ಕಲಬುರಗಿ| ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಮನವಿ

Date:

Share post:

ಕಲಬುರಗಿ: ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಕಲಬುರಗಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಎಲ್ಲ ರೀತಿಯ ಕ್ರೀಡೆಗಳಿಗೆ ಅಗತ್ಯವಿರುವ ಸೌಲಭ್ಯಗಳೊಂದಿಗೆ ಕ್ರೀಡಾ ಗ್ರಾಮ ಅಥವಾ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ ಧರ್ಮಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ಜಿಲ್ಲೆಯಲ್ಲಿ ಮೂಲಭೂತ ಕ್ರೀಡಾ ಸೌಕರ್ಯಗಳ ಕೊರತೆಯಿದ್ದು, ಜಿಲ್ಲೆಯಲ್ಲಿ ಕೂಡಲೇ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಲಬುರಗಿಗೆ ಕ್ರೀಡಾ ವಿಕಾಸದಲ್ಲಿ ಅನ್ಯಾಯವಾಗುತ್ತಿದೆ. ರಾಜ್ಯದ ಇತರೆ ನಗರಗಳಲ್ಲಿ ಕ್ರೀಡಾಂಗಣ ನಿರ್ಮಾಣವಾಗಿದ್ದರೂ ಕಲಬುರಗಿಗೆ ಮಾತ್ರ ಮಲತಾಯಿ ಧೋರಣೆ ತೋರಲಾಗಿದೆ. ಇದು ಪ್ರಾದೇಶಿಕ ಅಸಮತೋಲನಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಿಂದ 50 ಎಕರೆ ಜಮೀನು ನೀಡಲು ಒಪ್ಪಿಗೆಯಿದ್ದು, ಅದೇ ಜಾಗ ಅಥವಾ ಬೇರೆ ಸ್ಥಳದಲ್ಲಿ 100 ಎಕರೆ ಪ್ರದೇಶವನ್ನು ಮೀಸಲಿಡಬೇಕು, ಕೆಕೆಆರ್‌ಡಿಬಿಯಿಂದ ಅನುದಾನ ನೀಡಲು ಸಿದ್ಧತೆ ಇರುವುದರಿಂದ ಯೋಜನೆಗೆ ತಕ್ಷಣ ಚಾಲನೆ ನೀಡಬೇಕು, ಕ್ರೀಡಾಂಗಣ ನಿರ್ಮಾಣದ ಜವಾಬ್ದಾರಿಯನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೀಡಬೇಕು, ಹಾಗೂ ರಣಜಿ ಪಂದ್ಯಗಳ ಆಯೋಜನೆ ಸಾಧ್ಯವಾಗುವಂತೆ ಮೈದಾನ ನಿರ್ಮಿಸಬೇಕು. ಅಲ್ಲದೆ, ಇತರೆ ಕ್ರೀಡೆಗಳಿಗೆ ಬೇಕಾದ ವಿಶ್ವಮಟ್ಟದ ಸೌಲಭ್ಯಗಳನ್ನು ಒಳಗೊಂಡ ಕ್ರೀಡಾ ಸಂಕೀರ್ಣ ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್. ನಡಗೇರಿ, ಮುಖಂಡರಾದ ಜೈಭೀಮ ಮಾಳಗೆ, ಮೋಹನ ಸಾಗರ, ಮಲ್ಲು ಸಂಕನ, ದೇವು ದೊರೆ, ದತ್ತು ಜಮಾದಾರ, ರೋಹನ ನಿಂಬಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...