷಣ ಇಲಾಖೆ, ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಖ್ಯಾತ ಕಲಾವಿದ ಪಿ.ಎಸ್. ಕಡೆಯಮಣಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವರ್ಣಕಲಾ ಸಂಸ್ಕೃತಿಕ ಸಂಘದ ಅಧ್ಯಕ್ಷ ನಾಗೇಶ್ ಸಿ. ಚಿಮರೋಳ ಅವರು ಅಧ್ಯಕ್ಷತೆ ವಹಿಸಲಿದ್ದು, ಖ್ಯಾತ ಕಲಾವಿದರು ದಿಲೀಪ್‌ಕುಮಾರ್  ಕಾಳೆ ಮತ್ತು ಆರ್.ಎ. ದೇವರುಷಿ ಅವರು […] - [ಕಲಬುರಗಿ| ಜಿಲ್ಲೆಗೆ 250.97 ಕೋಟಿ ರೂ. ಅತಿವೃಷ್ಠಿ ಹಾನಿಯ ಪರಿಹಾರ ಮಂಜೂರು: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ](https://hikalaburagi.com/breaking-news/3905/): ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರ್ಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ‌ ರೈತರಿಗೆ 250.97 ಕೋಟಿ ರೂ. ಪರಿಹಾರ ಮಂಜೂರಾತಿ ನೀಡಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ಅಪಾರ‌ ಪ್ರಮಾಣದ‌ಲ್ಲಿ ಬಿದ್ದ ಮಳೆಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ,‌ ತೋಟಗಾರಿಕೆ ಪ್ರದೇಶ ಹಾನಿಯಾಗಿದ್ದಕ್ಕೆ ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸರ್ಕಾರ ಪರಿಹಾರ ತಂತ್ರಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ದತ್ತಾಂಶದನ್ವಯ ಮೊದಲನೆ ಹಂತದಲ್ಲಿ SDRF/NDRF ಮಾರ್ಗಸೂಚಿಯನ್ವಯ ಜಿಲ್ಲೆಯ 3,26,183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂ. ಹಣ ಮಂಜೂರಾತಿ ನೀಡಲಾಗಿದ್ದು, ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂದಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನಗಳಲ್ಲಿ ಪರಿಹಾರ ಹಣ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. - [ಕಲಬುರಗಿ| ಚಿತ್ತಾಪುರನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥ ಸಂಚಲನ](https://hikalaburagi.com/kalyana-karnataka/kalaburagi-news/3899/): ಕಲಬುರಗಿ: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾದ ಆರೆಸ್ಸೆಸ್ ಪಥ ಸಂಚಲನಕ್ಕೆ ಹೈಕೋರ್ಟ್ ನ.16 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ವರೆಗೆ ಪಥಸಂಚಲನ ಹಾಗೂ ಕಾರ್ಯಕ್ರಮಕ್ಕೆ ಷರತ್ತು ವಿಧಿಸಿ ಅನುಮತಿ ನೀಡಿರುವ ಹಿನ್ನೆಲೆ ಚಿತ್ತಾಪುರ ಪಟ್ಟಣದಲ್ಲಿ ರವಿವಾರ ಪೊಲೀಸರ ಸೂಕ್ತ ಬಂದೋಬಸ್ತ್ ಮಧ್ಯೆ ಪಥಸಂಚಲನ ನಡೆಯಲಿದೆ. ರಾಜ್ಯಾದ್ಯಂತ ಸರ್ಕಾರಿ ಶಾಲಾ ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ಹೇರಿರುವ ನಡುವೆ ಆರೆಸ್ಸೆಸ್ ಮುಖಂಡರು ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರ ಚಿತ್ತಾಪುರದಲ್ಲಿ ನ.16 ರಂದು ಆರೆಸ್ಸೆಸ್ ಪಥಸಂಚಲನಕ್ಕೆ ಸರ್ವ ಸಿದ್ದತೆಗಳು ನಡೆದಿದ್ದು, ಇದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದೇ ರೀತಿ ಅ.19ರಂದು ನಡೆಯಬೇಕಿದ್ದ ಆರೆಸ್ಸೆಸ್ ಪಥಸಂಚಲನಕ್ಕೆ ಕಾನೂನು ಸುವ್ಯವಸ್ಥೆ ಕಾರಣ ನೀಡಿ ಚಿತ್ತಾಪುರ […] - [ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ](https://hikalaburagi.com/kalyana-karnataka/kalaburagi-news/3896/): ಕಲಬುರಗಿ: ಕಲಬುರಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಮತ್ತು ವಿಚಾರಣಾ ಬಂದಿಗಳಿಗಾಗಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ಶುಕ್ರವಾರ ಉದ್ಘಾಟಿಸಿದರು. ನಂತರ ಅವರು ಮಾತನಾಡಿದ ಅವರು, ಕಾನೂನು ಸೇವಾ ಪ್ರಾಧಿಕಾರವು 1987ರಲ್ಲಿ ಪ್ರಾರಂಭವಾಗಿದ್ದು, ಅಂದಿನಿಂದ ಜಿಲ್ಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಪ್ರಾರಂಭಿಸಲಾಯಿತು. ಪ್ರತಿಯೊಬ್ಬರಿಗೂ ನ್ಯಾಯವನ್ನು ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಮೂಲ ಉದ್ದೇಶವಾಗಿದೆ. ಇದಲ್ಲದೇ ಪ್ರಾಧಿಕಾರವು ಅರ್ಥಿಕವಾಗಿ ದುರ್ಬಲ ಹೊಂದಿದ ಬಂದಿಗಳಿಗೆ ಉಚಿತವಾಗಿ ವಕೀಲರನ್ನು ನೇಮಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ನಿಯಮಿತವಾಗಿ ಶ್ರಮಿಸುತ್ತಿದೆ ಎಂದರು.   ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಸಂಸ್ಥೆಯ ಮುಖ್ಯ ಅಧೀಕ್ಷಕರಾದ ಡಾ|| ಅನಿತಾ ಆರ್. ಅವರು ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಾರಾಗೃಹ ಇಲಾಖೆಗೆ ಸಕರಾತ್ಮಕ ಸ್ಪಂದನೆ ಮತ್ತು ಸಲಹೆ ಸೂಚನೆಗಳನ್ನು ನಿಯಮಿತವಾಗಿ ನೀಡುತ್ತಿರುವುದರಿಂದ ಬಂದಿಗಳಿಗೆ ನ್ಯಾಯವನ್ನು […] - [ಕಲಬುರಗಿ| ಕಬ್ಬಿನ ದರ ನಿಗದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ](https://hikalaburagi.com/kalyana-karnataka/kalaburagi-news/3893/): ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು. ನವೆಂಬರ್ 7 ರಂದು ಮಾನ್ಯ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಮಾನ್ಯ ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು. ಆಗ ಉತ್ತರಿಸಿದ ಸಚಿವರು, ಸರಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು, ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು. ## Pages - [Homepage - mobile](https://hikalaburagi.com/homepage-mobile/) - [HiKalaburagi News](https://hikalaburagi.com/) - [Mega Menu](https://hikalaburagi.com/mega-menu/) - [Plans](https://hikalaburagi.com/plans/) - [TDS Create Account Page - DEMO week_pro](https://hikalaburagi.com/tds-create-account-page-demo-week_pro/) - [TDS My Account Page - DEMO week_pro](https://hikalaburagi.com/tds-my-account-page-demo-week_pro/) - [TDS Payment Page - DEMO week_pro](https://hikalaburagi.com/tds-payment-page-demo-week_pro/) [comment]: # (Generated by Hostinger Tools Plugin)